ಹರ್ಷ ಕೊಲೆಗೆ ಈಶ್ವರಪ್ಪ ಕಾರಣ ಎಂದವರ ವಿರುದ್ಧ ಎಫ್.ಐ.ಆರ್.

ಪ್ರವಾದಿ ನಿಂದನೆಗೆ ಪ್ರತೀಕಾರ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಮರ್ಥಿಸಿ ಪೋಸ್ಟ್, ವ್ಯಕ್ತಿ ವಿರುದ್ಧ ಎಫ್ಐಆರ್

ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ಧ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ಧ ಸಿಇಎನ್(ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ ಕ್ರೈಮ್ಸ್) ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಮಂಗಳೂರು ಮುಸ್ಲಿಮ್ಸ್’ ಎಂಬ ಫೇಸ್ ಬುಕ್ ಪೇಜ್ ಹಾಗೂ ಮೊಹಮ್ಮದ್ ಶಫೀಕ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2015ರಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದ ಆರೋಪದ ಪ್ರತೀಕಾರವಾಗಿ ಹರ್ಷನ ಹತ್ಯೆಯನ್ನು ನಡೆಸಲಾಗಿದೆ ಎಂದು ಆರೋಪಿಗಳು ಸಮರ್ಥಿಸಿಕೊಂಡಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ. ಅಲ್ಲದೆ, ಪ್ರವಾದಿಯನ್ನು ನಿಂದಿಸುವ ಯಾರನ್ನೂ ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಬಿಡುವುದಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ. ಹರ್ಷ ಹತ್ಯೆಗೆ ಆರ್‌ಡಿಪಿಆರ್ ಸಚಿವರೇ ಕಾರಣ ಎಂದು ಆರೋಪಿಸಿದೆ.

ಹಿಂದೂ-ಮುಸ್ಲಿಂರ ನಡುವೆ ದ್ವೇಷವನ್ನು ಹರಡುವ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸುವ ಸಲುವಾಗಿ ಹಿಂದುತ್ವ ಸಂಘಟನೆಗಳು ಮತ್ತು ಹಿಂದೂ ರಾಜಕೀಯ ನಾಯಕರ ವಿರುದ್ಧ ಪದೇ ಪದೇ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡುತ್ತಿರುವುದು ಮಂಗಳೂರು ಮುಸ್ಲಿಂ ಪೇಜ್‌ನಲ್ಲಿ ಕಂಡುಬಂದಿದೆ ಎಂದು ಎಫ್‌ಐಆರ್ ಹೇಳಿದೆ. 

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೊಹಮ್ಮದ್ ಶಫೀದ್ ಸಾಮಾಜಿಕ ಮಾಧ್ಯಮದಲ್ಲಿ ಇತರ ಗುಂಪುಗಳೊಂದಿಗೆ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ವಿವಿಧ ವಿಭಾಗಗಳು ಮತ್ತು ಐಪಿಸಿಯ 153 (ಎ), 505 (1) (ಬಿ), 505 (1) (ಸಿ) ಮತ್ತು 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಏತನ್ಮಧ್ಯೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವ ಮತ್ತು ಹಂಚಿಕೊಳ್ಳುವ 1604 ಸಾಮಾಜಿಕ ಮಾಧ್ಯಮ ಖಾತೆಗಳ ಮೇಲೆ ತೀವ್ರ ನಿಗಾ ಇರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ. ಅಂತಹ ವಿಷಯಗಳನ್ನು ಪೋಸ್ಟ್ ಮಾಡುವುದನ್ನು ತಡೆಯಲು ಅವರು ಜನರಿಗೆ ಮನವಿ ಮಾಡಿದರು. ಅದು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ಎಂದು ಅವರು ಎಚ್ಚರಿಸಿದರು.‌ (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!

ಸಿದ್ಧಾಪುರದ ವಿಚಾರಗಳು ಈಗ ಜಿಲ್ಲೆಯ ಗಮನ ಸೆಳೆಯುತ್ತಿವೆ. ಮೂವತ್ತು ವರ್ಷಗಳಿಂದ ನೇಪಥ್ಯದಲ್ಲಿದ್ದ ಸಿದ್ಧಾಪುರ ಮತ್ತೆ ಸೌಂಡು ಮಾಡುತ್ತಿದೆಯೊ? ಅಥವಾ ತಟ್ಟಿ ಬಡಿದು ಹುಲಿ ಹೆದರಿಸುವ...

BSYಗಾಗಿ CID ಹುಡುಕಾಟ!

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್, BSYಗಾಗಿ CID ಹುಡುಕಾಟ! ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್...

ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು! ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ...

ಜೂನ್‌ ೨೩ ಕ್ಕೆ ಮತ್ತೆ neet ಪರೀಕ್ಷೆ ….

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024...

ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…

ಮುಖ್ಯಮಂತ್ರಿ, ರಾಜ್ಯಪಾಲ, ‌ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *