ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ: ಒಬ್ಬ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಹಿಂದೂ ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Murdered activist Harsha (File photo)

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ 23 ವರ್ಷದ ಯುವಕ ಹರ್ಷನ ಕೊಲೆ ಪ್ರಕರಣದದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈತನ ಬಂಧನ ಮೂಲಕ ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ, ಕೊಲೆಗೂ ಹಿಜಾಬ್ ವಿವಾದಕ್ಕೂ ಏನಾದರೂ ಸಂಬಂಧ ಇದೆಯೇ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಒಬ್ಬ ಆರೋಪಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ನಿನ್ನೆ ರಾತ್ರಿ ಕಾರಿನಲ್ಲಿ ಬಂದು ಕೊಲೆ ಮಾಡಿ ಆಟೋದಲ್ಲಿ ಪರಾರಿಯಾಗಿದ್ದರು.

ಇಂದು ಬೆಳಗ್ಗೆ ಹರ್ಷನ ಶವ ಇರುವ ಮೆಗ್ಗಾಂವ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಕೊಲೆ ಆರೋಪಿಗಳ ಸುಳಿವು ಸಿಕ್ಕಿದ್ದು, ಕೂಡಲೇ ಬಂಧಿಸಲಾಗುವುದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಜನರು ಶಾಂತರೀತಿಯಿಂದ ವರ್ತಿಸಬೇಕೆಂದು ಕೋರಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *