ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ನೀಡಿದ ಪತ್ರದಲ್ಲೇನಿದೆ? & ಈಶ್ವರಪ್ಪ ರಾಜಭವನಕ್ಕೆ ದೌಡಾಯಿಸಿದ್ದೇಕೆ?

Thumbnail image

ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ನೀಡಿದ ಪತ್ರದಲ್ಲೇನಿದೆ?

ಕಾಂಗ್ರೆಸ್ ನಿಯೋಗ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಈಶ್ವರಪ್ಪ ಅವರನ್ನು ವಜಾಮಾಡುವಂತೆ ನೀಡಿದ ಪತ್ರದಲ್ಲಿ ಯಾವೆಲ್ಲಾ ಅಂಶಗಳಿವೆ.

ಬೆಂಗಳೂರು: ಸಂವಿಧಾನ ಬದ್ಧವಾಗಿ ನಿಮ್ಮಿಂದ ಪ್ರಮಾಣ ವಚನ ಬೋಧಿಸಿಕೊಂಡು ಅಧಿಕಾರ ಸ್ವೀಕಾರ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಮತ್ತು ಶಿವಮೊಗ್ಗದಲ್ಲಿ ನಡೆದ ಸರ್ಕಾರಿ ಪ್ರಾಯೋಜಿತ ಶವದ ಮೆರವಣಿಗೆ ಮತ್ತು ದಾಂಧಲೆಗಳ ಕುರಿತಂತೆ ನ್ಯಾಯಾಂಗ ತನಿಖೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ರಾಜ್ಯಪಾಲರನ್ನು ಒತ್ತಾಯಿಸಿದೆ.

ಕಾಂಗ್ರೆಸ್ ನಿಯೋಗ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು

ಇಂದು ವಿಧಾನಸೌಧದಿಂದ ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ಕಾಂಗ್ರೆಸ್​ ನಾಯಕರು ಮನವಿ ಸಲ್ಲಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ , ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್ ನೇತೃತ್ವದ ಕಾಂಗ್ರೆಸ್ ಶಾಸಕರ ನಿಯೋಗ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಸಂವಿಧಾನದ ಪರಿಚ್ಛೇದ 51-ಎ ರಲ್ಲಿ ವಿವರಿಸಲಾಗಿರುವ ಮೂಲಭೂತ ಕರ್ತವ್ಯಗಳಲ್ಲಿ ಪ್ರಾಥಮಿಕವಾಗಿ ಪ್ರತಿಯೊಬ್ಬ ಭಾರತೀಯ ನಾಗರಿಕನೂ/ ಪ್ರಜೆಯೂ ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸಬೇಕು ಎಂದು ಹೇಳಿದೆ ಎಂಬ ಅಂಶವನ್ನು ಉಲ್ಲೇಖಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಯೂನಿಯನ್ ಆಫ್ ಇಂಡಿಯಾ ವಿರುದ್ಧ ನವೀನ್ ಜಿಂದಾಲ್ ಮತ್ತು ವಿ.ಕೆ.ನಸ್ವಾ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣಗಳಲ್ಲಿ ರಾಷ್ಟ್ರಧ್ವಜಕ್ಕೆ ಸಲ್ಲಿಸಬೇಕಾದ ಗೌರವ ಕುರಿತಾಗಿ ಸುಪ್ರೀಂಕೋರ್ಟ್ ವಿವರಿಸಿದೆ. ಈ ಎರಡೂ ಪ್ರಕರಣಗಳ ಸಾರಾಂಶ ಎಂದರೆ ಫ್ಲಾಗ್ ಕೋಡ್-2002 ರಲ್ಲಿ ಅಡಕಗೊಂಡಿರುವ ಕಾಯ್ದೆಗಳ ಪ್ರಕಾರ ರಾಷ್ಟ್ರಧ್ವಜಕ್ಕೆ ವರ್ತನೆ, ಮಾತು ಅಥವಾ ಇತರ ಯಾವುದೇ ರೀತಿಯಲ್ಲಿ ಅಗೌರವ ಸಲ್ಲಿಸುವುದು ಕಾನೂನಿನ ಪ್ರಕಾರ ಅಪರಾಧ. ಅಂತಹ ಅಗೌರವ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅವಕಾಶವಿದೆ ಎಂದು ತಿಳಿಸಿದೆ.

ಸಂಪೂರ್ಣ ವಿವರ ಲಗತ್ತಿಸಿರುವ ಕಾಂಗ್ರೆಸ್​ ನಾಯಕರು: ಪ್ರಕರಣದ ಸಂಪೂರ್ಣ ವಿವರ ಹಾಗೂ ದಾಖಲೆಗಳನ್ನು ಲಗತ್ತಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವ ಕಾಂಗ್ರೆಸ್ ನಾಯಕರು, ಈ ಕಾರಣಕ್ಕೇ ನಾವು ಬಹಳ ಗಂಭೀರವಾದ ಈ ಸಂಗತಿಯ ಬಗ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್​ನಲ್ಲಿ ಚರ್ಚಿಸಲು ನಿಲುವಳಿ ಸೂಚನೆಯನ್ನು ನೀಡಿದೆವು.

ಆದರೆ, ವಿಧಾನಸಭೆಯಲ್ಲಿ ನೀಡಲಾದ ನಿಲುವಳಿ ಸೂಚನೆಯನ್ನು ಏಕ ಪಕ್ಷೀಯವಾಗಿ ತಿರಸ್ಕರಿಸಲಾಯಿತು. ವಿಧಾನ ಪರಿಷತ್​ನಲ್ಲಿ ಸಭಾಪತಿಗಳು ಸುದೀರ್ಘ ಚರ್ಚೆಗೆ ಅವಕಾಶ ಕೊಟ್ಟರು. ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಇಲ್ಲದಂತೆ ಮಾಡಿದರೆ, ವಿಧಾನ ಪರಿಷತ್ನಲ್ಲಿ ಚರ್ಚೆ ಆದರೂ ಕೂಡ ಸಚಿವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಯಿತು.

ಸಚಿವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಸಚಿವರಾದ ಈಶ್ವರಪ್ಪನವರ ಮೇಲೆ ರಾಜ್ಯ ಸರ್ಕಾರ ಯಾವುದೇ ಕ್ರಮ ಜರುಗಿಸಲಿಲ್ಲ. ಕಾನೂನಿನ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಿಲ್ಲ. ಆದ್ದರಿಂದ ಈ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವರಾದ ಈಶ್ವರಪ್ಪನವರ ಮೇಲೆ ಈ ಕೂಡಲೆ ರಾಷ್ಟ್ರ ದ್ರೋಹದ ಪ್ರಕರಣವನ್ನು ದಾಖಲಿಸಬೇಕು.

ಸಚಿವ ಸ್ಥಾನದಿಂದ ಈಶ್ವರಪ್ಪ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ನಾವು ಎರಡೂ ಸದನಗಳಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದೆವು. ಆದರೂ ರಾಜ್ಯ ಸರ್ಕಾರವಾಗಲೀ, ಭಾರತೀಯ ಜನತಾ ಪಕ್ಷವಾಗಲೀ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕ್ರಮ ಜರುಗಿಸಲಿಲ್ಲ. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಿಲ್ಲ. ಬದಲಿಗೆ ಸಚಿವ ಈಶ್ವರಪ್ಪ ಅವರನ್ನು ಬೆಂಬಲಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಈಶ್ವರಪ್ಪ ಹೇಳಿಕೆಯನ್ನ ಅವರ ಪಕ್ಷದ ರಾಷ್ಟ್ರಾಧ್ಯಕ್ಷರೇ ಖಂಡಿಸಿದ್ದಾರೆ: ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆ.ಪಿ.ನಡ್ಡಾ ಅವರೂ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ರಾಷ್ಟ್ರಧ್ವಜ ಕುರಿತಾದ ಹೇಳಿಕೆಯನ್ನು ಖಂಡಿಸಿದ್ದಾರೆ. ಅದೊಂದು ಬೇಜವಾಬ್ದಾರಿತನದ ಹೇಳಿಕೆ ಎಂದಿದ್ದಾರೆ. ಜತೆಗೆ ಇದೇ ಹೇಳಿಕೆಗಾಗಿ ಜೆ.ಪಿ.ನಡ್ಡಾ ಅವರು ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಛೀಮಾರಿ ಹಾಕಿದ್ದಾಗಿಯೂ ಮಾಧ್ಯಮಗಳು ವರದಿ ಮಾಡಿವೆ.

ಆದರೂ ಇದುವರೆಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಮುಖಂಡರಾಗಲೀ, ರಾಜ್ಯ ಮುಖಂಡರಾಗಲೀ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿಲ್ಲ. ಈ ಎಲ್ಲ ಕಾರಣಗಳಿಂದ ನಾವು ಕಾರ್ಯಾಂಗದ ಮುಖ್ಯಸ್ಥರಾದ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ನೀಡಲು ನಿರ್ಧರಿಸಿದೆವು. ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಷ್ಟ್ರದ್ರೋಹಿ ಮತ್ತು ಸಂವಿಧಾನ ವಿರೋಧಿ ಹೇಳಿಕೆಯ ಕಾರಣಕ್ಕೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲು ಸರ್ಕಾರಕ್ಕೆ ಸೂಚಿಸಬೇಕು.

ಅಗತ್ಯ ಸೆಕ್ಷನ್ಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಮಾತ್ರವಲ್ಲದೇ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಸಂಬಂಧಪಟ್ಟ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇವೆ.

ನಮ್ಮ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಘನತೆ, ಗೌರವ, ಸ್ವಾಭಿಮಾನ ಕಾಪಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ನೀವು ಮುಂದಾಗುತ್ತೀರಿ ಎನ್ನುವ ನಮ್ಮ ನಂಬಿಕೆಯನ್ನು ನೀವು ಸುಳ್ಳಾಗಿಸುವುದಿಲ್ಲ ಎಂದು ನಂಬಿದ್ದೇವೆ ಎಂದಿದೆ.

ಲಿಖಿತ ಅಷ್ಟೇ ಅಲ್ಲ ಮೌಖಿಕವಾಗಿಯೂ ವಿವರಣೆ ನೀಡಿದ ರಾಜ್ಯಪಾಲರು: ರಾಜ್ಯಪಾಲರಿಗೆ ಈ ಬಗ್ಗೆ ಲಿಖಿತ ಮನವಿ ಸಲ್ಲಿಸಿದ್ದು ಮಾತ್ರವಲ್ಲದೇ ಈ ವೇಳೆ, ಶಿವಮೊಗ್ಗದಲ್ಲಿ ಸ್ವತಃ ಈಶ್ವರಪ್ಪ ಅವರು ತಮ್ಮ ಮುಂದಾಳತ್ವದಲ್ಲೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಉದ್ರಿಕ್ತ ಗುಂಪುಗಳಿಗೆ ಪ್ರಚೋದನೆ ನೀಡಿದ್ದನ್ನೂ ಮೌಖಿಕವಾಗಿ ವಿವರಿಸಲಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸ್ವತಃ ಸಚಿವ ಈಶ್ವರಪ್ಪ ಅವರು ತಾವೇ ಮುಂದಾಳತ್ವ ವಹಿಸಿ ಶವದ ಮೆರವಣಿಗೆ ಮಾಡಿಸಿದ್ದಾರೆ.

ಇವರ ಮುಂದಾಳತ್ವದ ಮೆರವಣಿಗೆಯಲ್ಲೇ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಾಕಿದ್ದು ಮಾತ್ರವಲ್ಲದೆ ಮನೆಗಳಿಗೆ ನುಗ್ಗಿ ಒಂದು ಸಮುದಾಯದವರನ್ನೇ ಗುರಿ ಮಾಡಿ ಹಲ್ಲೆ ನಡೆಸಿದ್ದಲ್ಲದೆ ಭೀತಿಯ ವಾತಾವರಣ ಸೃಷ್ಟಿಸಿದ್ದರು. ಇಷ್ಟೆಲ್ಲಾ ಆದರೂ ಘಟನೆ ನಡೆದ ದಿನ ಪೊಲೀಸರು ಮೂಖ ಪ್ರೇಕ್ಷಕರಾಗಿದ್ದರು. ಘಟನೆ ನಡೆದ ದಿನ ಘಟನೆ ಕುರಿತಾಗಿ ಒಂದೇ ಒಂದು ಎಫ್ಐಆರ್ ಕೂಡ ದಾಖಲಾಗಿರಲಿಲ್ಲ. ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡದಂತೆ ಅವರ ಮೇಲೆ ಒತ್ತಡ ಹೇರಿ ಇಡೀ ಶಿವಮೊಗ್ಗದ ಜನ ಭೀತಿಯಲ್ಲಿ ದಿನ ಕಳೆಯುವಂತೆ ಮಾಡಿದ್ದಾರೆ ಎಂದು ವಿಚಾರವನ್ನು ಸಹ ವಿವರಿಸಲಾಗಿದೆ. (etbk)

“ರಾಜ್ಯಪಾಲರು ಬುಲಾವ್ ನೀಡಿಲ್ಲ; ನಾನೇ ಭೇಟಿಯಾಗಿದ್ದೇನೆ”: ಸಚಿವ ಈಶ್ವರಪ್ಪ

ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿಚಾರ ರಾಜ್ಯಪಾಲರ ಅಂಗಳಕ್ಕೆ ಬಂದು ತಲುಪಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ಅವರನ್ನು ವಜಾ ಮಾಡುವಂತೆ…

Eshwarappa

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿಚಾರ ರಾಜ್ಯಪಾಲರ ಅಂಗಳಕ್ಕೆ ಬಂದು ತಲುಪಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ಅವರನ್ನು ವಜಾ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಿಯೋಗ ಭೇಟಿಗೂ ಮುನ್ನವೇ ಸಚಿವ ಈಶ್ವರಪ್ಪ ಸಹ ರಾಜ್ಯಪಾಲರನ್ನು ಭೇಟಿ ಮಾಡಿದ್ದರು.

ಯಾವ ಉದ್ದೇಶಕ್ಕಾಗಿ ರಾಜ್ಯಪಾಲರನ್ನು ಭೇಟಿ ಮಾಡಲಾಗಿತ್ತು ಅನ್ನೋ ಬಗ್ಗೆ ಕೆ.ಎಸ್.ಈಶ್ವರಪ್ಪ ಸುದ್ದಿ ಮಾಧ್ಯಮದವರೊಂದಿಗೆ ಹಂಚಿಕೊಂಡರು. ಕೆ.ಎಸ್ ಈಶ್ವರಪ್ಪಗೆ ರಾಜ್ಯಪಾಲರು ಬುಲಾವ್ ಅಂತ ಟಿವಿಯಲ್ಲಿ ಬಂದಿದೆ. ರಾಜ್ಯಪಾಲರು ನಮಗೆ ಬುಲಾವ್ ಮಾಡಿಲ್ಲ ನಾನು ಬಂದಿದ್ದು. ಅಪಾಯಿಂಟ್ ಮೆಂಟ್ ನಾನೇ ಫಿಕ್ಸ್ ಮಾಡಿದ್ದು, ರಾಜ್ಯಪಾಲರು ನನ್ನ ಕರೆದಿಲ್ಲ ಎಂಬ ಸ್ಪಷ್ಟೀಕರಣ ನೀಡಿದರು.

ರಾಜ್ಯಪಾಲರ ಭೇಟಿ ವೇಳೆ ಯಾವುದೇ ಬೇರೆ ವಿಚಾರ ಚರ್ಚೆ ‌ಮಾಡಿಲ್ಲ. ಬರೀ ಕುವೆಂಪು ವಿವಿ ವಿಚಾರ ಅಷ್ಟೇ ಚರ್ಚೆ ಮಾಡಿದ್ದೇನೆ. ಸಿಂಡಿಕೇಟ್ ಮೆಂಬರ್ ಗಳನ್ನು ಕರ್ಕೊಂಡು ಹೋಗಿದ್ದೆ. ಅವರೇ ರಾಜ್ಯಪಾಲರೊಂದಿಗೆ ಮಾತಾಡಿದ್ರು, ನಾನು ಸುಮ್ನೆ ಕುತಿದ್ದೆ. ಶಿವಮೊಗ್ಗ ಹತ್ಯೆ ಬಗ್ಗೆಯೂ ಚರ್ಚೆ ಮಾಡಿಲ್ಲ, ಕಾಂಗ್ರೆಸ್ ಪ್ರತಿಭಟನೆ ವಿಚಾರಕ್ಕೂ ಚರ್ಚೆ ಆಗಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ರಾಜ್ಯಪಾಲರಿಗೆ ದೂರು ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನ್ಯಾಕೆ ಆ ವಿಚಾರ ಚರ್ಚೆ ಮಾಡ್ಲಿ..? ಕಾಂಗ್ರೆಸ್ ನವರು ಬರ್ತಾರೆ, ರಾಜ್ಯಪಾಲರು ಭೇಟಿ ಮಾಡಿ ಹೋಗ್ತಾರೆ. ನಾನೇನ್ ಚರ್ಚೆ ಮಾಡ್ಲಿ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತರಾಟೆ ತೆಗೆದುಕೊಂಡಿದ್ದಾರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ‌ ಹಾಗೂ ಮಾಧಸ್ವಾಮಿ ಸದನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಮಾಡಿದ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಬೆಳಗ್ಗೆ ಸಿಎಂ ಜೊತೆಗೆ ಮಾತನಾಡಿದ್ದೇನೆ. ನಡ್ಡಾ ಅವರಿಗೆ ಕಂಪ್ಲೀಟ್ ರಿಪೋರ್ಟ್ ಗೊತ್ತಿಲ್ಲ, ನಾನೇ ಹೇಳ್ತೀನಿ ಅಂತ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲರು ನನಗೆ ಕರೆದ ಇಲ್ಲ. ಬುಲಾವ್ ಅಂತ ಹೇಗೆ ಹೇಳಿದ್ರಿ ಎಂದು ಮಾಧ್ಯಮದವರನ್ನು ಈಶ್ವರಪ್ಪ ಪ್ರಶ್ನೆ ಮಾಡಿದರು. ಅದಕ್ಕೆ ಈಗ ಕ್ಲೀಯರ್ ಮಾಡಿದ್ದೇನೆ ಎಂದು ಕೋಪದಿಂದ ಈಶ್ವರಪ್ಪ ನುಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *