ಕೋಮುವಾದಿ ಅಜೆಂಡಾ ನಿಲ್ಲಿಸದಿದ್ದರೆ ಕರ್ನಾಟಕ ದ್ವೇಷದ ದಳ್ಳುರಿಯಲ್ಲಿ ದಹಿಸುವುದು: ಪ್ರಶಾಂತ್ ಭೂಷಣ್

ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಇನ್ನು ಪರಿಸ್ಥಿತಿ ತಿಳಿಯಾಗಿಲ್ಲ, ಹೀಗಿರುವಾಗ ಪರಿಸ್ಥಿತಿ ಕೋಮುವಾದಿಕರಣಗೊಳ್ಳುವುದನ್ನು ತಪ್ಪಿಸಲು ಪ್ರಯತ್ನ ನಡೆಸಬೇಕು.

ಬೆಂಗಳೂರು: ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಇನ್ನು ಪರಿಸ್ಥಿತಿ ತಿಳಿಯಾಗಿಲ್ಲ, ಹೀಗಿರುವಾಗ ಪರಿಸ್ಥಿತಿ ಕೋಮುವಾದಿಕರಣಗೊಳ್ಳುವುದನ್ನು ತಪ್ಪಿಸಲು ಪ್ರಯತ್ನ ನಡೆಸಬೇಕು ಎಂದು ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಕೋಮುವಾದಿ ಶಕ್ತಿಗಳಿಗೆ ನ್ಯಾಯಾಲಯಗಳು ಏಕೆ ಲಗಾಮು ಹಾಕುತ್ತಿಲ್ಲ ಎಂದು ಪ್ರಶ್ನಿಸಿದ ಭೂಷಣ್, “ಈ ಹಿಂದೆ ಗುಜರಾತ್‌ನಲ್ಲಿ ನಡೆದ ಬಿಜೆಪಿಯ ಪ್ಲೇ ಬುಕ್ ಪ್ರಕಾರ ಕೊಲೆಯ ಕೋಮುವಾದೀಕರಣವನ್ನು ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಪ್ರತಿಯೊಂದು ಕೊಲೆಯೂ ಭಯಾನಕವಾಗಿದೆ, ಆದರೆ ಅದನ್ನು ರಾಜಕೀಯಗೊಳಿಸಬಾರದು ಅಥವಾ ಕೋಮುವಾದಗೊಳಿಸಬಾರದು. ನ್ಯಾಯದ ಹಿತದೃಷ್ಟಿಯಿಂದ, ರಾಜಕೀಯ ಅಥವಾ ಕೋಮುವಾದಿ ಹೇಳಿಕೆಗಳು ವಾತಾವರಣವನ್ನು ಹಾಳುಮಾಡಬಹುದು ಮತ್ತು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು  ಜಸ್ಟೀಸ್ ಮದನ್ ಲೋಕುರ್ ಅಭಿಪ್ರಾಯ ಪಟ್ಟಿದ್ದಾರೆ.

ಕೋಮುವಾದದಿಂದ ಸಮಾಜಕ್ಕೆ ದೊಡ್ಡ ಅಪಾಯವಿದೆ. ಕರ್ನಾಟಕ ರಾಜ್ಯವು ಅಸ್ಥಿರವಾಗುತ್ತಿದ್ದು, ಇಂತಹ ಕೋಮು ಬಣ್ಣ ಬಳಿಯುವುದನ್ನು ವಿರೋಧಿಸಬೇಕು, ಇಲ್ಲದಿದ್ದರೆ ರಾಜ್ಯವು ದ್ವೇಷದ  ಫ್ಯಾಕ್ಟರಿಯಾಗಿ ಬದಲಾಗುತ್ತದೆ. ಘಟನೆಗಳನ್ನು ರಾಜಕೀಯಗೊಳಿಸದಂತೆ ನೋಡಿಕೊಳ್ಳುವುದು ರಾಜಕೀಯ ವರ್ಗ ಮತ್ತು ಅಧಿಕಾರಶಾಹಿಯ ಕರ್ತವ್ಯ, ಎಂದು ಕಾನೂನು ಆಯೋಗದ ಮಾಜಿ  ಅಧ್ಯಕ್ಷ ನ್ಯಾಯಮೂರ್ತಿ ಎ ಪಿ ಶಾ  ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಸುಳ್ಳು ಆರೋಪಗಳನ್ನು ಪುನರಾವರ್ತಿಸುವ ಮೂಲಕ ದ್ವೇಷದ ಅಜೆಂಡಾ ಬಿತ್ತುತ್ತಿದ್ದಾರೆ. ಇಂತದ ದ್ವೇಷದ ಕಾರ್ಯಸೂಚಿಗಳನ್ನು ನಿಲ್ಲಿಸಬೇಕು. ಪಕ್ಷಗಳಿಗೆ ತಮ್ಮ ಸಾಧನೆ ಮೂಲಕ ತೋರಿಸಲು ಸಾಧ್ಯವಾಗವುದಿಲ್ಲವೋ ಆಗ ದ್ವೇಷಕಾರ್ಯಗಳಲ್ಲಿ ತೊಡಗುತ್ತವೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಂಜಿ ದೇವಶ್ಯಾಮ್ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಿರಿ ಮತ್ತು ಹರ್ಷನ ಹತ್ಯೆಯಲ್ಲಿ ಭಾಗಿಯಾದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿ. ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆಯನ್ನು ಆಯೋಜಿಸಿದವರ ವಿರುದ್ಧ ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಿವೃತ್ತ ಪೊಲೀಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಒತ್ತಾಯಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *