ಕೋವಿಡ್‌ ನೆಪದ ಪಲಾಯನ ವಾದ ಬೇಡ, ದೇಶಪಾಂಡೆ ಆಕ್ಷೇಪ

ರಾಜ್ಯ ಸರ್ಕಾರ ತನ್ನ ವಿಫಲತೆ ಮುಚ್ಚಿಕೊಳ್ಳಲು ಕೋವಿಡ್‌ ಕಾರಣ ಕೊಡುತ್ತಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿವೃದ್ಧಿ ಮಾಡದೆ ನೆಪ ಹೇಳಿದರೆ ಜನಾದೇಶಕ್ಕೆ ಅಗೌರವ ತೋರಿದಂತೆ ಎಂದು  ಪ್ರತಿಪಾದಿಸಿದ್ದಾರೆ.  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ರವಾಸ ಮಾಡಿದ ಅವರು ಸಿದ್ಧಾಪುರದಲ್ಲಿ ಮಾತನಾಡಿದರು.


ಕಾಂಗ್ರೆಸ್‌ ಅವಧಿಯಲ್ಲಿ ಉಧ್ಯಮ ಕ್ಷೇತ್ರ ಪ್ರಗತಿಕಂಡಿದ್ದನ್ನು ವಿವರಿಸಿದ ದೇಶಪಾಂಡೆ ತಮ್ಮ ಸರ್ಕಾರದಲ್ಲಿ ಆಯ್.ಟಿ.ಬಿ.ಟಿ. ಪ್ರವಾಸೋದ್ಯಮದ ಮೇಲೆ ಹೂಡಿಕೆ ಮಾಡಿ ಅಭಿವೃದ್ಧಿ ದಾಖಲಿಸಿದ್ದೆವು. ಈಗ ಸರ್ಕಾರ ಅಭಿವೃದ್ಧಿ ಚಟುವಟಿಕೆಗೆ ಗಮನ ಕೊಡದೆ ಕರೋನಾ ಕಾರಣ ಕೊಡುತ್ತಿದೆ ಇದರಿಂದ ರಾಜ್ಯಕ್ಕಾಗುವ ಹಾನಿ ಅಪಾರ ಎಂದರು.


ಕಾಂಗ್ರೆಸ್‌ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರಿಗೆ ಕಾಂಗ್ರೆಸ್‌ ಇತಿಹಾಸ,ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ನೇತೃತ್ವ, ಭೂಸುಧಾರಣೆ ಸೇರಿದಂತೆ ಜನಪರ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್‌ ಜನಸಾಮಾನ್ಯರಿಗೆ ನೆರವಾಗುತ್ತಾ ದೇಶ ಕಟ್ಟಿದ್ದನ್ನು ನೆನಪಿಸಬೇಕು ಎಂದು ಕರೆ ನೀಡಿದ ಅವರು. ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸಂಘಟನೆ ಚುರುಕಾಗಿ ನಡೆಯುತಿದ್ದು ಸದಸ್ಯತ್ವ ಅಭಿಯಾನ ಈ ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದರು.

ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ಸಿದ್ಧಾಪುರಕ್ಕೆ ಬಸ್‌ ನಿಲ್ಧಾಣದ ಅವಶ್ಯಕತೆ ಇತ್ತು. ಸಿದ್ಧಾಪುರ ಹೊಸ ಬಸ್‌ ನಿಲ್ಧಾಣದ ಕಾಮಗಾರಿ ಸೇರಿ ಸಿದ್ಧಾಪುರಕ್ಕೆ ನಾವು ತಂದ ಅಭಿವೃದ್ಧಿ ಕಾಮಗಾರಿಗಳನ್ನು ವಿಧಾನಸಭಾ ಅಧ್ಯಕ್ಷರು ಉದ್ಘಾಟಿಸುತಿದ್ದಾರೆ. ಪ್ರತಿ ಕಾಮಗಾರಿಗಳ ಶಂಕುಸ್ಥಾಪನೆ,ಕಾಮಗಾರಿ ಯೋಜನಾ ವೆಚ್ಚಗಳ ಬಗ್ಗೆ ನಾಮಫಲಕ ಹಾಕಲಾಗುತ್ತದೆ. ಆ ನಾಮಫಲಕಗಳ ಪೋಟೋ ತೆಗೆದು ಯಾವ ಕಾಮಗಾರಿ,ಯಾವ ವರ್ಷದ್ದು,ಯಾವ ಸರ್ಕಾರದ್ದು ಎನ್ನುವ ಮಾಹಿತಿ ನೀಡುವ ಪತ್ರಕರ್ತರೂ ಇಲ್ಲಿಲ್ಲವೆ? – ಆರ್.ವಿ.ದೇಶಪಾಂಡೆ, (ಮಾಜಿ ಸಚಿವ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *