ಹೊಸಳ್ಳಿ ಕೆರೆಗೆ ಸೇರುತ್ತಿದೆ ಕೆಮಿಕಲ್ ನೀರು: ವಿಷಕಾರಿಯಾದ ಹತ್ತಾರು ಹಳ್ಳಿಯ ಜೀವಜಲ

ಕಾರವಾರ: ಅದು ಸುತ್ತಲಿನ ಹತ್ತು ಹಳ್ಳಿಗಳಿಗೆ ಆಸರೆಯಾಗಿದ್ದ ಕೆರೆ. ಆ ಕೆರೆಯಿಂದಾಗಿ ಹಲವು ಬಾವಿಗಳ ಅಂತರ್ಜಲ ಮಟ್ಟ ಕಾಯ್ದಿರುವುದರ ಜೊತೆಗೆ ಅಲ್ಲಿನ ಜನ, ಜಾನುವಾರು, ಹೊಲಗದ್ದೆಗಳಿಗೆ ಅದೇ ನೀರನ್ನ ಬಳಕೆ ಮಾಡುತ್ತಿದ್ದರು. ಜೊತೆಗೆ ಮೀನು ಸಾಕಣೆ ಕೂಡ ಈ ಕೆರೆಯಲ್ಲೇ ಮಾಡಲಾಗುತ್ತಿತ್ತು. ಆದರೆ, ಊರಿನ ಜೀವ ಜಲವಾಗಿದ್ದ ಈ ಕೆರೆ ಪ್ರಸ್ತುತ ವಿಷಕಾರಿಯಾಗಿ ಬದಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್‌ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪನಿಗಳಿಂದ ಬಿಡುಗಡೆಯಾಗುತ್ತಿರುವ ಕೆಮಿಕಲ್ ಮಿಶ್ರಿತ ನೀರು ಹಾಗೂ ತ್ಯಾಜ್ಯದ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಸಂಪೂರ್ಣ ವಿಷವಾಗಿದೆ

ಹೌದು, ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್‌ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪನಿಗಳಿಂದ ಬಿಡುಗಡೆಯಾಗುತ್ತಿರುವ ಕೆಮಿಕಲ್ ಮಿಶ್ರಿತ ನೀರು ಹಾಗೂ ತ್ಯಾಜ್ಯದ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಸಂಪೂರ್ಣ ವಿಷವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

https://prod.suv.etvbharat.com/v2/smart_urls/623822b171d60097bf976313/embedplayer1?player_version=v3&notplay=true&autoplay=false&mute=false&thumbnailurl=https://etvbharatimages.akamaized.net/etvbharat/prod-images/14786397_tkwr-

ವಿಷಕಾರಿಯಾದ ಹೊಸಳ್ಳಿ ಕೆರೆ

ಕೆರೆಗೆ ಸೇರುತ್ತಿರುವ ರಾಸಾಯನಿಕ ತ್ಯಾಜ್ಯದಿಂದಾಗಿ ಹೊಸಳ್ಳಿ ಕೆರೆಯ ಬಳಿ ಸುಳಿಯಲು ಕೂಡ ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದ್ದು, ಕಿರುವತ್ತಿಯ ಜನರು ಇದರಿಂದ ಸಾಕಷ್ಟು ರೋಸಿ ಹೋಗಿದ್ದಾರೆ. ಸ್ಥಳೀಯರ ಒತ್ತಾಯದ ಮೇರೆಗೆ ಯಲ್ಲಾಪುರ ತಾಲೂಕು ಆರೋಗ್ಯ ಅಧಿಕಾರಿಯ ಮೂಲಕ ನೀರು ಪರೀಕ್ಷೆ ಮಾಡಲಾಗಿದ್ದು, ಕೆರೆಯ ನೀರಿನ ಪಿಎಚ್ ಪ್ರಮಾಣ ಹೆಚ್ಚಿದೆ. ಪ್ರತಿ 100 ಎಂಎಲ್ ನೀರಿನಲ್ಲಿ 1,800 ಪ್ರಮಾಣದಷ್ಟು ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ.

ಕೆರೆ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಮಾತ್ರವಲ್ಲದೇ, ಇದರಿಂದಾಗಿ ಅಂತರ್ಜಲಮಟ್ಟ ಕೂಡ ವಿಷವಾಗುತ್ತಿದೆ ಎಂಬ ಅಂಶ ಆತಂಕ ಮೂಡಿಸಿದೆ‌. ಇನ್ನು ಈ ಕೆರೆಯಲ್ಲಿ ಸ್ಥಳೀಯರು ಮೀನು ಸಾಕಣಿಕೆ ಮಾಡುತ್ತಿದ್ದು, ಆ ಮೀನುಗಳನ್ನು ಸೇವಿಸುವುದರಿಂದ ರೋಗಗಳು ಹರಡಬಹುದು ಎಂಬ ಭೀತಿ ಎದುರಾಗಿದೆ. ಆದರೆ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಯಾರೊಬ್ಬರು ಇತ್ತ ಗಮನಹರಿಸುತ್ತಿಲ್ಲ ಎನ್ನುವುದು ಗ್ರಾಮಸ್ಥರ ಆರೋಪ.

ಹೊಸಳ್ಳಿ ಕೆರೆಯು ಸುಮಾರು 28 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದು, ಸುತ್ತಲಿನ ಹಳ್ಳಿಯ ಜನರಿಗೆ ಉಪಯೋಗವಾಗುತ್ತಿತ್ತು. ಕೆರೆ ನೀರನ್ನು ಕುಡಿಯಲು, ದಿನ ಬಳಕೆಗೆ, ಹೊಲಗದ್ದೆಗಳಿಗೆ ಹಾಗೂ ಜಾನುವಾರುಗಳಿಗಾಗಿ ಜನರು ಬಳಕೆ ಮಾಡುತ್ತಿದ್ದರು. ಯಾವಾಗ ಈ ಖಾಸಗಿ ಕಾರ್ಖಾನೆಯಿಂದ ಕೆಮಿಕಲ್ ಮಿಶ್ರಿತ ನೀರು ಹಾಗೂ ಸ್ಥಳೀಯರಿಂದ ತ್ಯಾಜ್ಯ ಮಿಶ್ರಿತ ನೀರು ಈ ಕೆರೆಗೆ ಬರಲು ಪ್ರಾರಂಭವಾಯ್ತೋ ಅಂದಿನಿಂದ ಈ ಕೆರೆ ನೀರನ್ನು ಜನರು ಉಪಯೋಗಿಸುವುದನ್ನೇ ನಿಲ್ಲಿಸಿದ್ದಾರೆ.

ಕೆರೆಯ ಸುತ್ತಲೂ ಹಚ್ಚಹಸಿರಿನ ಹುಲ್ಲು ಬೆಳೆದಿರುವುದರಿಂದ ದನ – ಕರುಗಳು ಮೇಯಲು ಇಲ್ಲಿಗೆ ಬರುತ್ತವೆ. ಹುಲ್ಲು ತಿಂದ ಬಳಿಕ ಇದೇ ಕೆರೆಯ ನೀರನ್ನು ಕುಡಿಯುತ್ತವೆ. ಇದರಿಂದಾಗಿ ಜಾನುವಾರಗಳು ಕೂಡ ರೋಗಗಳಿಗೆ ತುತ್ತಾಗುತ್ತಿವೆ. ಅಷ್ಟೇ ಅಲ್ಲದೆ ಈ ನೀರನ್ನ ಜನ ಮುಟ್ಟಿದ್ರೆ ಸಾಕು ತುರಿಕೆ, ಕಜ್ಜಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಅನ್ನೋದು ಗ್ರಾಮಸ್ಥರ ಅಳಲು. ಇನ್ನು ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಕೇಳಿದರೆ, ಇದುವರೆಗೆ ಈ ಕೆರೆಯ ಬಗ್ಗೆ ಯಾವುದೇ ದೂರುಗಳು ಬಂದಿರಲಿಲ್ಲ. ನೀರಾವರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನ ಸ್ಥಳಕ್ಕೆ ಕಳುಹಿಸಿ ಪರೀಕ್ಷೆ ನಡೆಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಜನರಿಗೆ ಬಳಕೆಯಾಗಬೇಕಿದ್ದ ಕೆರೆ ನೀರು ಖಾಸಗಿ ಕೈಗಾರಿಕೆಯ ತ್ಯಾಜ್ಯದಿಂದಾಗಿ ಕಲುಷಿತಗೊಂಡು ಹಾಳಾಗುತ್ತಿರುವುದು ನಿಜಕ್ಕೂ ದುರಂತ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಕೆರೆಯನ್ನ ಬಳಕೆಗೆ ಯೋಗ್ಯ ಮಾಡಬೇಕಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *