

ಕೆಜಿಎಫ್: ಚಾಪ್ಟರ್ 2 ಚಿತ್ರ ಮೊದಲ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಲಿರಿಕಲ್ ಸಾಂಗ್ ನೋಡಿ ಯಶ್ ಅಭಿಮಾನಿಗಳು ಖುಷಿಯಾಗಿದ್ದಾರೆ.

ಇದುವರೆಗೆ ಕೇವಲ ಒಂದಷ್ಟು ಪೋಸ್ಟರ್ ಮತ್ತು ಒಂದು ಟೀಸರ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
- https://www.youtube.com/embed/unWiIzY7pSw
ಇಂದು ಬೆಳಗ್ಗೆ 11.07ಕ್ಕೆ ‘ತೂಫಾನ್..’ ಲಿರಿಕಲ್ ವಿಡಿಯೋ ಸಾಂಗ್ ವಿಡಿಯೋ ಬಿಡುಗಡೆ ಆಗಿದೆ. ಈ ಬಗ್ಗೆ ಎರಡು ದಿನಗಳ ಹಿಂದೆಯೇ ಹೊಂಬಾಳೆ ಫಿಲ್ಮಂಸ್ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿತ್ತು. ಆಗಲೇ ಸಿನಿಪ್ರಿಯರಲ್ಲಿ ನಿರೀಕ್ಷೆ ಗರಿಗೆದರಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಚಿತ್ರ ತಂಡ ಹಾಡನ್ನು ಬಿಡುಗಡೆ ಮಾಡಿದೆ.
ಸಾಂಗ್ ವೀಕ್ಷಿಸಿದ ಯಶ್ ಅಭಿಮಾನಿಗಳು ಮೆಚ್ಚಿಕೊಂಡು, ಕಾಮೆಂಟ್ ಮಾಡುತ್ತಿದ್ದಾರೆ. ಈ ಹಾಡಿಗೆ ರವಿ ಬಸ್ರೂರ್ ಸಂಗೀತ ನೀಡಿದ್ದಾರೆ. ಕನ್ನಡ ಮಾತ್ರವಲ್ಲದೇ, ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿ ಏಪ್ರಿಲ್ 14ರಂದು ‘ಕೆಜಿಎಫ್: ಚಾಪ್ಟರ್ 2’ ಚಿತ್ರ ಬಿಡುಗಡೆಯಾಗಲಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
