

ಸೊರಬ: ಕೆರೆಯಲ್ಲಿ ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು
ಸೊರಬ ತಾಲೂಕಿನ ತವನಂದಿ ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ವೇಳೆ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಕೆರೆಯಲ್ಲಿ ಎತ್ತುಗಳ ಮೈ ತೊಳೆಯಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂದನ (23) ಮೃತ ದುರ್ದೈವಿ.
ತವನಂದಿ ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳನ್ನು ಮೈ ತೊಳೆಯುತ್ತಿದ್ದ ವೇಳೆ ಎತ್ತುಗಳು ನೀರಿಗೆ ಎಳೆದಿವೆ. ಈಜು ಬಾರದ ಕಾರಣ ಮಧುಸೂದನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರತೆಗೆದಿದ್ದಾರೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
