ಸಿದ್ದಾಪುರದಲ್ಲಿ ಯೋಧನಿಗೆ ಅದ್ಧೂರಿ ಸ್ವಾಗತ

Thumbnail image

ಸಿದ್ದಾಪುರ: ಒಂದು ಎಕರೆ ಗದ್ದೆಯಲ್ಲಿ ಅತ್ಯಧಿಕ ಕ್ವಿಂಟಲ್ ಭತ್ತ ಬೆಳೆದ ಹಾಗೂ ವಿವಿಧ ಕೃಷಿಯಲ್ಲಿ ಸಾಧನೆ ಮಾಡಿದ ತಾಲೂಕಿನ ರೈತರನ್ನು ಬುಧವಾರ ಕೃಷಿ ಇಲಾಖೆ ವತಿಯಿಂದ ಗೌರವಿಸಲಾಯಿತು.
ಜಿಲ್ಲಾ ಪಂಚಾಯ್ತಿ, ತಾಲೂಕಾ ಪಂಚಾಯ್ತಿ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿ ಪ್ರಶಸ್ತಿ ಹಾಗೂ ಕೃಷಿ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಒಂದು ಎಕರೆಗೆ 34 ಕ್ವಿಂಟಲ್ ಭತ್ತ ಬೆಳೆದು ಪ್ರಥಮ ಸ್ಥಾನ ಪಡೆದ ಹಸವಂತೆಯ ಗಣಪತಿ ಮೈಲಾ ನಾಯ್ಕ, ದ್ವಿತೀಯ ಸ್ಥಾನ ಪಡೆದ ರಾಜಶೇಖರ ಮಡಿವಾಳ ಹಾಗೂ ತೃತೀಯ ಸ್ಥಾನ ಪಡೆದ ಈಶ್ವರ ಚೌಡ ನಾಯ್ಕ ಮಳಲವಳ್ಳಿ ಹಾಗೂ ಇತರರನ್ನು ಗೌರವಿಸಲಾಯಿತು.
ರೈತರನ್ನು ಸನ್ಮಾನಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಿಂದ ರೈತರಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೂ ಕೃಷಿಕರ ಸಮಸ್ಯೆ ಪರಿಹಾರವಾಗಿಲ್ಲ. ಪ್ರಕೃತಿಯೊಂದಿಗೆ ಹೊಂದಿಕೊಂಡು ರೈತರು ಕೃಷಿ ಚಟುವಟಿಕೆ ನಡೆಸಬೇಕಿದೆ. ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಿದೆ. ನಮ್ಮೆಲ್ಲರ ಬದುಕಿನ ಬೆಳವಣಿಗೆಗೆ ರೈತರ ಕೊಡುಗೆ ಸಾಕಷ್ಟಿದೆ. ಕೃಷಿಕರು ಸಾಲ ಮಾಡುವ ಪ್ರವೃತ್ತಿ ಕಡಿಮೆ ಮಾಡಬೇಕು ಎಂದರು.
ಈ ವೇಳೆ ಪಟ್ಟಣ ಪಂ
ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸದಸ್ಯರಾದ ಮಾರುತಿ ನಾಯ್ಕ, ಗುರುರಾಜ ಶಾನಭಾಗ, ನಂದನ ಬೋರಕರ್ ಉಪಸ್ಥಿತರಿದ್ದರು.

ನಿವೃತ್ತಿಯಾಗಿ ಮರಳಿದ ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಸುಮಾರು 17 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಮರಳಿದ ಸಿದ್ದಾಪುರದ ತಾಲೂಕಿನ ಕಲಕೈನ ಯೋಧ ಷಣ್ಮುಖ ಗೌಡರನ್ನು ಸ್ಥಳೀಯರು ಮತ್ತು ವಿದ್ಯಾರ್ಥಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಸಿದ್ದಾಪುರ: ಸುಮಾರು 17 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಮಾಡಿ ನಿವೃತ್ತಿಗೊಂಡು ಊರಿಗೆ ಮರಳಿದ ಸೈನಿಕನಿಗೆ ಸ್ವಗ್ರಾಮಸ್ಥರು ಸೇರಿದಂತೆ ವಿದ್ಯಾರ್ಥಿಗಳು ಅದ್ಧೂರಿಯಾಗಿ ಸ್ವಾಗತಿಸಿದ ಘಟನೆ ಸಿದ್ದಾಪುರದಲ್ಲಿ ನಡೆದಿದೆ.

ತಾಲೂಕಿನ ಕಲಕೈನ ಯೋಧ ಷಣ್ಮುಖ ಗೌಡ ಸುಮಾರು 17 ವರ್ಷಗಳ ದೇಶ ಸೇವೆ ಬಳಿಕ ಇತ್ತೀಚೆಗೆ ನಿವೃತ್ತರಾಗಿ ಸ್ವ ಗ್ರಾಮಕ್ಕೆ ಮರಳಿದ್ದರು. ಈ ವೇಳೆ, ಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘಟನೆ ಕಾರ್ಯಕರ್ತರು ಸ್ಥಳೀಯರು ಸೇರಿಕೊಂಡು ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಿವೃತ್ತ ಯೋಧನನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ, ಸೈನಿಕನ ಮಡದಿ ಹಾಗೂ ಮಗಳು ಕೂಡ ಉಡುಗೋರೆ ನೀಡಿ ಸ್ವಾಗತಿಸಿದ್ದಾರೆ.

ನಿವೃತ್ತಿಯಾಗಿ ಮರಳಿದ ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಈ ಬಗ್ಗೆ ಮಾತನಾಡಿರುವ ನಿವೃತ್ತ ಸೈನಿಕ ಷಣ್ಮುಖ ಗೌಡ, ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ಆಗಮಿಸಿದಾಗ ಊರಿನ ಜನರು ಸ್ವಾಗತ ನಿಜಕ್ಕೂ ಅಚ್ಚರಿ ಮೂಡಿಸಿತ್ತು. ನಮ್ಮದು ಚಿಕ್ಕ ಊರು, ಆದರೂ ಎಲ್ಲರೂ ಸೇರಿ ಇಷ್ಟೊಂದು ಅದ್ದೂರಿಯಾಗಿ ಸ್ವಾಗತಿಸಿರುವುದು ತುಂಬಾ ಖುಷಿ ತಂದಿದೆ. ದೇಶದ ಹಲವು ಕಡೆ ಕರ್ತವ್ಯ ನಿಭಾಯಿಸಿದ್ದೇನೆ. ಅದರಲ್ಲಿಯೂ ಕಾಶ್ಮಿರದಲ್ಲಿ‌ 2014 ರಲ್ಲಿ ಜಲಪ್ರವಾಹದ ವೇಳೆ ಎಲ್ಲಿಯೂ ಸಂಪರ್ಕ ಸಾಧಿಸಲು ಸಾಧ್ಯವಾಗದ ಸ್ಥಿತಿಯಲ್ಲಿ 45 ದಿನಗಳ ಕಾಲ ಕಳೆದ ಸ್ಥಿತಿ ಭಯಾನಕ. ಆದರೆ 17 ವರ್ಷಗಳ ಕಾಲ ದೇಶಕ್ಕಾಗಿ ಸೇವೆ ಮಾಡಿದ ಸಂತೃಪ್ತಿ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಷಣ್ಮುಖ ಗೌಡ ಮಾರ್ಚ್ 2005 ರಂದು ಸೈನ್ಯಕ್ಕೆ ಸೇರಿ ಉತ್ತರಪ್ರದೇಶದ ಲಖನೌದಲ್ಲಿ ಕರ್ತವ್ಯ ಪ್ರಾರಂಭಿಸಿ ಬಳಿಕ ರಾಜಸ್ಥಾನದ ಬರ್ಮರ್, ಜಲಂಧರ್, ಜಮ್ಮು ಮತ್ತು ಕಾಶ್ಮೀರ್, ಅಹಮದಾಬಾದ್, ಅಸ್ಸೋಂ, ಅರುಣಾಚಲ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿ ಎಪ್ರಿಲ್ ೧ ರಂದು ನಿವೃತ್ತಿಯಾಗಿದ್ದರು. (etbk)

ಸಿದ್ದಾಪುರ ತಾಲೂಕು ಆಡಳಿತ ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆ ಆಚರಿಸಲಾಯಿತು.
ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಸದಸ್ಯ ನಂದನ್ ಬೋರ್ಕರ್ ಉದ್ಘಾಟಿಸಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ ತತ್ವ ಸಿದ್ಧಾಂತ ಬೋಧನೆ ಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಅವರುಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಅವರು ದಲಿತ ರಾಗಿದ್ದರು ಎನ್ನುವ ಕಾರಣಕ್ಕಾಗಿ ಪ್ರಧಾನಿ ಹುದ್ದೆಯನ್ನು ತಪ್ಪಿಸಿದ್ದಾರೆ ಎಂದು ಆರೋಪಿಸಿದರು.
ನಿವೃತ್ತರಾಗಿ ಜೇನು ಕೃಷಿಯಲ್ಲಿ ತೊಡಗಿಕೊಂಡಿರುವ ಕಾನಗೋಡನ ಮಾರುತಿ ನಾಗು ಬೋರ್ಕರ್ ಅವರನ್ನು ಸನ್ಮಾನಿಸಲಾಯಿತು
ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ ಮಾತನಾಡಿ ನಾವು ಅವರಿಗೆ ಕೊಡುವ ಗೌರವವೆಂದರೆ ಅವರ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು
ಬೇಡ್ಕಣಿ ಜನತಾ ವಿದ್ಯಾಲಯದ ಶಿಕ್ಷಕ ಪಿ.ಎಂ ನಾಯ್ಕ ಉಪನ್ಯಾಸ ನೀಡಿ ಅವರು ತತ್ವ ಬದ್ಧತೆ ಮತ್ತು ಸಿದ್ಧಾಂತ ಉಳ್ಳವರಾಗಿದ್ದರು ಆರಂಭದಿಂದಲೂ ಬದುಕಿನಲ್ಲಿ ಹೋರಾಟದ ಮನೋಭಾವನೆ ಹೊಂದಿ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ಎಂದರು
ಸಮಾರಂಭದ ಅಧ್ಯಕ್ಷತೆಯನ್ನು ಹೆಚ್ ಕೆ ಶಿವಾನಂದ್ ವಹಿಸಿದ್ದರು ವೇದಿಕೆಯಲ್ಲಿ ಎನ ಐ ಗೌಡ ,ದಿನೇಶ್ ಈಡಿ, ಎಮ.ಬಿ ಚಂದಾವರ ,ರಮೇಶ್ ಬೇಡರ,ಡಾಕ್ಟರ್ ಲಕ್ಷ್ಮಿಕಾಂತ್, ಸಿ ಎಸ್ ಗೌಡ ಉಪಸ್ಥಿತರಿದ್ದರು
ಸಿದ್ಧಿವಿನಾಯಕ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಸಿದ್ದಿ ವಿನಾಯಕ ಕನ್ನಡ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಎಸ,ಪಿ ನರೋನಾ ಸ್ವಾಗತಿಸಿದರು ವಾರ್ಡನ ಕವಿತಾ ಆರ್ ನಾಯ್ಕ ನಿರೂಪಣೆ ಮಾಡಿದರು ಶಿಕ್ಷಕಿ ವಿನೋದ ಜಿ ನಾಯ್ಕ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *