

ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಕಾರವಾರ: ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಆರ್ ಆರ್ ಎಸ್ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವು ನೀಡಬೇಕು ಎಂದರು. ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಕೋಮು ಸೌಹಾರ್ದತೆಯನ್ನು ಹದಗೆಡಿಸುತ್ತಿದೆ. ಧರ್ಮ, ಜಾತಿ ಮತ್ತಿತರ ಕೋಮು ವಿಚಾರಗಳನ್ನು ಬಳಸಿಕೊಂಡು ಮತದಾರರನ್ನು ಸರ್ಕಾರ ಓಲೈಸುತ್ತಿದೆ ಎಂದರು.

ಇದೇ ಕಾರಣದಿಂದ ರಾಜ್ಯದಲ್ಲಿ ಬಡತನ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಪ್ರಾಬಲ್ಯವಿರುವ ಸಮುದಾಯದ ಮತಗಳು ಮಾತ್ರ ಅವರಿಗೆ ಬೇಕಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಲ್ಪಸಂಖ್ಯಾತರ ಮತಗಳಿಗಾಗಿ ಪೈಪೋಟಿಗೆ ಬಿದ್ದಿವೆಯ ಇದರಿಂದ ಯಾವುದೇ ರೀತಿಯ ಅಭಿವೃದ್ದಿಯಾಗಲ್ಲ ಎಂದರು. ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿಹಿಡಿಯಲು, ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಆರ್ ಆರ್ ಎಸ್ ನಿರ್ಧರಿಸಿದ್ದು, ಚುನಾವಣೆಯಲ್ಲಿ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ಬೆಂಬಲ ನೀಡಬೇಕೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಬೇಕೆ ಎಂಬುದರ ಬಗ್ಗೆ ತದನಂತರ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು. (kpc)
