2023 ವಿಧಾನಸಭಾ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ರಾಜ್ಯ ರೈತ ಸಂಘ ನಿರ್ಧಾರ

ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

Karnataka_Assembly1

ಕಾರವಾರ: ರೈತರನ್ನು ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷಿಸಿವೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಆರ್ ಆರ್ ಎಸ್ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವು ನೀಡಬೇಕು ಎಂದರು. ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಕೋಮು ಸೌಹಾರ್ದತೆಯನ್ನು ಹದಗೆಡಿಸುತ್ತಿದೆ. ಧರ್ಮ, ಜಾತಿ ಮತ್ತಿತರ ಕೋಮು ವಿಚಾರಗಳನ್ನು ಬಳಸಿಕೊಂಡು ಮತದಾರರನ್ನು ಸರ್ಕಾರ ಓಲೈಸುತ್ತಿದೆ ಎಂದರು. 

ಇದೇ ಕಾರಣದಿಂದ ರಾಜ್ಯದಲ್ಲಿ ಬಡತನ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಪ್ರಾಬಲ್ಯವಿರುವ ಸಮುದಾಯದ ಮತಗಳು ಮಾತ್ರ ಅವರಿಗೆ ಬೇಕಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಲ್ಪಸಂಖ್ಯಾತರ ಮತಗಳಿಗಾಗಿ ಪೈಪೋಟಿಗೆ ಬಿದ್ದಿವೆಯ ಇದರಿಂದ ಯಾವುದೇ ರೀತಿಯ ಅಭಿವೃದ್ದಿಯಾಗಲ್ಲ ಎಂದರು. ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿಹಿಡಿಯಲು, ಎಲ್ಲಾ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಆರ್ ಆರ್ ಎಸ್ ನಿರ್ಧರಿಸಿದ್ದು, ಚುನಾವಣೆಯಲ್ಲಿ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. 

2023ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ಬೆಂಬಲ ನೀಡಬೇಕೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಬೇಕೆ ಎಂಬುದರ ಬಗ್ಗೆ ತದನಂತರ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *