ಹಿಂದೂ ಸಂಘಟನೆಗಳಿಗೆ ಕ್ಯಾರೆ ಎನ್ನದೆ ಸೌಹಾರ್ಧತೆ ಮೆರೆದ ಕಲಕರಡಿ ಜನತೆ

Thumbnail image

ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿದ್ರು.. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಟ್ರು..

ಶ್ರೀ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸಹಾಯಾರ್ಥ ಪ್ರತಿ ವರ್ಷ ನಡೆಯುವ ಕೆರೆಬೇಟೆಯಲ್ಲಿ ಮುಸ್ಲಿಂ ಸಮುದಾಯದ ಹೆಚ್ಚು ಜನರು ಪಾಲ್ಗೊಳ್ಳುತ್ತಾರೆ. ಹಿಂದೂ-ಮುಸ್ಲಿಂರು ಒಡಗೂಡಿ ಮೀನು ಹಿಡಿಯುತ್ತಾರೆ. ಪರ್ಯಾಯವಾಗಿ ದೇವಸ್ಥಾನಕ್ಕೆ ಕಾಣಿಕೆ ಕೊಡುತ್ತಾರೆ..

ಕಾರವಾರ : ಹಿಂದೂ-ಮುಸ್ಲಿಂ ಸಮುದಾಯದ ಜನರು ಜಾತಿ, ಧರ್ಮ ಮರೆತು ಕೆರೆಯಲ್ಲಿ ಮೀನು ಹಿಡಿದ ಅಪರೂಪದ ಘಟನೆಯಿದು. ತಾವು ಹಿಡಿದ ಅದೇ ಮೀನಿಗೆ ಪರ್ಯಾಯವಾಗಿ ಮುಸ್ಲಿಂರು ದೇವರಿಗೆ ಕಾಣಿಕೆ ರೂಪದಲ್ಲಿ ಹಣ ನೀಡುವ ವಿಶಿಷ್ಟ ಸಂಪ್ರದಾಯ ಶಿರಸಿ ತಾಲೂಕಿನ ಕಲಕರಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶ್ರೀ ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸಹಾಯಾರ್ಥ ಪ್ರತಿ ವರ್ಷ ನಡೆಯುವ ಕೆರೆಬೇಟೆಯಲ್ಲಿ ಮುಸ್ಲಿಂ ಸಮುದಾಯದ ಹೆಚ್ಚು ಜನರು ಪಾಲ್ಗೊಳ್ಳುತ್ತಾರೆ. ಮುಸ್ಲಿಂಮರೇ ದೇವರಿಗೆ ಸೇವೆ ರೂಪದಲ್ಲಿ ಕಾಣಿಕೆ ನೀಡ್ತಾರೆ.

ಶಿರಸಿ ಕೆರೆಬೇಟೆಯಲ್ಲಿ ಭಾಗಿಯಾದ ಹಿಂದೂ ಮುಸ್ಲಿಂ-ಬಾಂಧವರು..

ಈ ದೇವಸ್ಥಾನದ ಆಚರಣೆಯಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯಧರ್ಮೀಯರು ಭಾಗವಹಿಸದಂತೆ ಹಿಂದೂಪರ ಸಂಘಟನೆ ಮನವಿ ಮಾಡಿತ್ತು. ಆದರೆ, ದೇವಸ್ಥಾನದ ಆಡಳಿತ ಮಂಡಳಿ ತಾವೆಲ್ಲಾ ಸೌಹಾರ್ದಯುತವಾಗಿದ್ದೇವೆ ಎಂದು ಈ ಬಾರಿ ವಿವಾದಗಳ ನಡುವೆಯೂ ಮುಸ್ಲಿಂ ಬಾಂಧವರಿಗೆ ಮತ್ಸ್ಯ ಭೇಟೆಗೆ ಅವಕಾಶ ನೀಡಿದೆ. ನೂರಾರು ಮುಸ್ಲಿಂರು ಇದರಲ್ಲಿ ಭಾಗವಹಿಸಿದ್ದರು.

ಶ್ರೀ ಸಿದ್ಧೇಶ್ವರ ದೇವಾಲಯದ ಅಭಿವೃದ್ಧಿಗೆ ದೇಣಿಗೆ ಸಲುವಾಗಿ ಪ್ರತಿ ವರ್ಷ ಕೆರೆಬೇಟೆ ಎನ್ನುವ ಕಾರ್ಯಕ್ರಮ ಆಯೋಜಿಸಲಾಗುತ್ತದೆ‌. ಈ ಕೆರೆಬೇಟೆಯಲ್ಲಿ ದೇವಸ್ಥಾನಕ್ಕೆ ಸಹಾಯವಾಗಲು ಕೆರೆಯಲ್ಲಿ ಮೀನು ಹಿಡಿಯುವವರಿಗೆ ಪ್ರತಿ ಕೂಣಿಗೆ ದರ ನಿಗದಿಪಡಿಸಲಾಗುತ್ತದೆ. ಈ ಬಾರಿ 340ಕ್ಕೂ ಹೆಚ್ಚು ಜನರು ಕೆರೆಬೇಟೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿ ಕೂಣಿಗೆ ತಲಾ 500 ರೂ. ನಿಗದಿಪಡಿಸಲಾಗಿದೆ. ದೇವಸ್ಥಾನಕ್ಕೆ ಸುಮಾರು 1.70 ಲಕ್ಷದಷ್ಟು ಆದಾಯ ಸಂಗ್ರಹಿಸಲಾಯ್ತು. ಇದನ್ನು ದೇವಸ್ಥಾನದ ವಿವಿಧ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *