

ರಾಜ್ಯಕ್ಕೆ ಬಲಿಷ್ಠ ಹೋಮ್ ಮಿನಿಸ್ಟರ್ ಅಗತ್ಯವಿದೆ ಎಂದು ಜಾಹೀರಾತು ನೀಡಿ: ಬಸನಗೌಡ ಪಾಟೀಲ್ ಯತ್ನಾಳ್
ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.


ವಿಜಯಪುರ: ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.
ಹುಬ್ಬಳ್ಳಿಯ ಗಲಭೆ ಹಿನ್ನೆಲೆ ಯಲ್ಲಿ ಮಾತನಾಡಿದ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನಿು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ರಾಜ್ಯದಲ್ಲಿನ ಇತ್ತೀಚಿನ ಗಲಭೆಗಳ ಬಗ್ಗೆ ಹಾಲಿ ಗೃಹ ಸಚಿವರಿಗೆ ಸಾಫ್ಟ್ ಕಾರ್ನರ್ ಇದ್ದಂತಿದೆ ಎಂದು ಆರೋಪಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಟ್ಟ ಸ್ಥಳಗಳಲ್ಲಿ ಹಿಂಸಾಚಾರ ನಡೆಯುತ್ತಿದೆ ಹೀಗಾಗಿ, ರಾಜ್ಯಕ್ಕೆ ಬಲಿಷ್ಠ ಗೃಹ ಸಚಿವರ ಅವಶ್ಯಕತೆ ಇದೆ’ ಎಂದು ಯತ್ನಾಳ್ ಹೇಳಿದರು. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಯತ್ನಾಳ್, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಲಿ ಇರುವ ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ.
ಏಪ್ರಿಲ್ ಕೊನೆಯ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದರು. ಪಕ್ಷದ ಹೈಕಮಾಂಡ್ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುತ್ತದೆಯೇ ಎಂದು ಪ್ರಶ್ನಿಸಿದಾಗ, ಅಂತಹ ಯಾವುದೇ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಯತ್ನಾಳ್ ಹೇಳಿದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
