

ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ


ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಾಖೆ ಈಗ ಒಪ್ಪಿಗೆ ಸೂಚಿಸಿದ್ದು, ಶೀಘ್ರ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.


300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ)ನಿಯಮಗಳು, 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಕೃಷಿ ಪದವೀಧರರಿಗೆ ಶೇ. 85 ರಷ್ಟು ಹುದ್ದೆಗಳು, ಉಳಿದ ಶೇ. 15 ರಷ್ಟು ಪೋಸ್ಟ್ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






