ಸಿದ್ದಾಪುರ: ಕಳೆದ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದಾಪುರ ತಾಲೂಕಿಗೆ ಮೊದಲ ಎರಡು ರ್ಯಾಂಕ್ ಲಭಿಸಿದ್ದು, ಓರ್ವ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದು ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಸಿದ್ದಾಪುರ ಪಟ್ಟಣದ ಪ್ರಶಾಂತಿ ಪ್ರೌಢಶಾಲೆಯ ತುಷಾರ್ ಶಾನಭಾಗ 625 ಕ್ಕೆ 625 ಅಂಕ ಗಳಿಸಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ತಾಲೂಕಿನ ಗ್ರಾಮೀಣ ಭಾಗದ ನಾಣಿಕಟ್ಟಾ ಸರ್ಕಾರಿ ಪ್ರೌಢಶಾಲೆಯ ಮೀನಾಕ್ಷಿ ಮಂಜುನಾಥ ಗೌಡ 625 ಕ್ಕೆ 624 ಹಾಗೂ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಕುಮಾರ್ ಸತ್ಯನಾರಾಯಣ ಭಟ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ ಎಲ್ ಸಿ ಫಲಿತಾಂಶ: 145 ವಿದ್ಯಾರ್ಥಿಗಳಿಗೆ 625 ಅಂಕ; 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ
ಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆಗೊಂಡಿದ್ದಾರೆ.
ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಫಲಿತಾಂಶ (SSLC resutls) ಪ್ರಕಟವಾಗಿದ್ದು, ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆಗೊಂಡಿದ್ದಾರೆ.
ಗ್ರೇಡ್ ಅಂಕ: ಈ ಬಾರಿ ಗ್ರೇಡ್ ಅಂಕಗಳನ್ನು ನೀಡಲಾಗಿದ್ದು , A+ ಗ್ರೇಡ್ ನಲ್ಲಿ 1,18,875 ವಿದ್ಯಾರ್ಥಿಗಳು, A ಗ್ರೇಡ್ ನಲ್ಲಿ 1,82,60, B+ನಲ್ಲಿ 1,73,528, B ಗ್ರೇಡ್ ನಲ್ಲಿ 1,43,900 ಮಕ್ಕಳು ತೇರ್ಗಡೆ ಹೊಂದಿದ್ದಾರೆ. C+ನಲ್ಲಿ 87,801, C ಗ್ರೇಡ್ ನಲ್ಲಿ 14,627 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 91ರಿಂದ 100 ಅಂಕ ಪಡೆದವರಿಗೆ A+, 81ರಿಂದ 90 ಅಂಕ ಗಳಿಸಿದವರಿಗೆ A ಗ್ರೇಡ್, 71ರಿಂದ 80 ಅಂಕ ಗಳಿಸಿದ್ದರೆ B+, 61ರಿಂದ 60 ಅಂಕ ಗಳಿಸಿದವರಿಗೆ B ಗ್ರೇಡ್, 51ರಿಂದ 60 ಅಂಕ ಗಳಿಸಿದವರಿಗೆ C+ ಹಾಗೂ 35ರಿಂದ 50 ಅಂಕ ಗಳಿಸಿದವರಿಗೆ C ಗ್ರೇಡ್ ನೀಡಲಾಗುತ್ತದೆ.ADVERTISEMENThttps://imasdk.googleapis.com/js/core/bridge3.516.0_en.html#goog_384198272
ರಾಜ್ಯದ 1462 ಸರ್ಕಾರಿ ಶಾಲೆಗಳಲ್ಲಿ ಎಲ್ಲ ಮಕ್ಕಳೂ ತೇರ್ಗಡೆಯಾಗಿದ್ದಾರೆ. 467 ಅನುದಾನ ಶಾಲೆಗಳು, 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ, ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
145 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್: 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.309 ವಿದ್ಯಾರ್ಥಿಗಳಿಗೆ 624, 472 ವಿದ್ಯಾರ್ಥಿಗಳು 623 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ರಾಜ್ಯದ 3,920 ಶಾಲೆಗಳಿಗೆ ಶೇಕಡಾ 100ರಷ್ಟು ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆಗೆ ಶೇಕಡಾ 88, ಅನುದಾನಿತ ಶಾಲೆಯಲ್ಲಿ ಶೇಕಡಾ 87.84, ಅನುದಾನ ರಹಿತ ಶಾಲೆಗಳಲ್ಲಿ ಶೇಕಡಾ 92.29ರಷ್ಟು ಫಲಿತಾಂಶ ಬಂದಿದೆ.
ಫಲಿತಾಂಶ ವೀಕ್ಷಣೆ: ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.