ದಿಬ್ಬಣದ ವಾಹನ-ಕಾರು ಮಧ್ಯೆ ಡಿಕ್ಕಿ: ಕಾಂಗ್ರೆಸ್ ಘಟಕ ಅಧ್ಯಕ್ಷ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ
ಮದುವೆ ದಿಬ್ಬಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರವಾರ(ಉತ್ತರ ಕನ್ನಡ): ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಎದುರುಗಡೆಯಿಂದ ಬಂದ ಕಾರಿನ ಮಧ್ಯೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ. https://ee25872a0221f6ebfb4bd50b1cb23ba3.safeframe.googlesyndication.com/safeframe/1-0-38/html/container.html
ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ದಿಬ್ಬಣದ ಜನrನ್ನು ಕರೆದೊಯ್ಯುತ್ತಿದ್ದ ವಾಹನ-ಕಾರು ಮಧ್ಯೆ ಡಿಕ್ಕಿ
ಇನ್ನು ಎರಡು ವಾಹನಗಳಲ್ಲಿದ್ದ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://ee25872a0221f6ebfb4bd50b1cb23ba3.safeframe.googlesyndication.com/safeframe/1-0-38/html/container.html (etbk)