rss ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ. (naanu gouri)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *