ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು. – ಹೆಚ್.ವಿಶ್ವನಾಥ್

ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕ ಬದಲಾಯಿಸುವುದು ಸರಿಯಲ್ಲ.. ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್

ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಮಕ್ಕಳು ಎಂದೂ ಏಕ ಪಕ್ಷದ ದೃಷ್ಟಿಕೋನದಲ್ಲಿ ಬೆಳೆಯಬಾರದು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಹೆಚ್​.ವಿಶ್ವನಾಥ್​ ಆಗ್ರಹಿಸಿದ್ದಾರೆ..

ಬೆಂಗಳೂರು : ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ರದ್ದುಗೊಳಿಸಿ, ಶಿಕ್ಷಣವನ್ನು ಕೇಸರಿಕರಣ ಮಾಡುವುದರಿಂದ ತಪ್ಪಿಸಬೇಕು ಎಂದು ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್​ ಸದಸ್ಯ ಅಡುಗೂರು ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಮಂಗಳವಾರ ಪ್ರೆಸ್​ಕ್ಲಬ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣಾ ಸಮಿತಿಯನ್ನು ರದ್ದುಗೊಳಿಸಬೇಕು.

ಅವರಲ್ಲಿ ಯಾರು ಸರಿಯಾದ ಶಿಕ್ಷಣ ತಜ್ಞರಲ್ಲ. ಅಲ್ಲದೇ, ಆ ಸಮಿತಿಯನ್ನು ಸ್ಥಾಪಿಸುವಾಗ ಆಗಲಿ ಅಥವಾ ಪುಸ್ತಕ ಪರಿಷ್ಕರಣೆ ಮಾಡುವಾಗ ಆಗಲಿ ಯಾವುದೇ ನಿಯಮಗಳನ್ನು ಪಾಲಿಸಿಲ್ಲ ಎಂದು ದೂರಿದರು.

.ಎಂಎಲ್​ಸಿ ಹೆಚ್​ ವಿಶ್ವನಾಥ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವುದು..

ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಇದು ಮಕ್ಕಳ ಭವಿಷ್ಯದ ಪ್ರಶ್ನೆ. ಮಕ್ಕಳು ಎಂದೂ ಏಕ ಪಕ್ಷಾ ದೃಷ್ಟಿಕೋನದಲ್ಲಿ ಬೆಳೆಯಬಾರದು. ಅದು ಉತ್ತಮ ಬೆಳವಣಿಗೆ ಅಲ್ಲ. ಹಾಗಾಗಿ, ಈ ಪಠ್ಯವನ್ನು ರದ್ದುಗೊಳಿಸಬೇಕು ಎಂದರು.

ಪಠ್ಯ ಪುಸ್ತಕಗಳ ಪರಿಕ್ಷರಣೆ ತಪ್ಪಲ್ಲ: ಹಿಂದಿನ ಪಠ್ಯ ಪುಸ್ತಕಗಳು ಸಂಪೂರ್ಣವಾಗಿ ಸರಿ ಇದೆ ಎಂದು ಹೇಳುವುದಿಲ್ಲ. ಅದರಲ್ಲಿಯೂ ಅನೇಕ ತಪ್ಪಿತ್ತು. ಆದರೆ, ಅನೇಕ ಚರ್ಚೆಗಾಗಿ ನಂತರ ಆ ಪಠ್ಯ ಪುಸ್ತಕಗಳನ್ನು ಜಾರಿಗೆ ತರಲಾಗಿತ್ತು. ಇಲ್ಲಿ ಯಾವುದೇ ಒಂದು ನಿಯಮ, ಎನ್‌ಸಿಆರ್‌ಟಿ ವಿಷಯಗಳನ್ನು ಅನುಸರಿಸಿಲ್ಲ. ಅದು ತಪ್ಪು. ಹಾಗಾಗಿ, ಈ ಸಮಿತಿಯನ್ನು ರದ್ದು ಮಾಡಿ, ಉನ್ನತ ಮಟ್ಟದ ಸಮಿತಿ ರಚಿಸಿ ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡಲಿ ಎಂದು ಆಗ್ರಹಿಸಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *