ವಿಶ್ವಚಾಂಪಿಯನ್ ಪ್ರೇರಣಾಗೆ ತವರೂರಲ್ಲಿ ಅದ್ದೂರಿ ಸ್ವಾಗತ: 2 ಲಕ್ಷ ರೂ. ಬಹುಮಾನ ಘೋಷಣೆ

etv comment image
Thumbnail image

ವಿಶ್ವಚಾಂಪಿಯನ್ ಪ್ರೇರಣಾಗೆ ತವರೂರಲ್ಲಿ ಅದ್ದೂರಿ ಸ್ವಾಗತ: 2 ಲಕ್ಷ ರೂ. ಬಹುಮಾನ ಘೋಷಣೆ

ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಶಿರಸಿಯ ಪ್ರೇರಣಾ ನಂದಕುಮಾರ್ ಶೇಟ್​​ಗೆ ತವರೂರಿನಲ್ಲಿ ಅದ್ದೂರಿ ಸ್ವಾಗತ ನೀಡಿ, ಸನ್ಮಾನಿಸಲಾಯಿತು.

ಶಿರಸಿ: ಫ್ರಾನ್ಸ್​​ನ ನಾರ್ಮಂಡಿಲ್ಲಿ ನಡೆದ 19ನೇ ಆವೃತ್ತಿಯ ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಯಲ್ಲಿ 70 ದೇಶಗಳ 3,500 ಕ್ರೀಡಾಪಟುಗಳು ಭಾಗವಹಿಸಿದ್ದರು. ಶಿರಸಿ ಲಯನ್ಸ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಪ್ರೇರಣಾ ನಂದಕುಮಾರ್ ಶೇಟ್ ಬ್ಯಾಡ್ಮಿಂಟನ್‌ನಲ್ಲಿ ಬಂಗಾರದ ಪದಕ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾಳೆ. ರಾಷ್ಟ್ರವೇ ಹೆಮ್ಮೆ ಪಡುವ ಸಾಧನೆ ಮಾಡಿದ ಪ್ರೇರಣಾ ಅವರನ್ನು ತವರೂರು ಶಿರಸಿಯಲ್ಲಿ ಸೋಮವಾರ ತೆರೆದ ಜೀಪ್​​ನಲ್ಲಿ ಮೆರವಣಿಗೆ ಮಾಡಿ ಅದ್ದೂರಿ ಸ್ವಾಗತ ಕೋರಲಾಯಿತು.

ಬಳಿಕ ನಗರದ ಲಯನ್ಸ್ ಸಭಾಂಗಣದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ದೇಶದ ಹಾಗೂ ಶಿರಸಿಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಪ್ರೇರಣಾಳ ಸಾಧನೆ ನಿಜಕ್ಕೂ ಶ್ಲಾಘನೀಯ. ಸರ್ಕಾರದಿಂದ 2 ಲಕ್ಷ ರೂ ನೀಡಲಾಗುವುದು‌. ಅವರ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಸಹಕರಿಸುತ್ತೇವೆ. ಶಿಕ್ಷಣ ಸಂಸ್ಥೆಗಳು ಅಂಕ ಗಳಿಸುವುದಕ್ಕೆ ಕೊಡುವ ಪ್ರೋತ್ಸಾಹದ ಕೆಲವು ಅಂಶಗಳನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಿದರೆ ಇಂತಹ ಅದೆಷ್ಟೋ ಪ್ರತಿಭೆಗಳು ಬೆಳಕಿಗೆ ಬರುತ್ತಾರೆ ಎಂದರು.

ಬ್ಯಾಡ್ಮಿಂಟನ್ ತಾರೆ ಪ್ರೇರಣಾ ಮಾತನಾಡಿ, ನನ್ನ ಈ ಸಾಧನೆಗೆ ಲಯನ್ಸ್ ಶಾಲೆಯ ಶಿಕ್ಷಕರು ಹಾಗೂ ತರಬೇತಿದಾರರು ಸಾಕಷ್ಟು ಪ್ರೋತ್ಸಾಹ ನೀಡಿದ್ದಾರೆ. ತಾಯಿ, ತಂದೆ ನನಗೆ ಸದಾ ಸಹಕಾರ ನೀಡುತ್ತಿದ್ದಾರೆ‌. ಅವರೆಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ಐಐ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ, ಲಯನ್ಸ್ ಶಾಲೆಯ ಮುಖ್ಯ ಶಿಕ್ಷಕ ಶಶಾಂಕ್ ಹೆಗಡೆ, ಡಿವೈಎಸ್​ಪಿ ರವಿನಾಯ್ಕ, ಸರ್ಕಾರದ ವಿವಿಧ ಇಲಾಖೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *