

ಕಳೆದ ಮೂರು ವರ್ಷಗಳಲ್ಲಿ ಸುರಿದ ಮಳೆ, ಉಂಟಾದ ನೆರೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ನೆರವು ಸಿಗುವ ನಿರೀಕ್ಷೆಯಲ್ಲೇ ಬಾಡಿಗೆ ಮನೆಗಳಲ್ಲಿ ಉಳಿದುಕೊಂಡಿದ್ದರು. ಆದ್ರೆ ಇದೀಗ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಈವರೆಗೂ ಸಹ ಸಾಕಷ್ಟು ಕುಟುಂಬಗಳಿಗೆ ಸರ್ಕಾರದಿಂದ ಮನೆಯಾಗಲಿ, ಸೂಕ್ತ ಪರಿಹಾರವಾಗಲಿ ಲಭಿಸಿಲ್ಲ.

ಕಾರವಾರ(ಉತ್ತರಕನ್ನಡ): 2019. ಈ ವರ್ಷದಲ್ಲಿ ಉತ್ತರಕನ್ನಡ ಜಿಲ್ಲೆ ಕಂಡು ಕೇಳರಿಯದ ಧಾರಾಕಾರ ಮಳೆಗೆ ಸಾಕ್ಷಿಯಾಗಿತ್ತು. ಹಲವೆಡೆ ವಾರಗಳ ಕಾಲ ನೆರೆ ಪರಿಸ್ಥಿತಿ ಆವರಿಸಿತ್ತು. 2020ರಲ್ಲಿ ಅಷ್ಟು ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲವಾದರೂ ಕೆಲವೆಡೆ ಸುರಿದ ಮಳೆ ಸಾಕಷ್ಟು ಹಾನಿ ಉಂಟುಮಾಡಿದೆ. ಆದ್ರೆ ಕಳೆದ 2021ರಲ್ಲಿ ಸುರಿದ ಭಾರಿ ಮಳೆಗೆ ಕಾಳಿ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಕಾರವಾರ ತಾಲೂಕಿನ ಕದ್ರಾ ಜಲಾಶಯದಿಂದ ಹೊರಬಿಟ್ಟ ನೀರಿನಿಂದಾಗಿ ನದಿ ಪಾತ್ರದ ಸಾಕಷ್ಟು ಮನೆಗಳು ಕೊಚ್ಚಿ ಹೋಗಿದ್ದವು. ಏಕಾಏಕಿ ಜಲಾಶಯದಿಂದ ನೀರು ಹೊರಬಿಟ್ಟಿದ್ದು ಜನರು ಸರ್ವಸ್ವವನ್ನೂ ಕಳೆದುಕೊಳ್ಳುವಂತಾಯಿತು. ಘಟನೆ ನಡೆದು ವರ್ಷ ಕಳೆಯುತ್ತಾ ಬಂದರೂ ಈವರೆಗೂ ಅವರಿಗೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ.
ಆ ಸಂದರ್ಭದಲ್ಲಿ ಜಿಲ್ಲಾಡಳಿತ ನೆರೆ ನಿರಾಶ್ರಿತರಿಗೆ ಪರಿಹಾರದ ಜೊತೆಗೆ ಮನೆ ಕಟ್ಟಿಕೊಳ್ಳಲು ಪರ್ಯಾಯ ಜಾಗ ನೀಡುವುದಾಗಿ ಭರವಸೆ ನೀಡಿತ್ತು. ಘಟನೆ ನಡೆದು ವರ್ಷ ಕಳೆಯುತ್ತಾ ಬಂದಿದ್ದು ಈವರೆಗೂ ಹಲವು ನಿರಾಶ್ರಿತರಿಗೆ ಪರಿಹಾರ ಕೈಸೇರಿಲ್ಲ. ಮನೆ ಕಟ್ಟಿಕೊಳ್ಳಲು ಜಾಗವನ್ನೂ ನೀಡಿಲ್ಲ.
ಜಲಾಶಯದಿಂದ ಹೊರಬಿಟ್ಟ ನೀರಿನಿಂದಾಗಿ ಜಲಾಶಯ ವ್ಯಾಪ್ತಿಯ ಕದ್ರಾ, ಮಲ್ಲಾಪುರ, ಗಾಂಧಿನಗರ, ಕುರ್ನಿಪೇಟ್ ಸೇರಿದಂತೆ ಸಾಕಷ್ಟು ಪ್ರದೇಶಗಳಲ್ಲಿ ನೆರೆ ಹಾನಿ ಸಂಭವಿಸಿದೆ. ಅದರಲ್ಲೂ ಜಲಾಶಯದ ಬುಡದಲ್ಲೇ ಇರುವ ಗಾಂಧಿನಗರ ಭಾಗದ ಇಪ್ಪತ್ತಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ಮುಳುಗಡೆಯಾಗಿ ಪ್ರವಾಹಕ್ಕೆ ಕೊಚ್ಚಿಹೋಗಿದ್ದವು.
ಪರಿಣಾಮ, ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸದ್ಯ ಬಾಡಿಗೆ ಮನೆಗಳಲ್ಲೇ ಜೀವನ ನಡೆಸುತ್ತಿದ್ದಾರೆ. ಇನ್ನೇನು ಮಲೆಗಾಲ ಆರಂಭವಾಗಲಿದ್ದು ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಅಂತಾರೆ ಸ್ಥಳೀಯರು. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
