


ಕುವೆಂಪು ಒಂದು ಸಮುದಾಯದ ಕವಿಯಲ್ಲ. ಅವರು ರಾಷ್ಟ್ರದ ಕವಿ. ಯಾವುದೇ ವ್ಯಕ್ತಿಗೆ ಅವಮಾನ ಮಾಡಿದರೂ ಒಕ್ಕಲಿಗರ ಸಂಘ ಅದನ್ನು ವಿರೋಧಿಸುತ್ತದೆ. ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ..

ಬೆಂಗಳೂರು : ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ರಾಜ್ಯಕ್ಕೆ ಮಾಡಿರುವ ಅಪಮಾನವಾಗಿದೆ. ಆದ್ದರಿಂದ ಸರ್ಕಾರ ಈ ಕೂಡಲೇ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಒಕ್ಕಲಿಗ ಸಂಘ ಒತ್ತಾಯಿಸಿದೆ. ಸರ್ಕಾರ ಒಂದು ವೇಳೆ ಕ್ರಮಕೈಗೊಳ್ಳಲು ವಿಫಲವಾದರೆ ಬರುವ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಸಂಘದ ಅಧ್ಯಕ್ಷ ಸಿ ಎನ್ ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜತೆ ಚರ್ಚಿಸಲಾಗುವುದು. ನಾಡಿನ ಆರೂವರೆ ಕೋಟಿ ಕನ್ನಡಿಗರು ಸ್ವೀಕರಿಸಿರುವ ನಾಡಗೀತೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರಿಯಲ್ಲ. ಜಗದ ಕವಿ, ಯುಗದ ಕವಿ ಎಂದು ಖ್ಯಾತಿ ಪಡೆದ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಮಟ್ಟದಲ್ಲಿ ಮಾತನಾಡಿರುವುದು ಖಂಡನೀಯ. ಇದು ಯಾರೂ ಒಪ್ಪುವಂತದ್ದಲ್ಲ ಎಂದು ತರಾಟೆಗೆ ತಗೆದುಕೊಂಡಿದ್ದಾರೆ.
ಕುವೆಂಪು ಅವರಿಗೆ ಕುವೆಂಪು ಅವರೇ ಸರಿಸಾಟಿ : ಕುವೆಂಪು ಅವರಿಗೆ ಕುವೆಂಪು ಅವರೇ ಸರಿಸಾಟಿ, ರೋಹಿತ್ ಚಕ್ರತೀರ್ಥ ಕುವೆಂಪು ನಾಡಗೀತೆಯನ್ನು ಅಗೌರವಿಸಿರುವುದಕ್ಕೆ ನಾಡಿನಾದ್ಯಂತ ಅಲ್ಲದೆ ದೇಶ-ವಿದೇಶಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 2019ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರಿಗೆ ನೋಟಿಸ್ ನೀಡಿತ್ತು. ಕುವೆಂಪು ದೇವರು ಮತ್ತು ಧರ್ಮವನ್ನು ಸ್ವಾರ್ಥಕ್ಕೆ ಬಳಸುವವರ ವಿರುದ್ಧ ತಮ್ಮ ಕೃತಿ, ಕವನಗಳಲ್ಲಿ ಖಂಡಿಸಿದ್ದರು ಎಂದು ಹೇಳಿದ್ದಾರೆ.
ನಾಡಗೀತೆಯನ್ನು ತಿರುಚಿ ಅವಹೇಳನ : ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಕೃತಿಯನ್ನು ಅವರ ಗುರುಗಳಿಗೆ ಸಮರ್ಪಿಸಿದ್ದರು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಪೂರಕವಾಗಿರುವ ನಾಡಗೀತೆ ಇದಾಗಿದೆ. ಆದರೆ, ನಾಡಗೀತೆಯನ್ನು ತಿರುಚಿ ಅವಹೇಳನ ಮಾಡಿರುವುದು ಖಂಡನೀಯ. ಪದೇಪದೆ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗುತ್ತಿದೆ.
ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಅಲ್ಲದೆ, ಸರ್ಕಾರದಲ್ಲಿ ನಮ್ಮ ಜನಾಂಗದ ಸಚಿವರಿದ್ದು, ತಕ್ಷಣ ರಾಜ್ಯ ಮಟ್ಟದ ಸಭೆ ನಡೆಸಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ಹೇರಿ ಆರೋಪಿಯ ವಿರುದ್ಧ ಕ್ರಮಕೈಗೊಳ್ಳಬೇಕು. ಎಲ್ಲರೂ ಎದ್ದು ನಿಂತು ಗೌರವಿಸುವ ನಾಡಗೀತೆಯಾಗಿದ್ದು, ಇದು ಸರ್ಕಾರಕ್ಕೆ ಅಗೌರವ ತರುವ ಕೆಲಸ ಎಂದು ಬಿಂಬಿತವಾಗುತ್ತಿದೆ. ಈಗಾಗಲೇ ಶಿಕ್ಷಣ ತಜ್ಞರು, ಸಾಹಿತಿಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕುವೆಂಪು ಒಂದು ಸಮುದಾಯದ ಕವಿಯಲ್ಲ: ಕುವೆಂಪು ಒಂದು ಸಮುದಾಯದ ಕವಿಯಲ್ಲ, ಅವರು ರಾಷ್ಟ್ರದ ಕವಿ. ಯಾವುದೇ ವ್ಯಕ್ತಿಗೆ ಅವಮಾನ ಮಾಡಿದರೂ ಒಕ್ಕಲಿಗರ ಸಂಘ ಅದನ್ನು ವಿರೋಧಿಸುತ್ತದೆ. ರೋಹಿತ್ ಚಕ್ರತೀರ್ಥ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಈ ನಾಡಗೀತೆಗೆ ಅವಮಾನ ಮಾಡಿರುವುದು ಸರ್ಕಾರಕ್ಕೆ ಅವಮಾನ. ಸರ್ಕಾರ ಎಚ್ಚೆತ್ತು ಸೂಕ್ತ ಕ್ರಮಕೈಗೊಳ್ಳದಿದ್ದರೆ ಸಮುದಾಯ, ಸಂಘಟನೆಗಳು – ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಹೇಳಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
