

ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು, ಇತಿಹಾಸವನ್ನು ತಿರುಚಿದ್ದಾರೆ. ಈ ಮೂಲಕ ಲಿಂಗಾಯತ ಧರ್ಮಗುರು ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್, ಮಹಾಮಾನವತಾವಾದಿ ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ವಿರುದ್ಧ ಕ್ರಿಮಿನಲ್ ಮೊಕದ್ದೆಮೆ ಹೂಡಿ ಎಂದು ವಕೀಲರಾದ ಭೀಮನಗೌಡ ಪರಗೌಡ ಅವರು ದೂರು ನೀಡಿದ್ದಾರೆ.

ಅಥಣಿ (ಬೆಳಗಾವಿ): ರೋಹಿತ್ ಚಕ್ರತೀರ್ಥ ಅವರು ಇತಿಹಾಸಕ್ಕೆ ಅಪಮಾನ ಆಗುವಂತೆ ಮತ್ತು ಇತಿಹಾಸವನ್ನು ತಿರುಚಿ ಬಹುದೊಡ್ಡ ಅವಮಾನವನ್ನು ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಎಂದು ವಕೀಲರು, ಸಾಮಾಜಿಕ ಕಾರ್ಯಕರ್ತರಾಗಿರುವ ಭೀಮನಗೌಡ ಪರಗೌಡ ಅವರು, ಅಥಣಿ ಪೊಲೀಸ್ ಠಾಣೆ ಸಿ.ಪಿ.ಐ ಶಂಕರಗೌಡ ಬಸನಗೌಡ ಅವರ ಮೂಲಕ ಗೃಹ ಇಲಾಖೆ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಡೈರೆಕ್ಟರ್ ಜನರಲ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಇವರಿಗೆ ದೂರು ನೀಡಿದ್ದಾರೆ.
ರೋಹಿತ್ ಚಕ್ರತೀರ್ಥ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ದೂರು


ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು, ಇತಿಹಾಸವನ್ನು ತಿರುಚಿ ಲಿಂಗಾಯತ ಧರ್ಮಗುರು ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್, ಮಹಾಮಾನವತಾವಾದಿ ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದಾರೆ. ಅವರು ಬಸವಣ್ಣ, ಅಂಬೇಡ್ಕರ್, ಆರ್ಯ ಸಮಾಜ, ಬ್ರಹ್ಮ ಸಮಾಜ, ಸತ್ಯಶೋಧಕ ಸಮಾಜ, ನಾರಾಯಣ ಗುರು ಚಳುವಳಿ ಹಾಗೂ ಥಿಯೋ ಸೋಫಿಕಲ್ ಸೊಸೈಟಿ ಇವುಗಳ ಬಗೆಗಿನ ಅಧ್ಯಯನವನ್ನು ಕೈಬಿಟ್ಟಿದ್ದಾರೆ. ಇದರಿಂದ ಭವಿಷ್ಯದ ಪೀಳಿಗೆ, ಯುವ ಜನಾಂಗಕ್ಕೆ ತಪ್ಪು ಮಾಹಿತಿ ನೀಡುವ ಮೂಲಕ ಅವರನ್ನು ನೈಜ ಇತಿಹಾಸದಿಂದ ವಂಚಿತರನ್ನಾಗಿ ಮಾಡುವ ಕಾರ್ಯಕ್ಕೆ ಕೈ ಹಾಕಿದ್ದಾರೆಂದು ಆರೋಪಿಸಿದರು.
ಹಾಗಾಗಿ ಕೂಡಲೇ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರ ಹಾಗೂ ಸದಸ್ಯರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲು ಮಾಡಬೇಕು. ಈಗಾಗಲೇ ರೋಹಿತ್ ಚಕ್ರತೀರ್ಥ ಮತ್ತು ಸದಸ್ಯರು ಪರಿಷ್ಕರಣೆ ಮಾಡಿದ ಪಠ್ಯವನ್ನು ಹಿಂದಕ್ಕೆ ಪಡೆಯಬೇಕೆಂದು ದೂರಿನ ಮೂಲಕ ವಿನಂತಿಸಿದರು. (ಈಟಿಬಿ.ಕೆ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






