
ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ
ಒಂದರಿಂದ ಐದನೇ ತರಗತಿರವರೆಗೆ ಇರುವ ಈ ಶಾಲೆಯಲ್ಲಿ ಮಕ್ಕಳೇ ತರಕಾರಿ ಹಣ್ಣು ಬೆಳೆಯುವ ಮೂಲಕ ಪರಿಸರದ ಪಠ್ಯದೊಂದಿಗೆ ಪ್ರಾಯೋಗಿಕ ಕಲಿಕೆಯನ್ನು ಕಲಿಯುತ್ತಿದ್ದಾರೆ. ಬೆಳೆದ ತರಕಾರಿಗಳನ್ನು ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಪೋಷಕರು ಮತ್ತು ಗ್ರಾಮಸ್ಥರ ನೆರವಿನಿಂದ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಆದರೆ ಖಾಯಂ ಶಿಕ್ಷಕರಿಲ್ಲದ ಕೊರತೆ ಶಾಲೆಯನ್ನು ಕಾಡುತ್ತಿದೆ.

ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾ ಅನ್ನೋ ಪುಟ್ಟ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿಗಳು ನಡೆಯುತ್ತಿವೆ. ಈ ಶಾಲೆಯಲ್ಲಿ 18 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಶಾಲೆಗೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗಿಡವನ್ನ ನೆಟ್ಟು ಪೋಷಣೆ ಮಾಡಬೇಕು.
ಶಾಲೆಯ ವ್ಯಾಪ್ತಿಯಲ್ಲಿರುವ ಒಂದೂವರೆ ಎಕರೆ ಪ್ರದೇಶದಲ್ಲಿ ಕಳೆದ 14 ವರ್ಷದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳು ನೆಟ್ಟ ಮಾವು, ಹಲಸು, ತೆಂಗಿನ ಮರಗಳು ಇಂದು ಫಲ ನೀಡುತ್ತಿರುವುದಲ್ಲದೆ, ಶಾಲೆಯ ಅಂದವನ್ನು ಸಹ ಹೆಚ್ಚಿಸಿವೆ. ಶಾಲೆಯಲ್ಲಿ ಜೇನುಸಾಕಾಣಿಕೆ, ಗೆಡ್ಡೆ ಗೆಣಸು ಹಾಗೂ ತೋಟಗಾರಿಕಾ ಬೆಳೆಗಳನ್ನ ಸಹ ಬೆಳೆಯಲಾಗುತ್ತಿದೆ. ಇಲ್ಲಿ ಮಕ್ಕಳೇ ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಾರೆ. ಜೊತೆಗೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಆರೈಕೆ ಹೇಗೆ ಮಾಡಬೇಕು ಅನ್ನೋದನ್ನ ತೋರಿಸಿಕೊಡುತ್ತಾರೆ.
ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ
ಕಳೆದ 14 ವರ್ಷಗಳ ಹಿಂದೆ ಈ ಶಾಲೆಗೆ ಶಿಕ್ಷಕರಾಗಿ ಆಗಮಿಸಿದ್ದ ಲೀಲಾದರ್ ಮೊಗೇರ್ ಅನ್ನೋರು ಮಕ್ಕಳಿಗೆ ಕೃಷಿ ಬಗ್ಗೆ ಪಾಠ ಮಾಡುವ ಹಾಗೂ ಶಾಲೆಯಲ್ಲಿ ಮಕ್ಕಳಿಂದಲೇ ತೋಟ ನಿರ್ಮಿಸುವ ಕಾರ್ಯವನ್ನು ಮೊದಲು ಪ್ರಾರಂಭಿಸಿದ್ದರು. ಅವರು ವರ್ಗಾವಣೆಯಾಗಿ 3 ವರ್ಷಗಳಾದರೂ ಇದುವರೆಗೂ ಯಾವುದೇ ಖಾಯಂ ಶಿಕ್ಷಕರನ್ನ ಈ ಶಾಲೆಗೆ ನೇಮಿಸಿಲ್ಲ. ಓರ್ವ ಅತಿಥಿ ಶಿಕ್ಷಕರಿಂದ ಮಾತ್ರ ಸದ್ಯ ಶಾಲೆ ನಡೆಯುತ್ತಿದೆ.
ಜೊತೆಗೆ ಪೋಷಕರೂ ಸಹ ಸಾಕಷ್ಟು ಸಹಕಾರ ನೀಡುತ್ತಿದ್ದು, ಮಕ್ಕಳಿಗೆ ಕೃಷಿ ಪಾಠ ನಿರಂತರವಾಗಿರುವಂತೆ ನೋಡಿಕೊಳ್ಳಲಾಗುತ್ತಿದೆ. ಮಕ್ಕಳೇ ಬೆಳೆದ ತರಕಾರಿಗಳನ್ನ ಬಿಸಿಯೂಟಕ್ಕೆ ಬಳಸಲಾಗುತ್ತದೆ. ಅಲ್ಲದೇ ಶಾಲಾ ಆವರಣದಲ್ಲಿ ಬೆಳೆದ ಹಣ್ಣುಗಳನ್ನ ಮಕ್ಕಳಿಗೆ ನೀಡಿ, ಉಳಿದದ್ದನ್ನ ಮಾರಾಟ ಮಾಡಿ ಬಂದ ಹಣವನ್ನ ಮಕ್ಕಳಿಗಾಗೇ ಬಳಸಲಾಗುತ್ತಿದೆ. ಈ ಶಾಲೆಗೆ ಹಸಿರು ಶಾಲೆ ಎಂಬ ರಾಜ್ಯ ಪ್ರಶಸ್ತಿ ಸಹ ದೊರೆತಿದ್ದು, ಈ ಮೂಲಕ ಮಾದರಿ ಎನಿಸಿದೆ ಅಂತಾರೆ ಪಾಲಕರು.

ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ
ಒಟ್ಟಾರೆ ಶಾಲೆ ಎಂದಾಕ್ಷಣ ಶಿಕ್ಷಕರ ಪಾಠಕ್ಕೆ ಮಾತ್ರ ಸೀಮಿತವಾಗಿರುವ ಇಂದಿನ ದಿನದಲ್ಲಿ ಮಕ್ಕಳಿಗೆ ಕೃಷಿ ಹಾಗೂ ಪರಿಸರದ ಕುರಿತು ಪ್ರಾಯೋಗಿಕವಾಗಿಯೇ ಜ್ಞಾನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
