ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ‘ರೋಹಿತ್ ಚಕ್ರತೀರ್ಥ’ ಕೈ ಬಿಟ್ಟ ಸರ್ಕಾರ!!

ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ.

Textbook revision committee chairman Rohit Chakratirtha

ಬೆಂಗಳೂರು: ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ.

ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ (PUC Textbook Revision) ಸಮಿತಿಯಿಂದ ರೋಹಿತ್​ ಚಕ್ರತೀರ್ಥ  (Rohith Chakratirtha) ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದ್ದಾರೆ.

ADVERTISEMENT

https://imasdk.googleapis.com/js/core/bridge3.517.2_en.html#goog_1483754429

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಸರ್ಕಾರ ಮುಂದಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಶಾಲಾ ಪಠ್ಯಪುಸ್ತಕ ಸಮಿತಿ ವಿಸರ್ಜನೆ
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ (ಜೂನ್ 3) ವಿಸರ್ಜಿಸಿದ್ದರು. ಪಠ್ಯ ಪರಿಷ್ಕರಣೆಯ ಕ್ರಮಗಳ ಬಗ್ಗೆ ಎದ್ದಿರುವ ವಿವಾದಗಳ ಕಾರಣಕ್ಕೆ ಅಥವಾ ಯಾವುದೇ ಒತ್ತಡಕ್ಕೆ ಮಣಿದು ಈ ಸಮಿತಿಯನ್ನು ವಿಸರ್ಜಿಸುತ್ತಿಲ್ಲ ಎಂಬ ಸೂಚನೆಯನ್ನೂ ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ನೀಡಿದ್ದರು. ಆ ಮೂಲಕ ಪರೋಕ್ಷವಾಗಿ ಸಮಿತಿಯ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *