Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 

Bengal script a unique record against Jharkhand

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2 ಶತಕ!!

ಬೆಂಗಳೂರು: 2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 


ಹೌದು.. 2022ರ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಜಾರ್ಖಂಡ್ ತಂಡದ ವಿರುದ್ಧದ ಪಂದ್ಯದಲ್ಲಿ ಬಂಗಾಳ ತಂಡ ಈ ದಾಖಲೆ ನಿರ್ಮಿಸಿದ್ದು, ತಮ್ಮ ಒಂಬತ್ತು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸುವುದರೊಂದಿಗೆ ಬಂಗಾಳ ಕ್ರಿಕೆಟ್ ತಂಡವು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಬೆಂಗಳೂರಿನಲ್ಲಿ ನಡೆದ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ ತಂಡ 7 ವಿಕೆಟ್ ನಷ್ಟಕ್ಕೆ 773ರನ್ ಗಳಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ತಂಡದ ಈ ಮ್ಯಾರಥಾನ್ ರನ್ ಗಳಿಕೆಯಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ಸೇರಿದ್ದವು. ಅವಕಾಶ ಪಡೆದು ಅಂಗಳಕ್ಕಿಳಿದ ಬಂಗಾಳ ತಂಡದ ಎಲ್ಲಾ ಬ್ಯಾಟರ್‌ಗಳು ಕನಿಷ್ಠ ತಲಾ ಅರ್ಧಶತಕ ಬಾರಿಸಿದರು. ನಂ. 3 ಬ್ಯಾಟರ್ ಸುದೀಪ್ ಘರಾಮಿ (186) ಮತ್ತು ನಂ. 4 ಅನುಸ್ತುಪ್ ಮಜುಂದಾರ್ (117) ಮೂರಂಕಿ ಸ್ಕೋರ್ ತಲುಪಿದರು. 

ಪ್ರಥಮ ದರ್ಜೆ ಇನ್ನಿಂಗ್ಸ್ ನಲ್ಲಿ ಒಂಬತ್ತು ಬ್ಯಾಟ್ಸ್ ಮನ್‌ಗಳು ತಲಾ ಅರ್ಧಶತಕ ಸಿಡಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು. ಈ ಹಿಂದೆ ಮೊದಲ ದರ್ಜೆಯ ಇನ್ನಿಂಗ್ಸ್ ನಲ್ಲಿ ತಂಡವೊಂದರ ಎಂಟು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸಿದ್ದು 1893 ರಲ್ಲಿ ಘಟಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಪೋರ್ಟ್ಸ್‌ಮೌತ್‌ನಲ್ಲಿ ನಡೆದ ಆ ಪಂದ್ಯದಲ್ಲಿ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡದ ಎಂಟು ಸದಸ್ಯರು ಕನಿಷ್ಠ ತಲಾ ಅರ್ಧಶತಕ ಗಳಿಸಿದ್ದರು.

ಅಂದಹಾಗೆ ಹಾಲಿ ಪಂದ್ಯದಲ್ಲಿ ಬಂಗಾಳ ನೀಡಿರುವ ಬೃಹತ್ ರನ್ ಅನ್ನು ಬೆನ್ನು ಹತ್ತಿರುವ ಜಾರ್ಖಂಡ್ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 139ರನ್ ಗಳಿಸಿ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿ ಸಿಲುಕಿದೆ. 17 ರನ್ ಗಳಿಸಿರುವ ವಿರಾಟ್ ಸಿಂಗ್ ಮತ್ತು ದಿನದಾಟದ ಕೊನೆಯ ಹಂತದಲ್ಲಿ ಕ್ರೀಸ್ ಗೆ ಇಳಿದ ಅನುಕುಲ್ ರಾಯ್ 1 ರನ್ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *