ಉತ್ತರ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,ಪಾಠ ಬಿಟ್ಟುಚುನಾವಣಾ ಪ್ರಚಾರಕ್ಕೆ ಬಂದ ಶಿಕ್ಷಕರು!

ಪಶ್ಚಿಮ ಶಿಕ್ಷಕ ಮತದಾರರ ವಿಧಾನಪರಿಷತ್‌ ಚುನಾವಣೆಯ ನೀತಿಸಂಹಿತೆ ನಡುವೆ ಶಿರಸಿ-ಸಿದ್ದಾಪುರಗಳ ಶಾಲಾ-ಕಾಲೇಜು ಶಿಕ್ಷಕರು ಬಿ.ಜೆ.ಪಿ. ಅಭ್ಯರ್ಥಿ ಬಸವರಾಜ್‌ ಹೊರಟ್ಟಿಯವರ ಚುನಾವಣಾ ಪ್ರಚಾರದ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣ ನಡೆದಿದೆ.

ಜೂನ್‌೧೩ ರಂದು ನಡೆಯಲಿರುವ ಚುನಾವಣೆಯ ಪ್ರಚಾರದ ಸಭೆಗಳು ಇಂದು ಶಿರಸಿ-ಸಿದ್ದಾಪುರಗಳಲ್ಲಿ ನಡೆದವು. ಮುಂಜಾನೆ ಹತ್ತು ಗಂಟೆಯ ಸಮಯಕ್ಕೆ ಸಿದ್ಧಾಪುರ ಹಾಳದಕಟ್ಟಾ ಶಾಲೆ ಕಾಲೇಜುಗಳಿಗೆ ಭೇಟಿ ನೀಡಿದ ನಿಕಟಪೂರ್ವ ವಿಧಾನಪರಿಷತ್‌ ಸಭಾಪತಿ ಹೊರಟ್ಟಿ ಮತಯಾಚನೆ ಮಾಡಿದರು. ನಂತರ ಸಿದ್ದಾಪುರ ಎಂಜಿಸಿ ಕಾಲೇಜಿನಲ್ಲಿ ನೂರಾರು ಶಿಕ್ಷಕರನ್ನು ಸೇರಿಸಿ ಚುನಾವಣಾ ಪ್ರಚಾರದ ಸಂವಾದ ಸಭೆಯನ್ನು ನಡೆಸಲಾಯಿತು. ಎರಡು ತಾಸುಗಳಿಗೂ ಹೆಚ್ಚು ಸಮಯ ನಡೆದ ಈ ಪ್ರಚಾರ ಸಭೆಗೆ ಸಿದ್ದಾಪುರ ತಾಲೂಕಿನ ಗ್ರಾಮೀಣ ಭಾಗದಿಂದ ಬಂದ ನೂರಾರು ಶಿಕ್ಷಕರು ಸೇರಿ ಸಭೆ, ಸಂವಾದ ನಡೆಸಿದರು. ಇದೇ ರೀತಿ ಶಿರಸಿಯಲ್ಲಿ ಕೂಡಾ ಬಸವರಾಜ್‌ ಹೊರಟ್ಟಿ ಶಿಕ್ಷಕರ ಸಭೆ-ಸಂವಾದ ನಡೆಸಿರುವ ಮಾಹಿತಿ ಬಂದಿದೆ.

ಚುನಾವಣೆ ಪ್ರಚಾರ ಸಭೆಯಲ್ಲಿ ಶಿಕ್ಷಕರು

ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದಿಂದ ಮತ ಯಾಚನೆಯ ಅನುಮತಿ ಪತ್ರ ಪಡೆದಿದ್ದ ಬಸವರಾಜ್‌ ಹೊರಟ್ಟಿ ಸಭೆ-ಸಂವಾದ ಕಾರ್ಯಕ್ರಮಗಳಿಗೆ ಪರವಾನಗಿ ಪಡೆದಿರಲಿಲ್ಲ. ಈ ಚುನಾವಣಾ ಪ್ರಚಾರ ಸಭೆಯ ಚತ್ರೀಕರಣ ಮಾಡಿದ ತಾಲೂಕಾ ಚುನಾವಣಾತಂಡ ಶಿಕ್ಷಕರು, ಅಭ್ಯರ್ಥಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಕ್ರಮ ಜರುಗಿಸಿದ ಮಾಹಿತಿ ಇಲ್ಲ.

ಇತ್ತೀಚೆಗೆ ಬಿ.ಜೆ.ಪಿ. ಸೇರಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಬಸವರಾಜ್‌ ಹೊರಟ್ಟಿ ಸ್ಥಳಿಯ ಜೆ.ಡಿ.ಎಸ್.‌ ಮುಖಂಡ ಶಶಿಭೂಷಣ ಹೆಗಡೆಯವರ ಕಾಲೇಜಿನ ಆವರಣದಲ್ಲಿ ಪ್ರಚಾರ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಆಕ್ಷೇಪಗಳಿದ್ದು ಬಿ.ಜೆ.ಪಿ. ಅಭ್ಯರ್ಥಿ ಜೆ.ಡಿ.ಎಸ್.‌ ಮುಖಂಡರ ನೇತೃತ್ವದ ಸಂಸ್ಥೆಯಲ್ಲಿ ಸ್ಥಳಾವಕಅಶ ಪಡೆದು ಕಾರ್ಯಕ್ರಮ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಾರೆಂದರೆ ಅದರ ಹಿಂದಿನ ಹೊಂದಾಣಿಕೆ ಏನು? ಎನ್ನುವ ಪ್ರಶ್ನೆ ಎದ್ದಿದೆ.

ಚುನಾವಣೆ ನೀತಿ ಸಂಹಿತೆ ಸಮಯದಲ್ಲಿ ಶಾಲಾ ಅವಧಿಯಲ್ಲಿ ಶಿಕ್ಷಕರು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವಂತಿಲ್ಲ ಆದರೆ ಕೆಲವು ಅನುದಾನಿತ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರು ಹೊರಟ್ಟಯವರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಇಲಾಖೆಯಿಂದ ಶಿಸ್ತು ಕ್ರಮವಾಗುವ ಬಗ್ಗೆ ಮಾಹಿತಿ ಲಭಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *