ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಎಲ್ಲಿ ಸ್ಥಾಪಿಸೋಣ?

ಜೂನ್‌ ೨೫ ರಂದು ಜಿಲ್ಲಾ ಆಡಳಿತದಿಂದ ನಡೆಯುವ ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟದ ಸ್ಮರಣೆಗಾಗಿ ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಅನಾವರಣ ನಡೆಯಲಿದೆ.

ಈ ಕಾರ್ಯಕ್ರಮಗಳು ಎಲ್ಲಾ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನಡೆಯಲಿವೆ. ಈ ಕಾರ್ಯಕ್ರಮದ ಪೂರ್ವತಯಾರಿ ಸಭೆಯಲ್ಲಿ ಸಿದ್ದಾಪುರದಲ್ಲಿ ಸ್ಥಾಪನೆಯಾಗಲಿರುವ ಶಿಲಾಫಲಕ ಎಲ್ಲಿ ಸ್ಥಾಪಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಿತು.

ಈ ಪ್ರಸ್ಥಾಪ ಮಾಡಿದ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್‌ ಆರ್.‌ ಸ್ವಾತಂತ್ರ್ಯೋತ್ಸವ ಅಮೃತಫಲಕ ಎಲ್ಲಿ ಸ್ಥಾಪಿಸಬೇಕು ಎಂದು ಸಲಹೆ ಕೇಳಿದಾಗ ಪತ್ರಕರ್ತ ಗಣೇಶ್‌ ಭಟ್‌ ತಹಸಿಲ್ಧಾರ ಕಛೇರಿಯ ಆವರಣದಲ್ಲಿ ಈ ಫಲಕ ಸ್ಥಾಪಿಸುವುದು ಸೂಕ್ತ ಎನ್ನುವ ಸಲಹೆ ನೀಡಿದರು.

ನಂತರ ವಕೀಲ ರವಿ ಹೆಗಡೆ ನಗರದ ಗಾರ್ಡನ್‌ ವೃತ್ತ ಅಂದರೆ ರಾಮಕೃಷ್ಣ ಹೆಗಡೆ ಸರ್ಕಲ್‌ ನಲ್ಲಿ ಈ ಫಲಕ ಸ್ಥಾಪನೆಯಾದರೆ ಒಳ್ಳೆಯದು ಎಂದರು.

ಈ ಚರ್ಚೆಗೆ ಧ್ವನಿ ಜೋಡಿಸಿದ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಶಿಲಾಫಲಕ ನೆಟ್ಟು ನಿರ್ವಹಣೆ ಮಾಡುವುದು ವ್ಯವಸ್ಥೆಯ ಜವಾಬ್ಧಾರಿ ಪಟ್ಟಣ ಪಂಚಾಯತ್‌ ನಿರ್ವಹಣೆಯಲ್ಲಿ ಈ ಶಿಲಾಫಲಕ ಗಾರ್ಡನ್‌ ಸರ್ಕಲ್‌ ನಲ್ಲಿ ಸ್ಥಾಪನೆಯಾದರೆ ಸ್ಥಳಿಯರೊಂದಿಗೆ ಹೊರ ಊರುಗಳ ಪ್ರವಾಸಿಗರಿಗೆ ಕೂಡಾ ಸಿದ್ಧಾಪುರದ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಪರಿಚಯವಾಗಬಹುದು ಎಂದರು.

ಈ ಸಭೆಯ ನಂತರ ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿ ಉಳಿದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸೂಕ್ತ ಸ್ಥಳದಲ್ಲಿ ಈ ಅಮೃತಮಹೋತ್ಸವದ ಸ್ಮರಣೆಯ ಶಿಲಾಫಲಕ ಸ್ಥಾಪಿಸುವುದಾಗಿ ತಿಳಿಸಿದರು. ಈ ವರೆಗೆ ಸಭೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆ, ಚರ್ಚೆಗಳಾಗಿವೆ. ಆದರೆ ಈ ಮಹತ್ವದ ಶಿಲಾಫಲಕ ಸಿದ್ಧಾಪುರದ ಯಾವ ಪ್ರದೇಶದಲ್ಲಿ ಸ್ಥಾಪನೆಯಾದರೆ ಒಳ್ಳೆಯದು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ದಾಖಲಿಸಲು ಸಾಧ್ಯವೆ? ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರೀಯಿಸುವ ಮೂಲಕ ಈ ಜನಾಭಿಪ್ರಾಯವನ್ನೂ ಬೆಂಬಲಿಸಬಹುದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *