
ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ. ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು..
ಶಿವಮೊಗ್ಗ: ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತಿದೆ. ಇದರಿಂದ ಪಕ್ಷವನ್ನು ಸದೃಢಗೊಳಿಸಲು ನವ ಸಂಕಲ್ಪ ಚಿಂತನಾ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಸಾಗರದಲ್ಲಿ ನಡೆದ ಜಿಲ್ಲಾಮಟ್ಟದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತೀರ ಕೆಳಮಟ್ಟದಿಂದ ಸಂಘಟಿಸುವ ಅವಶ್ಯಕತೆ ಇದೆ. ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಸ್ವಾತಂತ್ರ್ಯದ ನಂತರ ದೇಶವನ್ನು ಸದೃಢವಾಗಿ ಕಟ್ಟಿದೆ. ಆದರೆ, ಇತ್ತೀಚೆಗೆ ಪಕ್ಷ ದುರ್ಬಲವಾಗುತ್ತಿದೆ ಎಂದರು.
ಈ ಬಗ್ಗೆ ಕಾರ್ಯಕರ್ತರಲ್ಲಿ ಚಿಂತನೆಯhttps://samajamukhi.net/2022/06/07/rohit-saced-from-sylaabus-commitee/ನ್ನುಂಟು ಮಾಡಬೇಕಿದೆ. ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ. ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಳೀಯವಾಗಿ ಪ್ರಣಾಳಿಕೆಯನ್ನು ತಯಾರು ಮಾಡುತ್ತಿದೆ. ರಾಜ್ಯದ ಪ್ರಣಾಳಿಕೆ ಬೇರೆ ಆಗಿರುತ್ತದೆ. ಸ್ಥಳೀಯ ಸಮಸ್ಯೆಗಳನ್ನು ಒಳಗೊಂಡ ಪ್ರಣಾಳಿಕೆ ಇದಾಗಿರುತ್ತದೆ. ಮಲೆನಾಡಿನಲ್ಲಿ ಭೂಹಕ್ಕು, ಅರಣ್ಯ ಸಮಿತಿ ಬಗರ್ ಹುಕುಂ ಸಮಸ್ಯೆಯನ್ನು ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗುತ್ತದೆ ಎಂದರು. (etbk)
