ಕಾಂಗ್ರೆಸ್ ದುರ್ಬಲವಾಗ್ತಿದೆ, ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ : ಕಾಗೋಡು ತಿಮ್ಮಪ್ಪ

ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌ ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು..

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತಿದೆ. ಇದರಿಂದ ಪಕ್ಷವನ್ನು ಸದೃಢಗೊಳಿಸಲು ನವ ಸಂಕಲ್ಪ ಚಿಂತನಾ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಸಾಗರದಲ್ಲಿ ನಡೆದ ಜಿಲ್ಲಾಮಟ್ಟದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ‌ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತೀರ ಕೆಳಮಟ್ಟದಿಂದ ಸಂಘಟಿಸುವ ಅವಶ್ಯಕತೆ ಇದೆ.‌ ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಸ್ವಾತಂತ್ರ್ಯದ ನಂತರ ದೇಶವನ್ನು ಸದೃಢವಾಗಿ ಕಟ್ಟಿದೆ. ಆದರೆ, ಇತ್ತೀಚೆಗೆ ಪಕ್ಷ ದುರ್ಬಲವಾಗುತ್ತಿದೆ ಎಂದರು.

ಈ ಬಗ್ಗೆ ಕಾರ್ಯಕರ್ತರಲ್ಲಿ ಚಿಂತನೆಯhttps://samajamukhi.net/2022/06/07/rohit-saced-from-sylaabus-commitee/ನ್ನುಂಟು ಮಾಡಬೇಕಿದೆ.‌ ಕಾಂಗ್ರೆಸ್ ಬಹಳ ವರ್ಷಗಳ ಕಾಲ ಆಡಳಿತ ನಡೆಸಿದ ಪರಿಣಾಮ ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ.‌ ಇದರಿಂದ ಪಕ್ಷವನ್ನು ಈಗ ಬೂತ್ ಮಟ್ಟದಿಂದ ಕಟ್ಟಬೇಕಿದೆ. ಪ್ರಮುಖ ಕಾರ್ಯಕರ್ತರಿಗೆ ತಿಳಿವಳಿಕೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಶಿಬಿರ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಳೀಯವಾಗಿ ಪ್ರಣಾಳಿಕೆಯನ್ನು ತಯಾರು ಮಾಡುತ್ತಿದೆ. ರಾಜ್ಯದ ಪ್ರಣಾಳಿಕೆ ಬೇರೆ ಆಗಿರುತ್ತದೆ. ಸ್ಥಳೀಯ ಸಮಸ್ಯೆಗಳನ್ನು ಒಳಗೊಂಡ ಪ್ರಣಾಳಿಕೆ ಇದಾಗಿರುತ್ತದೆ. ಮಲೆನಾಡಿನಲ್ಲಿ ಭೂಹಕ್ಕು, ಅರಣ್ಯ ಸಮಿತಿ ಬಗರ್ ಹುಕುಂ ಸಮಸ್ಯೆಯನ್ನು ಪ್ರಣಾಳಿಕೆಯಲ್ಲಿ‌ ಸೇರ್ಪಡೆ‌ ಮಾಡಲಾಗುತ್ತದೆ ಎಂದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *