ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಉತ್ತರ ಕನ್ನಡದ ಪ್ರವೀಣ್ ಭಟ್ ನಿರ್ದೋಷಿ..

Thumbnail image

ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿ.. ಹೈಕೋರ್ಟ್ ‌ಆದೇಶ

ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್​ ಪೀಠ ತೀರ್ಪು ನೀಡಿದೆ.

ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದ್ದ ಆದೇಶ ತಿರಸ್ಕರಿಸಿರುವ ಹೈಕೋರ್ಟ್, ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌

ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಅವರು ಜೂನ್ 21 ರಂದು ಈ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 16 ಏಪ್ರಿಲ್ 2018ರಂದು ಪ್ರವೀಣ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಹೈಕೊರ್ಟ್ ಮೆಟ್ಟಿಲೇರಿದ್ದರು.

ಏನಿದು ಘಟನೆ?: ಬೆಳಗಾವಿಯ ಕುವೆಂಪು ನಗರದಲ್ಲಿ 2015 ಆಗಸ್ಟ್ 16 ರಂದು ನಸುಕಿನ ಜಾವ ತ್ರಿವಳಿ ಕೊಲೆ ನಡೆದಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿಯನ್ನು ಕೊಲೆಗೈಯ್ಯಲಾಗಿತ್ತು. 24 ಗಂಟೆಯಲ್ಲೇ ಎಪಿಎಂಸಿ ಪೊಲೀಸರು ಪ್ರವೀಣ್ ಭಟ್​​​ನನ್ನು ಬಂಧಿಸಿದ್ದರು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *