ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಮರ ಬಿದ್ದು ರೈತ ಸಾವು!

Thumbnail image

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಟ್ಟು ಭಾರಿ ಮಳೆಯಾಗುತ್ತಿದೆ. ಮಲೆನಾಡಿನ ಸಿದ್ದಾಪುರ, ಶಿರಸಿ, ಯಲ್ಲಾಪುರ ಭಾಗದಲ್ಲಿ ಉತ್ತಮ ಮಳೆಯಾಗಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರದ ಶಿವಳಮನೆಯ ಅಬ್ಬಿಗದ್ದೆಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಗಾಳಿ ಮಳೆಗೆ ಮರ ಬಿದ್ದು, ರೈತನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶ್ರೀಧರ ನಾರಾಯಣ ಹೆಗಡೆ ಮೃತ ರೈತ.

ಮತ್ತೊಂದು ಪ್ರಕರಣದಲ್ಲಿ ಓಮ್ನಿ ಮೇಲೆ ವಿದ್ಯುತ್ ಕಂಬ ಹಾಗೂ ಮರ ಬಿದ್ದು ಮಗು ಗಾಯಗೊಂಡಿದೆ. ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಾಲಯದ ಹತ್ತಿರ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಬಳಿಕ ಓಮ್ನಿ ಮೇಲೆ ಬಿದ್ದಿದೆ. ಅದೃಷ್ಟವಶಾತ್​ ಓಮ್ನಿಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದು, ಮಗು ಮಾತ್ರ ಗಾಯಗೊಂಡಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮ್ನಿ ಸಂಪೂರ್ಣ ಜಖಂಗೊಂಡಿದೆ.

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ…

ಇನ್ನು ಕರಾವಳಿಯಲ್ಲಿಯೂ ಉತ್ತಮ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಭಾರಿ ಮಳೆಯಾಗಿದೆ. ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನರು ಪರದಾಡುತ್ತಿದ್ದಾರೆ.

ಗುಡ್ಡ ಕುಸಿತ: ಗೋಕರ್ಣದ ಮುಖ್ಯ ಕಡಲ ತೀರದಿಂದ ರಾಮಮಂದಿರಕ್ಕೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ಇದರಿಂದ ಪ್ರವಾಸಿಗರು ಸೇರಿದಂತೆ ಜನಸಾಮಾನ್ಯರು ಪರದಾಡಬೇಕಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ಧರೆ ಕುಸಿತವಾಗಿದ್ದು, ಬೃಹತ್​ ಬಂಡೆಗಳು ರಸ್ತೆಗೆ ಉರುಳಿವೆ. ಕಡಲ ತೀರದ ಪಕ್ಕದಲ್ಲಿರುವ ಈ ರಸ್ತೆಯ ಒಂದು ಕಡೆ ಕಡಿದಾದ ಪರ್ವತ ಪ್ರದೇಶವಿದ್ದು, ಮತ್ತಷ್ಟು ಕುಸಿಯುವ ಭೀತಿ ಇದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *