

ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವ ಯತ್ನ ಹೆಚ್ಚುದಿನ ಫಲಕೊಡುವುದಿಲ್ಲ, ಬಿ.ಜೆ.ಪಿ. ಸಂಘ ಪರಿವಾರದ ಒಂದು ಘಟಕವಷ್ಟೇ ಆರೆಸ್ಸೆಸ್ ಅಣತಿಯಂತೆ ದೇಶದಲ್ಲಿ ಸರ್ಕಾರ ನಡೆಯುತ್ತಿದೆ ಇದರಿಂದಾಗಿ ದೇಶದ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿರುವ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ ೨೦೨೩ ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಜೆ.ಪಿ.ಯವರಿಗೆ ಅಧಿಕಾರ ಮಾಡಲು ಬರುವುದಿಲ್ಲ ಹಿಂದಿನ ಸರ್ಕಾರಗಳ ಆಡಳಿತ ವೈಖರಿ ಗಮನಿಸಿದರೆ ಬಿ.ಜೆ.ಪಿ. ಜನಪರವಲ್ಲ ಎಂಬುದು ಸಾಬೀತಾಗುತ್ತದೆ. ರಾಜ್ಯದಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆ.ಪಿ.ಸಿ.ಸಿ. ನಿಶ್ಚಿತ ಗುರಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯಾದ್ಯಂತ ವೀಕ್ಷಕರನ್ನು ಕಳುಹಿಸಿ ಪಕ್ಷ ಸಂಘಟನೆ ಬಲಗೊಳಿಸುವ ಜೊತೆಗೆ ಪಕ್ಷ ಬಿಟ್ಟವರನ್ನು ಮರಳಿ ಪಕ್ಷಕ್ಕೆ ತರುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಸಂಘಟನೆ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ, ಶಿರಸಿ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಶಾಸಕರಿಲ್ಲ, ಇಂದಿನ ಸಮಯ ನೆನಪಿಟಕ್ಕೊಳ್ಳಿ ಈಗಲೇ ಬರೆದಿಟಕ್ಕೊಳ್ಳಿ ಈ ಬಾರಿ ಶಿರಸಿ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
