ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ! ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

ಸಿದ್ಧಾಪುರದಲ್ಲಿ ಈ ವರೆಗೆ ೫ ಮನೆಗಳಿಗೆ ಹಾನಿಯಾಗಿ ಮಳೆಯಿಂದಾಗಿ ಉಂಟಾದ ತೊಂದರೆಗೆ ಕನಿಷ್ಟ ೨೫ ಕಡೆ ಹಾನಿಯಾಗಿದೆ. ಮಾದ್ನಕಲ್‌ ಭಾಗದ ಕೆಲವು ಗ್ರಾಮಗಳಿಗೆ ಸಂಪರ್ಕ ಕಡಿದಿದೆ. ಕಳೆದ ಎರಡು ದಿವಸಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಾಲಾ ಮಕ್ಕಳಿಗೆ ಶಾಲೆ,ಮತ್ತು ಮನೆಗೆ ತೆರಳಲು ತೊಂದರೆಯಾಗಿದೆ. ಬಿದ್ರಕಾನ ಗ್ರಾಮ ಪಂಚಾಯತ್‌ ಹೆಮಟೆಮನೆ ಬಳಿ ಮತ್ತು ಹಳದೋಟದಲ್ಲಿ ದರೆ ಕುಸಿದು ಶಾಲಾ ಮಕ್ಕಳು ಬಳಸುತಿದ್ದ ರಸ್ತೆ ಸಂಪರ್ಕ ಕಡಿದುಹೋಗಿದೆ. ನಗರದಲ್ಲಿ ಹಲವೆಡೆ ಕುಸಿತಗಳಾಗಿವೆ ತಾಲೂಕಾ ಆಡಳಿತ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಪ್ರಾರಂಭಿಸಿದೆ.

Heavy_Rain1

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

 ಹಳಿಯಾಳ ಮೂಲದ ಮಂಜುನಾಥ ಮೋರೆ ಎಂಬಾತ ಸಾತ್ನಳ್ಳಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರದ ಹಳಿಯಾಳದಿಂದ ದಕ್ಷಿಣದ ಭಟ್ಕಳದವರೆಗೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ಮಧ್ಯೆ  ಭಾರೀ ಮಳೆಯಿಂದಾಗಿ ಆರು ಮನೆಗಳು ಸಂಪೂರ್ಣ ಮತ್ತು 49 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

https://imasdk.googleapis.com/js/core/bridge3.520.0_en.html#goog_1661716946

 ಹೊನ್ನಾವರದಲ್ಲಿ ಬೃಹತ್ ಮರ ಬಿದ್ದು ಒಂದು ಮನೆಗೆ ಹಾನಿಯಾಗಿದೆ. ಜನರು ತಮ್ಮ ವಸ್ತುಗಳನ್ನು ಸಂಗ್ರಹಿಸುವುದು, ಗಾಯಾಳುಗಳನ್ನು ಹೊತ್ತುಕೊಂಡು ಹೋಗುವುದು ಕೆಲವೆಡೆ ಕಂಡು ಬಂದಿದೆ. 

ಯಲ್ಲಾಪುರದಲ್ಲಿ ಭಾರೀ ಮಳೆಯಾಗಿದ್ದು, ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತಗೊಂಡಿವೆ. ಅರಬೈಲ್ ಘಾಟ್‌ಗೆ ಸಮೀಪವಿರುವ ಅರ್ಥಿಬೈಲ್‌ನಲ್ಲಿ ಟ್ಯಾಂಕರ್ ಒಂದು ಉರುಳಿ ಬಿದಿದ್ದೆ. ಇದರಿಂದಾಗಿ ಘಾಟ್‌ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದರೂ ಸಂಜೆ ವೇಳೆಗೆ ಟ್ಯಾಂಕರ್ ತೆರವುಗೊಳಿಸಿ ಸಂಚಾರ ಮುಂದುವರಿಸಲಾಯಿತು.

ಹವಾಮಾನ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ, ಡಿಸಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಹೆಚ್ಚಿನ ಹಾನಿಯನ್ನು ನಿರೀಕ್ಷಿಸುತ್ತಿರುವ ನಾವು ಯಾವುದೇ ಘಟನೆಗಳನ್ನು ಎದುರಿಸಲು ಸಜ್ಜಾಗಿದ್ದೇವೆ” ಎಂದು ಅವರು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *