

ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ರಾಮ ಮರಾಠಿ ಎಂಬ ವ್ಯಕ್ತಿ ಹೆಂಡತಿಯೊಂದಿಗೆ ಗಲಾಟೆ ತೆಗೆದು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಾರವಾರದ ಕುಮಟಾ ತಾಲೂಕಿನ ಬಂಗಣೆ ಗ್ರಾಮದಲ್ಲಿ ನಡೆದಿದೆ.
ಕಾರವಾರ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಮಗನನ್ನು ಕೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಕುಮಟಾ ತಾಲೂಕಿನ ಬಂಗಣೆ ಗ್ರಾಮದಲ್ಲಿ ನಡೆದಿದೆ.

ಕೊಲೆ ಮಾಡಲು ಬಳಸಲಾಗಿದ್ದ ಕತ್ತಿ
ತಾಕಿ ಮರಾಠಿ (35) ಹಾಗೂ ಲಕ್ಷ್ಮಣ ಮರಾಠಿ (12) ಕೊಲೆಯಾದವರಾಗಿದ್ದು, ರಾಮ ಮರಾಠಿ (40) ಹೆಂಡತಿ ಮಗನನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.
ಗುರುವಾರ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ರಾಮ ಮರಾಠಿ ಮಲಗಿದ್ದ ಹೆಂಡತಿಯೊಂದಿಗೆ ಗಲಾಟೆ ಮಾಡಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಓಡಿ ಹೊರಟಿದ್ದ ಮಗನನ್ನು ಕೂಡ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ದೃಶ್ಯ ನೋಡಿದ ಮತ್ತಿಬ್ಬರು ಮಕ್ಕಳು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ನಂತರ ಮನೆಗೆ ಬಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.(etbk)
