ಯಲ್ಲಾಪುರ,ದಾಂಡೇಲಿ ಮುಂಡಗೋಡು,ಹಳಿಯಾಳ ಗಳನ್ನು ಬಿಟ್ಟು ಉ.ಕ. ದ ಉಳಿದ ತಾಲೂಕುಗಳಲ್ಲಿ ಶನಿವಾರವೂ ರಜೆ

Thumbnail image

ಉತ್ತರಕನ್ನಡದಲ್ಲಿ ನಿಲ್ಲದ ಮಳೆ: ರೆಡ್ ಅಲರ್ಟ್‌, 3 ತಾಲೂಕುಗಳಲ್ಲಿ ಕಾಳಜಿ ಕೇಂದ್ರ

ಉತ್ತರಕನ್ನಡದಲ್ಲಿ ಮಳೆಯಿಂದ ಇದುವರೆಗೆ 91 ಮನೆಗಳು ಹಾನಿಗೊಳಗಾಗಿದ್ದು, ಈ ಪೈಕಿ 81 ಮನೆಗಳಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ. ಮಳೆ ನೀರು ಆವರಿಸಿರುವುದರಿಂದ ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಶ್ರಯ ಒದಗಿಸಲಾಗಿದೆ.

ಕಾರವಾರ(ಉತ್ತರಕನ್ನಡ): ಕಳೆದೊಂದು ವಾರದ ಅವಧಿಯಲ್ಲಿ ಜಿಲ್ಲೆಯಾದ್ಯಂತ 4,960 ಮಿಮೀ ಮಳೆ ಸುರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮಳೆ ಪ್ರಾರಂಭವಾದ ಒಂದೇ ತಿಂಗಳಲ್ಲಿ 91 ಮನೆಗಳಿಗೆ ಹಾನಿ ಉಂಟಾಗಿದೆ. ಮೂರು ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಉತ್ತರಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾರವಾರ ತಾಲೂಕಿನ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ರಸ್ತೆಯಂಚಿನ ಮನೆಗಳು ಜಲಾವೃತವಾಗಿದ್ದವು. ಮಳೆಗೆ ಇದುವರೆಗೆ 91 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 81 ಮನೆಗಳಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ. ಈಗಾಗಲೇ ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಶ್ರಯ ಒದಗಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಮಳೆಗೆ ಓರ್ವ ಸಾವನ್ನಪ್ಪಿದ್ದು, ಎರಡು ಜಾನುವಾರುಗಳು ಅಸುನೀಗಿವೆ. ತುರ್ತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜೊತೆಗೆ ಕಂಟ್ರೋಲ್ ರೂಮ್ ತೆರೆದು 24 ಗಂಟೆಯೂ ಯಾವುದೇ ಸಮಸ್ಯೆ ಆದರೂ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಜುಲೈ 9ರ ಬೆಳಗ್ಗೆವರೆಗೆ ರೆಡ್ ಅಲರ್ಟ್‌ ನೀಡಿದೆ. ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಕರಾವಳಿಯ ಕಾರವಾರ, ಅಂಕೋಲಾ, ಹೊನ್ನಾವರ, ಕುಮಟಾ, ಭಟ್ಕಳ ಹಾಗೂ ಮಲೆನಾಡು ಭಾಗದ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಕೆಲವೆಡೆ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಕುರಿತು ಪರಿಶೀಲನೆ ನಡೆಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಹೇಳಿದ್ದಾರೆ. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *