

ಉತ್ತರ ಕನ್ನಡದ ಅಣಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ: ಅಧಿಕಾರಿಗಳು
ಉತ್ತರ ಕನ್ನಡದ ಅಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ಕಾರವಾರ: ಉತ್ತರ ಕನ್ನಡದ ಅಣಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅಣಶಿ ಘಾಟ್ ನಲ್ಲಿ ವಾಹನಗಳ ಸಂಚಾರ ನಿರ್ಬಂಧಿಸುವ ಕುರಿತ ಜಿಲ್ಲಾಡಳಿತದ ನಿರ್ಧಾರಕ್ಕೆ ಸ್ಥಳೀಯ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಿದ್ದು, ಅಂಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಜೊಯಿಡಾ, ಅಂಶಿ ಮತ್ತು ಕುಂಬಾರವಾಡದ ನಿವಾಸಿಗಳು ನಿರಾಳರಾಗಿದ್ದಾರೆ ಎನ್ನಲಾಗಿದೆ.


ಭಾನುವಾರದಂದು ಅಣಶಿ ಘಾಟ್ ಅನ್ನು ಸಂಪೂರ್ಣವಾಗಿ ಸಂಚಾರಕ್ಕೆ ಮುಚ್ಚುವ ನಿರ್ಧಾರವನ್ನು ಪರಿಶೀಲಿಸಲು ಜಿಲ್ಲಾಡಳಿತದ ನಿರ್ಧಾರಿಸಿತ್ತು. ಜೋಯಿಡಾ ನಿವಾಸಿಗಳ ವಿರೋಧದ ನಂತರ, ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಿಹಿಲನ್ ಅವರು ಘಾಟ್‌ಗಳನ್ನು ಪುನಃ ತೆರೆಯುವ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ಹೇಳಿದ್ದರು.
“ನಾವು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಘಾಟ್‌ಗಳನ್ನು ಸಂಚಾರಕ್ಕೆ ತೆರೆಯಲು ಸಾಧ್ಯವೇ ಎಂದು ನೋಡುತ್ತೇವೆ. ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ನೀಡಲು ಎರಡು ವಿಶೇಷ ಕಾರ್ಯಪಡೆಗಳನ್ನು ನೇಮಿಸಲಾಗಿದೆ. ಸಂಚಾರಕ್ಕೆ ಅನುವು ಮಾಡಿಕೊಟ್ಟರೂ ರಾತ್ರಿ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಇನ್ನು ಕಳೆದ ಶನಿವಾರದಂದು ಮುಚ್ಚಲಾದ NH-69 ಅನ್ನು ಮುಂದಿನ 15 ದಿನಗಳವರೆಗೆ ಮುಚ್ಚಿರುತ್ತದೆ. ಹಾಳಾದ ಹೊನ್ನಾವರ-ಮುಳಬಾಗಲು ರಸ್ತೆಯನ್ನು ಸರಿಪಡಿಸುವ ಎನ್‌ಎಚ್‌ಎಐ ಅಧಿಕಾರಿಗಳು, ಕನಿಷ್ಠ ಎರಡು ವಾರಗಳವರೆಗೆ ಭಾರೀ ವಾಹನಗಳಿಗೆ ಈ ಮಾರ್ಗವನ್ನು ಮುಚ್ಚಲಾಗುವುದು ಎಂದು ಹೇಳಿದರು. ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿರುವುದರಿಂದ ಭೂಕುಸಿತಕ್ಕೆ ಕಾರಣವಾಯಿತು, ಆದರೆ ಕೆಲವು ತಿಂಗಳ ಹಿಂದೆ ನಿರ್ಮಿಸಲಾದ ತಡೆಗೋಡೆ ಈ ಹಾನಿಯನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






