ಲೋಕಲ್ news -ಬ್ಯಾಂಕ್‌ ಆಫ್‌ ಬರೋಡಾ ದಿಂದ ನೀರು ಶುದ್ಧೀಕರಣ ಯಂತ್ರದ ಕೊಡುಗೆ

ತಾಲೂಕಿನ ಹಸುವಂತೆ ಮನ್ಮನೆ ಭಾಗದ ವಿದ್ಯಾರ್ಥಿಗಳಿಗೆ ಎದುರಿಸು ತ್ತಿರುವ ಬಸ್ ಸಮಸ್ಯೆ ಸರಿಪಡಿಸುವಂತೆ ಬ್ಲಾಕ್ ಕಾಂಗ್ರೆಸ್ ಹಾಗೂ ಸ್ಥಳೀಯ ಸಾರ್ವಜನಿಕ ರು ಸಿದ್ದಾಪುರ – ಸಾಗರ ಮುಖ್ಯ ರಸ್ತೆಯ ಹಸುವಂತೆ ಬಸ್ ನಿಲ್ದಾಣ ದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು ಈ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಾತನಾಡಿ
ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಹೋಗಲು ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಪಾಸ್ ನೀಡಿ ಬಸ್ ಬಿಡದೆ ಇದ್ದಲ್ಲಿ ಏನು ಪ್ರಯೋಜನ ಸಮಯಕ್ಕೆ ಸರಿಯಾಗಿ ಬಿಡಲಾಗದಿದ್ದಲ್ಲಿ ಬಸ್ ಪಾಸನ್ನು ರದ್ದುಗೊಳಿಸಿಬಿಡಿ. ನಿಮಗೆ ಕಲೆಕ್ಷನ್ನೆ ಮುಖ್ಯವಾಗಿದ್ದಲ್ಲಿ ಬಸ್ ಪಾಸ್ ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಟಿಕೆಟ್ ಮಾಡಿಬಿಡಿ
ಜನರ ಕಷ್ಟ ಆಲಿಸಲು ನಮ್ಮ ಜಿಲ್ಲೆಯಲ್ಲಿ ಎಂಎಲ್ಎ ಎಂಪಿಗಳು ಇದ್ದು ಇಲ್ಲದಂತಾಗಿದ್ದಾರೆ. ತಾಲೂಕ ಪಂಚಾಯತ್ ಜಿಲ್ಲಾ ಪಂಚಾಯತ್ ವ್ಯವಸ್ಥೆ ಇಲ್ಲವಾಗಿದೆ ಆಡಳಿತರೂಢ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶ ಮಾಡಿದೆ. ಜನರ ಧ್ವನಿಯನ್ನು ಅಡಗಿಸಿಬಿಟ್ಟಿದೆ. ಜನರು ತಮ್ಮ ಸಂಕಷ್ಟಗಳನ್ನು ಯಾರ ಬಳಿ ಹೇಳಿಕೊಳ್ಳಬೇಕಾಗಿದೆ ಎಂದು ತಿಳಿಯದಂತಾಗಿದೆ ಎಂದು ಹೇಳಿದ ಅವರು


ಈ ಮೊದಲು ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಗಳಿಗೆ ಎಲ್ಲಾ ಅಧಿಕಾರಿಗಳು ಬರುತ್ತಿದ್ದರು ಸಭೆಯಲ್ಲಿ ಅಧಿಕಾರಿಗಳಿಗೆ ಸಮಸ್ಯೆ ಕುರಿತು ಹೇಳಿದಾಗ ಸಮಸ್ಯೆ ಬಗೆಹರಿಯುತ್ತಿತ್ತು ಆದರೆ ಇಂದು ತಾಲೂಕ ಪಂಚಾಯತ್ ಹಾಗು ಜಿಲ್ಲಾ ಪಂಚಾಯತ್ ಗಳೇ ಇಲ್ಲದೆ ಇರುವುದರಿಂದ ಸಮಸ್ಯೆಯನ್ನು ಯಾರ ಹತ್ತಿರ ಹೇಳಿಕೊಳ್ಳೋಣ ಈಗಿನ 40% ಸರ್ಕಾರ ಮಾಡಿದ್ದೆ ದರ್ಬಾರ್ ಆಗಿದೆ. ಪ್ರತಿದಿನ ಬೆಲೆ ಏರಿಕೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಅಚ್ಚೆ ದಿನ್ ತರುತ್ತೇವೆ ಎಂದು ಹೇಳಿದ್ದರು. ಆದರೆ ಈಗ ರಸ್ತೆಗಳು ಸರಿ ಇಲ್ಲ ರೇಷನ್ ಕಾರ್ಡ್ ಸಿಗುತ್ತಿಲ್ಲ, ಬಸ್ ಪಾಸಿದ್ದು ಮಕ್ಕಳಿಗೆ ಓಡಾಡಲು ಆಗುತ್ತಿಲ್ಲ ತಿನ್ನೋ ಅನ್ನ ಮೊಸರಿನ ಮೇಲೆ ಜಿ ಎಸ್ ಟಿ ಹಾಕಿ ಜನ ಸಾಮಾನ್ಯರನ್ನು ಸಂಕಷ್ಟ ಕ್ಕೆ ತಳ್ಳುತ್ತಿದೆ ಎಂದರು.


ಪೊಲೀಸರು ಪ್ರತಿಭಟನೆ ತಡೆಯಲು ಮುಂದಾದರು ಸಹ ಪ್ರತಿಭಟನೆಕಾರರನ್ನು ಮನವೊಲಿಸಲು ಸಾಧ್ಯವಾಗಲಿಲ್ಲ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ರಸ್ತೆ ತಡೆದು ಪ್ರತಿಭಟನೆ ನಡೆಸಿ ಡಿಪೋ ವ್ಯವಸ್ಥಾಪಕರು ಬರುವವರೆಗೂ ಇಲ್ಲೇ ಕೂರುತ್ತೇವೆ ಎಂದು ಬಿಗಿ ಪಟ್ಟು ಹಿಡಿದು ಕೇಂದ್ರ ರಾಜ್ಯ ಸರಕಾರ ದ ವಿರುದ್ಧ ಘೋಷಣೆ ಕೂಗಿದರು.

ತಹಸೀಲ್ದಾರ್ ಸಂತೋಷ ಭಂಡಾರಿ ಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನ ಕಾರರ ಸಮಸ್ಯೆ ಆಲಿಸಿ ನಿಯಂತ್ರಣಾಧಿಕಾರಿಗಳ ಜೊತೆ ಮಾತನಾಡಿ ಬಸ್ ಸಮಸ್ಯೆ ಸರಿಪಡಿಸಿ ವಿದ್ಯಾರ್ಥಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು ತಹಸೀಲ್ದಾರ್ ರವರ ಭರವಸೆ ನಂತರ ಪ್ರತಿಭಣನಕಾರರು ಪ್ರತಿಭಟನೆ ಕೈ ಬಿಟ್ಟರು ನಂತರ ಸ್ಥಳಕ್ಕೆ ಘಟಕ ವ್ಯವಸ್ಥಾಪಕ ಸರ್ವೇಶ್ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವುದಾಗಿ ಲಿಖಿತ ಭರವಸೆ ನೀಡಿದರು.

ಅನಾಥಾಶ್ರಮದಲ್ಲಿ ಹುಟ್ಟುಹಬ್ಬ ಆಚರಣೆ- ಸಿದ್ದಾಪುರ ತಾಲೂಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ನಾಯ್ಕ್ ಹೊಸೂರ್ ಅವರು ತಮ್ಮ ಮಗನಾದ ರಿಷಿಕ್ ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಶ್ರಮವಾಸಿಗಳಿಗೆ ಊಟ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು
ತಾಲೂಕಿನ ಮುಗದೂ ರಿನಲ್ಲಿರುವ ಪುನೀತ್ ರಾಜಕುಮಾರ್ ಅನಾಥಾಶ್ರಮದಲ್ಲಿ ಆಶ್ರಮವಾಸಿ ಗಳೊಂದಿಗೆ ಕೇಕ್ ಕತ್ತರಿಸಿ ಸಿಹಿ ವಿತರಣೆ ಮಾಡಿ ಊಟ ನೀಡಿ ವಿಶೇಷವಾಗಿ ಆಚರಿಸಿದರು ಈ ಸಂದರ್ಭದಲ್ಲಿ ಕುಟುಂಬಸ್ಥರಾದ ಸದಾನಂದ, ಸುಶೀಲ, ಸಂತೋಷ, ಶಶಿ,ಅಮೋಘ, ಸುತನ ಮಾನ್ಯ ಸುನಿಲ್ ಮುಂತಾದವರು ಉಪಸ್ಥಿತರಿದ್ದರು.
ಬ್ಯಾಂಕ್ ಆಪ್ baroda 115 ನೇ ವಾರ್ಷಿಕೋತ್ಸವದ ನಿಮಿತ್ತ bob ಸಿದ್ದಾಪುರ ಶಾಖೆ ಯಲ್ಲಿ ವಾರ್ಷಿಕೋತ್ಸವ ಆಚರಣೆ ನಡೆಯಿತು. ಇದರ ನಿಮಿತ್ತ ಮುರುಘರಾಜೇಂದ್ರ ಅಂಧರ ಶಾಲೆಗೆ ಬ್ಯಾಂಕ್ ನಿಂದ water furifier ಕೊಡುಗೆ (ದೇಣಿಗೆ ) ನೀಡಲಾಯಿತು ಎಂದು ಶಾಖಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *