


ಕನ್ನಡಕ್ಕೆ ಮೂರು ನ್ಯಾಷನಲ್ ಅವಾರ್ಡ್: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ!
ಕನ್ನಡ ಮೂರು ಚಿತ್ರಗಳಿಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಬಂದಿವೆ. ಪ್ರಶಸ್ತಿ ಪುರಸ್ಕೃತ ಸಿನಿಮಾದ ನಿರ್ದೇಶಕರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಇಂದು ಪ್ರಕಟವಾದ 2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡದ ಸಿನಿಮಾಗಳು ಕಮಾಲ್ ಮಾಡಿದ್ದು, ಕನ್ನಡ ಚಿತ್ರರಂಗಕ್ಕೆ ಮೂರು ಗಳು ಸಿಕ್ಕಿವೆ. ‘ಡೊಳ್ಳು’, ‘ತಲೆದಂಡ’ ಹಾಗೂ ‘ನಾದದ ನವನೀತ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ ಮುಡಿಗೇರಿದೆ.
ಸಾಗರ್ ಪುರಾಣಿಕ್ ನಿರ್ದೇಶನ ಮತ್ತು ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾ ಕನ್ನಡ ಅತ್ಯುತ್ತಮ ಪ್ರಾದೇಶಿಕ ಚಿತ್ರ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ದಿ.ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದ್ದು, ಪ್ರವೀಣ್ ಕೃಪಾಕರ್ ನಿರ್ದೇಶನದ ‘ತಲೆದಂಡ’ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಪ್ರಶಸ್ತಿ ಲಭಿಸಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರಕ್ಕೂ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿ ಚಿತ್ರದ ವಿಭಾಗದಲ್ಲಿ ಪ್ರಶಸ್ತಿ ಸಿಕ್ಕಿದೆ.
ಕನ್ನಡಕ್ಕೆ ಮೂರು ನ್ಯಾಷನಲ್ ಅವಾರ್ಡ್
ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾದ ‘ಡೊಳ್ಳು’ ಸಿನಿಮಾದ ನಿರ್ದೇಶಕ ಸಾಗರ್ ಪುರಾಣಿಕ್ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಪ್ರಶಸ್ತಿಗೆ ಬಂದಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಒಂದು ಒಳ್ಳೆಯ ತಂಡ ಸೇರಿದರೆ ಆ ತಂಡ ಗುರಿಯನ್ನು ಬೇಕಾದರೂ ತಲುಪಬಹುದು ಎಂದು ‘ಡೊಳ್ಳು’ ಸಿನಿಮಾದಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಮುಖ್ಯವಾಗಿ ಚಿತ್ರಕ್ಕೆ ಪವನ್ ಒಡೆಯರ್ ಮತ್ತು ಅಪೇಕ್ಷಾ ಪುರೋಹಿತ್ ಅಂತಹ ಉತ್ತಮವಾದ ನಿರ್ಮಾಪಕರು ಸಿಕ್ಕರು. ದೊಡ್ಡ ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್ ಒಡೆಯರ್ ಮತ್ತೊಬ್ಬ ನಿರ್ದೇಶಕನ ಮೇಲೆ ನಂಬಿಕೆ ಇಟ್ಟು, ಪ್ರೋತ್ಸಾಹಿಸಿದರು. ಬರಹಗಾರರು ಸೇರಿ ಇಡೀ ಚಿತ್ರತಂಡ ಒಂದೊಳ್ಳೆ ಸಿನಿಮಾದ ಖುಷಿ ಇದೆ ಎಂದು ಎಂದು ಸಾಗರ್ ಪುರಾಣಿಕ್ ಹೇಳಿದರು.
ದಿ.ಸಂಚಾರಿ ವಿಜಯ್ ಅಭಿನಯದ ಹಾಗೂ ಪ್ರವೀಣ್ ಕೃಪಾಕರ್ ನಿರ್ದೇಶನದ ‘ತಲೆದಂಡ’ ಸಿನಿಮಾಗೆ ರಾಷ್ಟ್ರೀಯ ಪ್ರಶಸ್ತಿ ಬಂದಿರುವ ಬಗ್ಗೆ ನಿರ್ದೇಶಕ ಪ್ರವೀಣ್ ಕೃಪಾಕರ್ ಖುಷಿಯಾಗಿದ್ದಾರೆ. ನನ್ನ ಪ್ರಥಮ ನಿರ್ದೇಶನದ ಸಿನಿಮಾ. ಪ್ರಶಸ್ತಿಯ ಸಿಗಬೇಕೆಂದು ತಲೆಯಲ್ಲಿಟ್ಟುಕೊಂಡು ಸಿನಿಮಾ ಮಾಡಲಿಲ್ಲ. ಭವಿಷ್ಯದಲ್ಲಿ ಪರಿಸರವನ್ನ ಉಳಿಸುವ ಪ್ರಯತ್ನದಿಂದ ಮನದಲ್ಲಿಟ್ಟುಕೊಂಡು ‘ತಲೆದಂಡ’ ಸಿನಿಮಾ ಮಾಡಿದ್ದು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸಂಚಾರಿ ವಿಜಯ್ ಅವರನ್ನು ಸ್ಮರಿಸಿರುವ ಅವರು, ಸಂಚಾರಿ ವಿಜಯ್ ನಮ್ಮ ಜೊತೆ ಇಲ್ಲ. ಆದರೆ, ಈ ಸಿನಿಮಾದಲ್ಲಿ ಸಂಚಾರಿ ವಿಜಯ್ ಮಾಡಿರುವ ಪಾತ್ರಕ್ಕೆ ಪ್ರಶಸ್ತಿ ಬರುತ್ತೆ ಅಂತಾ ಅಂದುಕೊಂಡಿದ್ವು. ಆದರೆ, ಈಗ ವಿಜಯ್ ಗೆ ಬರಲಿಲ್ಲ. ಒಟ್ಟಾರೆ ಸಿನಿಮಾಗೆ ಪ್ರಶಸ್ತಿ ಬಂದಿರೋದು ಖುಷಿಯ ವಿಚಾರ ಎಂದು ತಿಳಿಸಿದರು.
ಕನ್ನಡ ಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರುವುದಕ್ಕೆ ನಟಿ ರಮ್ಯಾ ಟ್ವೀಟ್ ಮಾಡಿ, ಪ್ರಶಸ್ತಿ ಪುರಷ್ಕೃತರಿಗೆ ಹಾಗೂ ಸಿನಿಮಾ ತಂಡಗಳಿಗೆ ಶುಭ ಹಾರೈಯಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
