ಉತ್ತರಕನ್ನಡದಲ್ಲಿ ಮಳೆ ಅವಾಂತರಕ್ಕೆ ಐವರು ಸಾವು; 600ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Thumbnail image

ಉತ್ತರಕನ್ನಡ ಜಿಲ್ಲೆಯಲ್ಲಿ ನೆರೆ ಸೃಷ್ಟಿಸಿದ ಮಳೆ- ತೋಟ, ಗದ್ದೆಗಳು ಸೇರಿದಂತೆ ಒಟ್ಟು 68.52 ಹೆಕ್ಟೇರ್ ಕೃಷಿ ಭೂಮಿ ಹಾನಿ, ಐವರು ಸಾವು – ಸರ್ಕಾರದ ಭರವಸೆ ಈಡೇರದ್ದಕ್ಕೆ ಜನರ ಆಕ್ರೋಶ

ಕಾರವಾರ(ಉತ್ತರಕನ್ನಡ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿದ ಮಳೆಗೆ ನದಿಗಳು ಉಕ್ಕಿ ಹರಿದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಸದ್ಯ ಮಳೆಯ ಪ್ರಮಾಣ ಕಡಿಮೆ ಆಗಿದ್ದರಿಂದ ನೆರೆಯೂ ಇಳಿದಿದೆ. ಆದರೆ ಮಳೆಗಾಲದಲ್ಲಿ ಪ್ರತಿ ಬಾರಿಯೂ ನೆರೆಹಾನಿ ಅನುಭವಿಸುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಕರಾವಳಿಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಹೊನ್ನಾವರ, ಕುಮಟಾ ತಾಲೂಕುಗಳಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಕರಾವಳಿ ಹಾಗೂ ಘಟ್ಟದ ಮೇಲೆ ಸುರಿದ ಧಾರಾಕಾರ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ, ಹೊನ್ನಾವರ ತಾಲೂಕಿನ ಬಡಗಣಿ ನದಿ, ಗುಂಡಬಾಳ ಹೊಳೆ ಹಾಗೂ ಶರಾವತಿ ನದಿ ಮೈದುಂಬಿ ಹರಿದಿದ್ದವು. ಪರಿಣಾಮ ನದಿಪಾತ್ರದ ಹತ್ತಾರು ಗ್ರಾಮಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿತ್ತು.

heavy-rain-kills-five-people-in-uttar-kannada

ಅಡಕೆ ತೋಟಕ್ಕೆ ನುಗ್ಗಿದ ಮಳೆ ನೀರು

ಐವರು ಸಾವು: ಕಳೆದ ಜೂನ್ 1ರಿಂದ ಇದುವರೆಗೆ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಸುಮಾರು 24 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 94 ಮನೆಗಳಿಗೆ ಗಂಭೀರ ಹಾನಿ ಉಂಟಾಗಿದೆ. ಉಳಿದಂತೆ ಸುಮಾರು 508 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. ಅಲ್ಲದೇ ಮಳೆ ಕಾರಣದಿಂದ ಹಳಿಯಾಳದಲ್ಲಿ 3, ಹೊನ್ನಾವರ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ತಲಾ ಓರ್ವರು ಸೇರಿ ಜಿಲ್ಲೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಕೃಷಿ ಭೂಮಿಗೆ ಹಾನಿ: ನದಿಗಳು ಉಕ್ಕಿ ಹರಿದು ಸೃಷ್ಟಿಸಿದ ನೆರೆಯಿಂದಾಗಿ ತೋಟ, ಗದ್ದೆಗಳು ಸೇರಿದಂತೆ ಒಟ್ಟೂ 68.52 ಹೆಕ್ಟೇರ್ ಕೃಷಿ ಭೂಮಿಗೆ ಹಾನಿ ಉಂಟಾಗಿದೆ. ಜಿಲ್ಲೆಯಾದ್ಯಂತ ಇದುವೆರೆಗ ಸುಮಾರು 6 ಜಾನುವಾರುಗಳು ಮಳೆಯಬ್ಬರಕ್ಕೆ ಸಾವನ್ನಪ್ಪಿವೆ. ಸತತ ಮಳೆಯಿಂದ ಕಾರವಾರ ಜೋಯಿಡಾ ನಡುವಿನ ಹೆದ್ದಾರಿಯ ಅಣಶಿಘಟ್ಟದಲ್ಲಿ ಮಣ್ಣು ಕುಸಿದು ಮರಗಳು ಸಹ ಉರುಳಿದ್ದು ಸಂಚಾರ ಬಂದ್​ ಆಗಿತ್ತು. ಹೊನ್ನಾವರದ ಗೇರುಸೊಪ್ಪ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಸ್ತೆಯಂಚಿನ ಮಣ್ಣು ಕುಸಿದು ರಸ್ತೆಗೆ ಹಾನಿಯಾಗಿದ್ದು, ಸದ್ಯ ಸಂಚಾರ ಬಂದ್ ಮಾಡಲಾಗಿದೆ.

ಉತ್ತರಕನ್ನಡದಲ್ಲಿ ಮಳೆ ಅವಾಂತರ

ಈ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ನೆರೆ ಆತಂಕದ ಪ್ರದೇಶಗಳಲ್ಲಿ ಫ್ಲಡ್ ಶೆಲ್ಟರ್‌ಗಳನ್ನ ನಿರ್ಮಿಸಿ ಮಳೆಗಾಲದಲ್ಲಿ ಜನರಿಗೆ ಆಶ್ರಯ ಒದಗಿಸುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಅದರ ನಿರ್ಮಾಣವಾಗದಿರೋದಕ್ಕೆ ಜನರು ಬೇಸರ ವ್ಯಕ್ತಪಡಿಸಿದ್ದಾರೆ. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *