

ಆಧುನಿಕ ಅನುಕೂಲಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶ್ರಮಪಟ್ಟರೆ ಉತ್ತಮ ಭವಿಷ್ಯ ಸಿಗಲು ಸಾಧ್ಯ ಎಂದು ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆಯ ಉಪಾಧ್ಯಕ್ಷ ಮತ್ತು ಸಿದ್ದಾಪುರ ಪ.ಪಂ. ಉಪಾಧ್ಯಕ್ಷ ರವಿ ನಾಯ್ಕ ಹೇಳಿದರು. ಅವರು ಇಲ್ಲಿಯ ಹಾಳದಕಟ್ಟಾ ಪ್ರೌಢ ಶಾಲೆಯ ಶಾಲಾ ಸಂಸತ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ಕನ್ನೇಶ್ ನಾಯ್ಕ ಕೋಲಶಿರ್ಸಿ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆಯಿಂದ ಮುಕ್ತರಾಗುವ ಮೂಲಕ ಅದ್ಭುತಗಳನ್ನು ಸಾಧಿಸುವ ಅವಕಾಶವಿದೆ. ಅನೇಕ ಸಾಧಕರ ಅನುಭವ,ಜೀವನ ದರ್ಶನಗಳನ್ನು ಅರಿಯುವ ಮೂಲಕ ಸಮಾಜಮುಖಿಯಾಗಿ ಸಮಾಜಕ್ಕೆ ಸ್ವತ್ತಾಗಬಹುದು ಎಂದು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಧ್ಯಾಪಕ ಜಿ.ಆಯ್.ನಾಯ್ಕ ಮಾತನಾಡಿ ವಿದ್ಯಾರ್ಥಿಗಳು ಸಾಧಕರಾಗಲು ಶ್ರಮ,ಶೃದ್ಧೆ ಅವಶ್ಯ ಸ್ಫಷ್ಟಗುರಿಯೊಂದಿಗೆ ಪ್ರಯತ್ನಿಸಿದರೆ ಸಾಧನೆ ಸಾಧ್ಯ ಎಂದರು. ವಿದ್ಯಾರ್ಥಿ ಪ್ರತಿನಿಧಿಗಳು ಪ್ರಮಾಣ ವಚನ ಮಾಡಿದರು. ಜಯಲಕ್ಷ್ಮೀ ಹೆಗಡೆ ವರದಿ ವಾಚಿಸಿದರು. ಶಿಕ್ಷಕಿ ಲಲಿತಾ ನಾಯ್ಕ ನಿರೂಪಿಸಿದರು.ಶಿಕ್ಷಕ ಎನ್.ಜಿ.ಹೆಗಡೆ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಸುಷ್ಮಾ ಹೆಗಡೆ ವಂದಿಸಿದರು




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






