ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿದು ದುರಂತ: ಸ್ಥಳ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ

Thumbnail image

ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮುಠಳ್ಳಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮನೆ ಮೇಲೆ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕಾರವಾರ(ಉತ್ತರ ಕನ್ನಡ): ಒಂದೇ ದಿನ ಸುರಿದ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವಿಗೀಡಾಗಿರುವ ಘಟನೆ ನಡೆದ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮುಠಳ್ಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆ ಸಂಭವಿಸಿದ ಪ್ರದೇಶಕ್ಕೆ ತೆರಳಿ ಮೃತ ಲಕ್ಷ್ಮೀ ನಾರಾಯಣ ನಾಯ್ಕ ಅವರ ಮನೆ ಇದ್ದ ಪ್ರದೇಶವನ್ನು ಅವರು ವೀಕ್ಷಿಸಿದರು. ಅಲ್ಲದೇ ಘಟನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ದುರ್ಘಟನೆಯಲ್ಲಿ ಮನೆ ಮಾಲೀಕರಾದ ಲಕ್ಷ್ಮೀ ನಾರಾಯಣ ನಾಯ್ಕ (48), ಮಗಳು ಲಕ್ಷ್ಮೀ(33), ಮಗ ಅನಂತ ನಾರಾಯಣ ನಾಯ್ಕ (32) ಹಾಗೂ ಮನೆಯಲ್ಲಿ ರಾತ್ರಿ ಇರಲು ಬಂದಿದ್ದ ಸಂಬಂಧಿ 20 ವರ್ಷದ ಪ್ರವೀಣ್ ಮೃತಪಟ್ಟಿದ್ದರು. ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಶಾಸಕರಾದ ಸುನೀಲ್ ನಾಯ್ಕ, ರೂಪಾಲಿ ನಾಯ್ಕ, ದಿನಕರಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ಸುಮ್ಮನ್ನಾ ಫೆನ್ನೇಕರ್ ಸಿಎಂ ಜತೆಗಿದ್ದರು. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *