


ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ ಸವಿತಾ ಪೀಠ ಮಹಾಸಂಸ್ಥಾನದ ಸವಿತಾನಂದನಾಥ ಸ್ವಾಮೀಜಿ ನೇತೃತ್ವದ ನಿಯೋಗ, ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿತು.

ಬೆಂಗಳೂರು: ಸಮುದಾಯದ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕರ್ನಾಟಕ ರಾಜ್ಯ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ವಜಾಗೊಳಿಸುವಂತೆ ಸವಿತಾ ಪೀಠ ಮಹಾಸಂಸ್ಥಾನ ಆಗ್ರಹಿಸಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸವಿತಾನಂದನಾಥ ಸ್ವಾಮೀಜಿ, ನಿಗಮದ ಅಧ್ಯಕ್ಷ ಎನ್.ನರೇಶ್ ಕುಮಾರ್ ತಮ್ಮ ಅಧಿಕಾರ ಅವಧಿಯಲ್ಲಿ ಯಾವುದೇ ರೀತಿಯ ಪ್ರಗತಿ ಕಾರ್ಯಕ್ರಮಗಳನ್ನು ಮಾಡಿಲ್ಲ. ತಮ್ಮ ಆಡಳಿತಾವಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಇವರ ನಡತೆ, ಕಾರ್ಯ ವೈಖರಿಯಿಂದ ಸಮುದಾಯದ ಏಳಿಗೆ ಆಗುತ್ತಿಲ್ಲ ಎಂದು ಆರೋಪಿಸಿದರು.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ತೀರ ಹಿಂದುಳಿದ ಸವಿತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುವ ನಾಯಕನ ಅಗತ್ಯವಿದೆ. ಆದರೆ, ಹಾಲಿ ಅಧ್ಯಕ್ಷ ಎನ್.ನರೇಶ್ ಕುಮಾರ್ ಇದುವರೆಗೆ ರಾಜ್ಯ ಪ್ರವಾಸ ಮಾಡಿಲ್ಲ. ಜನಾಂಗದ ಸಮಸ್ಯೆ ಕುರಿತು ಅರಿವು ಹೊಂದಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಬಾರದು ಎಂದು ಒತ್ತಾಯ ಮಾಡಿದರು.
ನಿಗಮದ ಅಧಿಕಾರ ದುರುಪಯೋಗ: ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘದ ಚುನಾವಣೆ ಸಂಬಂಧ ನ್ಯಾಯಾಲಯದ ಆದೇಶ ಹೊರಬಿದ್ದಿದ್ದರೂ, ಚುನಾವಣೆ ಪ್ರಕ್ರಿಯೆ ನಡೆದಿಲ್ಲ. ಇದಕ್ಕೆ ಕೆಲ ನಾಯಕರ ಪಿತೂರಿಯೇ ಕಾರಣವಾಗಿದೆ. ಸೆಲೂನ್ ಸ್ಪಾ ಎಕ್ಸ್ಪೋ ಕಾರ್ಯಕ್ರಮವೂ ಖಾಸಗಿ ಸಹಭಾಗಿತ್ವದಲ್ಲಿ ನಡೆದರೂ, ಇದಕ್ಕೆ ನಿಗಮ ಪ್ರೋತ್ಸಾಹ ನೀಡಿ ಅಧಿಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪ ಮಾಡಿದರು. (etbk)https://
samajamukhi.net/2022/08/02/mogling-mattu-sdp-kju/
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
