‘ದೇಶ ವಿಭಜನೆಯ ಕರಾಳ ನೆನಪು, ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ’: ಎನ್.ರವಿಕುಮಾರ್

ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದೇವೆ.

BJPs-N-Ravikumar

ಬೆಂಗಳೂರು: ದೇಶ ವಿಭಜನೆಯ ಕರಾಳ ನೆನಪಿನಾರ್ಥವಾಗಿ ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದೇವೆ.

ರಾಜ್ಯ ಸರ್ಕಾರ ನೀಡಿರುವ ಜಾಹೀರಾತಿನಲ್ಲಿ ನೆಹರು ಅವರಿಗೆ ಅವಮಾನ ಮಾಡಲಾಗಿದೆ ಎಂದು ರಾಜ್ಯದಲ್ಲಿ ಆಕ್ರೋಶ ಹೆಚ್ಚಾಗುತ್ತಿರುವ ಸಮಯದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಬಿಜೆಪಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉದ್ದೇಶಪೂರ್ವಕವಾಗಿ ನೆಹರು ಫೋಟೋವನ್ನು ಪತ್ರಿಕೆಯಲ್ಲಿ ನೀಡಿದ ಸರ್ಕಾರಿ ಜಾಹೀರಾತಿನಲ್ಲಿ ಕೈ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೌದು ನಾವು ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ ಎಂದರು.

‘ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಆದರೆ, ನೆಹರು ಕಾಂಗ್ರೆಸ್ ವಿಸರ್ಜಿಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ. ದೇಶ ವಿಭಜನೆಯ ಕರಾಳ ನೆನಪು ಅಂತ ಆಚರಣೆ ಮಾಡುತ್ತಿದ್ದೇವೆ. ಗಾಂಧೀಜಿಯವರ ಮಾತನ್ನು ನೆಹರು ಕೇಳಲಿಲ್ಲ, ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳದೆ, ದೇಶ ವಿಭಜನೆಗೆ ಕಾರಣವಾಗಿರುವ ನೆಹರೂರವರ ಫೋಟೋವನ್ನು ನಾವು ಹಾಕುವುದಿಲ್ಲ ಎಂದು ಬಿಜೆಪಿ ಸರ್ಕಾರದ ಕ್ರಮಕ್ಕೆ ಸಮರ್ಥನೆ ನೀಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *