

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.

ಶಿವಮೊಗ್ಗ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.
ಇನ್ನು ಫ್ಲೆಕ್ಸ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳು ಧರಣಿ ನಡೆಸಿದ್ದು ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸೆಕ್ಷನ್ 144 ಜಾರಿ ಮಾಡಲಾಗಿದೆ.

ADVERTISEMENT
https://imasdk.googleapis.com/js/core/bridge3.524.0_en.html#goog_398876039
https://imasdk.googleapis.com/js/core/bridge3.524.0_en.html#goog_398876041
ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮೀ ಪ್ರಾಸದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಶಿವಮೊಗ್ಗ ನಗರದಲ್ಲಿ 3 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತ
ಶಿವಮೊಗ್ಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಎರಡು ಗಂಟೆ ಅವಧಿಯಲ್ಲಿ ಇಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಉಪ್ಪಾರಕೇರಿ ಬಡಾವಣೆಯಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಹಾಗೂ ಅಶೋಕ ನಗರದಲ್ಲಿ ಪ್ರವೀಣ್ ಎಂಬುವರಿಗೆ ಚೂರಿ ಇರಿಯಲಾಗಿದೆ. (kpc)
