

2022-23 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಅಣ್ಣಯ್ಯ ಕುಲಾಲ್ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತೆ.

ಬೆಂಗಳೂರು: ಮಂಗಳೂರಿನ ಡಾ.ಅಣ್ಣಯ್ಯ ಕುಲಾಲ್ ಅವರನ್ನು 2022ನೇ ಸಾಲಿನ ಡಿ ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸುರವರ ಜನ್ಮದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ 20 ರಂದು ಆಚರಿಸಲಾಗುತ್ತಿದ್ದು, ಅದರಂತೆ 2022-23 ನೇ ಸಾಲಿನಲ್ಲಿ ಡಿ.ದೇವರಾಜ ಅರಸುರವರ 107 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಗೆ ಶ್ರಮಿಸಿರುವ ವ್ಯಕ್ತಿ,ಸಂಘ ಸಂಸ್ಥೆಗಳಿಗೆ ರಾಜ್ಯ ಮಟ್ಟದಲ್ಲಿ ಡಿ ದೇವರಾಜ ಅರಸು ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಅದರಂತೆ ಈ ಬಾರಿ ಸಮಾಜಮುಖಿ, ಜಾತ್ಯಾತೀತ ಚಿಂತನೆಯಿಂದ ಬಡವರ, ನೊಂದವರ, ನಿರ್ಗತಿಕರಿಗೆ ವೈದ್ಯಕೀಯ ಸೇವೆ ನೀಡುವ ಮೂಲಕ ಕರಾವಳಿ – ಮಲೆನಾಡು ಭಾಗವಲ್ಲದೇ ಇಡೀ ರಾಜ್ಯದಲ್ಲಿಯೇ ಉತ್ತಮ ವೈದ್ಯ ಹಾಗೂ ಸಮಾಜ ವಿಜ್ಞಾನಿ ಎಂದು ಗುರುತಿಸಿರುವ ಡಾ.ಅಣ್ಣಯ್ಯ ಕುಲಾಲ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಾಜ್ಯ ಮಟ್ಟದ ಪ್ರಶಸ್ತಿಗೆ 2022-23ನೇ ಸಾಲಿನಲ್ಲಿ ಅರ್ಹ ವ್ಯಕ್ತಿ/ಸಂಘ-ಸಂಸ್ಥೆಗಳನ್ನು ಆಯ್ಕೆ ಮಾಡಲು ಸರ್ಕಾರ ಡಾ. ಗುರುಲಿಂಗಯ್ಯ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಪ್ರಶಸ್ತಿ ಪುರಸ್ಕೃತರು 5 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಪಡೆಯುತ್ತಾರೆ.

ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿರುವ ಡಿ ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಡಿ ದೇವರಾಜ ಅರಸು ಪ್ರಶಸ್ತಿಯನ್ನು ಮುಖ್ಯಮಂತ್ರಿಗಳು ಪ್ರದಾನ ಮಾಡಲಿದ್ದಾರೆ.
ಅಣ್ಣಯ್ಯ ಕುನಾಲ್ ಪರಿಚಯ: ಡಾ.ಅಣ್ಣಯ್ಯ ಕುನಾಲ್ ಉಡುಪಿ ಜಿಲ್ಲೆಯ ಕೋಟ ಬಳಿಯ ತೆಕ್ಕಟ್ಟೆಯಲ್ಲಿ ಜನಿಸಿದ್ದರು. ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಉಳ್ತೂರು ಮತ್ತು ಕೆದೂರು ಗ್ರಾಮಗಳಲ್ಲಿ, ಬಿಎಸ್ಸಿ ಪದವಿಯನ್ನು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ, ಎಂ.ಬಿ.ಬಿ.ಎಸ್ ಪದವಿಯನ್ನು ಕಸ್ತೂರಿ ಬಾ ಮೆಡಿಕಲ್ ಕಾಲೇಜಿನಲ್ಲಿ ಹಾಗೂ ಎಂಬಿಎ ಪದವಿಯನ್ನು ಅಲಗಪ್ಪ ವಿಶ್ವ ವಿದ್ಯಾಲಯದಿಂದ ಪಡೆದಿದ್ದಾರೆ.
ತಮ್ಮ ಪ್ರಾಥಮಿಕ ಮತ್ತು ಪದವಿ ವಿದ್ಯಾರ್ಥಿ ಜೀವನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಪಡೆದು ತನ್ನ ಸಮಾಜಮುಖಿ, ಜಾತ್ಯತೀತ ಚಿಂತನೆಯಿಂದ ಬಡವರ, ನೊಂದವರ, ನಿರ್ಗತಿಕರಿಗೆ ವೈದ್ಯಕೀಯ ಸೇವೆ ನೀಡುವ ಮೂಲಕ ಕರಾವಳಿ – ಮಲೆನಾಡು ಭಾಗವಲ್ಲದೇ ಇಡೀ ರಾಜ್ಯದಲ್ಲಿಯೇ ಉತ್ತಮ ವೈದ್ಯ ಹಾಗೂ ಸಮಾಜ ವಿಜ್ಞಾನಿ ಎಂದು ಗುರುತಿಸಿಕೊಂಡಿದ್ದಾರೆ.
ಇವರಿಗೆ ಡಾ.ಬಿ.ಸಿ.ರಾಯ್ ಜೀವಮಾನ ಸಾಧನೆ ಪ್ರಶಸ್ತಿ, ರಾಷ್ಟ್ರೀಯ ಐಎಂಎ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು, ಗೌರವ ಪುರಸ್ಕಾರಗಳು ದೊರೆತಿವೆ. ಶ್ರೀನಿವಾಸ್ ಯೂನಿವರ್ಸಿಟಿ ಹಾಗೂ ಶ್ರೀನಿವಾಸ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯರಾಗಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು, ಪ್ರಸ್ತುತ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ರಾಷ್ಟ್ರದ ಖ್ಯಾತ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಯರ್ ಸಂಬಂಧಿತ ಪ್ಯಾಲಿಯೇಟೀವ್ ವಿಭಾಗದಲ್ಲಿ ಬಡವರಿಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
