ಮೊಮ್ಮಗನನ್ನೇ ಕಿಡ್ನ್ಯಾಪ್‌ ಮಾಡಿದ ಅಜ್ಜ!

ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ.. ಹಣ ವಾಪಸ್​ ಪಡೆಯಲು ಅಜ್ಜನಿಂದಲೇ ಮೊಮ್ಮಗನ ಅಪಹರಣ

ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಕೊಟ್ಟ ಹಣ ವಾಪಸ್ ಪಡೆಯಲು ಮೊಮ್ಮಗನನ್ನು ಅಜ್ಜನೇ ಅಪಹರಣ ಮಾಡಿಸಿದ್ದ ಎನ್ನುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

ಕಾರವಾರ: ಭಟ್ಕಳದ ಬಾಲಕನ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊಟ್ಟ ಹಣ ವಾಪಸ್ ಪಡೆಯಲು ಸ್ವತಃ ಅಜ್ಜನೇ ಮೊಮ್ಮಗನನ್ನು ಅಪಹರಣ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದಲ್ಲಿರುವ ಬಾಲಕನ ಅಜ್ಜ ಇನಾಯತುಲ್ಲಾ ಮೊಮ್ಮಗನ ಕಿಡ್ನ್ಯಾಪ್​ಗೆ ಸ್ಕೆಚ್ ಹಾಕಿರುವ ಆರೋಪಿ. ಬಾಲಕನ ತಾಯಿಯ ಸಂಬಂಧಿಯಾಗಿರುವ ಇನಾಯತುಲ್ಲಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ಸೋಮವಾರ ಗೋವಾದ ಕಲ್ಲಂಗುಟ್​​ ಬೀಚ್ ಸಮೀಪ ಬಾಲಕ ಪತ್ತೆಯಾಗಿದ್ದಾನೆ. ಬಾಲಕನ ಜತೆಗಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಬದ್ರಿಯಾ ನಗರದ ನಿವಾಸಿ ಕೋಳಿ ಅಂಗಡಿ ನಡೆಸುತ್ತಿದ್ದ ಅನೀಸ್ ಭಾಷಾ ಬಂಧಿತ ಆರೋಪಿ. ಬಾಲಕನ ಅಜ್ಜನ ಸೂಚನೆಯಂತೆ ಅನೀಸ್ ಭಾಷಾ ತಂಡದೊಂದಿಗೆ ಕಿಡ್ನ್ಯಾಪ್ ಮಾಡಿದ್ದಾನೆ. ಪ್ರಕರಣದ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಎಸ್ಪಿ ಡಾ. ಸುಮನ್ ಪೆನ್ನೇಕರ್

ಏನಿದು ಪ್ರಕರಣ ?: ಭಟ್ಕಳದಲ್ಲಿ ಆಗಸ್ಟ್​ 20 ರಂದು ರಾತ್ರಿ ಅಂಗಡಿಗೆ ತೆರಳಿದ್ದ ಎಂಟು ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಲಾಗಿತ್ತು. ಒಟ್ಟು ನಾಲ್ವರು ಕಾರಿನಲ್ಲಿ ಬಂದು ಬಾಲಕನನ್ನು ಅಪಹರಿಸಿದ್ದರು. ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಮಧ್ಯರಾತ್ರಿ ಪ್ರಕರಣ ದಾಖಲಾಗಿತ್ತು. ಬಾಲಕನ ಹುಡುಕಾಟ ಹಾಗೂ ಆತನನ್ನು ಸುರಕ್ಷಿತವಾಗಿ ಕರೆತರಲು ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಡಾ. ಸುಮನ್ ಪೆನ್ನೇಕರ್ ಮಾತನಾಡಿ, ಬಾಲಕನ ಅಜ್ಜ ಸೇರಿ ಇನ್ನೂ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ. ಬಾಲಕನ ತಂದೆ ಮತ್ತು ಮಾವನ ನಡುವೆ ಹಣಕಾಸಿನ ವ್ಯವಹಾರವಿದ್ದು, ಇದೇ ಅಪಹರಣಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಈ ಹಿಂದೆ ಕೂಡ ಬಾಲಕನ ತಂದೆಗೆ ಬೆದರಿಕೆ ಹಾಕಲಾಗಿತ್ತು. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ನೀಡಿದರು.

ಅಪಹರಣಕ್ಕೆ ಒಳಗಾದ ಬಾಲಕನನ್ನು ಇಂದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆತಂದು ಮೆಡಿಕಲ್​ ಚೆಕ್ಅಪ್​ಗೆ ಒಳಪಡಿಸಲಾಯಿತು. ನಂತರ ಬಾಲಕನನ್ನು ಭಟ್ಕಳ ನಗರ ಠಾಣೆಗೆ ಕರೆ ತಂದು, ಡಿವೈಎಸ್ಪಿ ಕೆ ಯು ಬೆಳ್ಳಿಯಪ್ಪ ಅವರ ಮುಂದಾಳತ್ವದಲ್ಲಿ ಕುಟುಂಬದವರಿಗೆ ಒಪ್ಪಿಸಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *