

ಸಿದ್ದಾಪುರ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ತಾಲೂಕು ಆಡಳಿತ ತಾಲೂಕು ಪಂಚಾಯತ್ ಪಟ್ಟಣ ಪಂಚಾಯತ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ದಿವಂಗತ ಡಿ ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಭವನದಲ್ಲಿ ಆಚರಿಸಲಾಯಿತು
ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಸುರೇಶ್ ನಾಯ್ಕ ಉದ್ಘಾಟಿಸಿ ದೇವರಾಜ ಅರಸು ಅವರ ಜನ್ಮದಿನಾಚರಣೆಗೆ ಶುಭಕೋರಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪತ್ರಕರ್ತ ಕನ್ನೇಶ ಕೋಲಸಶಿರ್ಸಿ ದೇವರಾಜ ಅರಸು ಅವರು ಎಲ್ಲರನ್ನೂ ಸರಿಸಮಾನಾಗಿ ನೋಡಿದವರು ಪ್ರತಿಯೊಂದು ಕಾರ್ಯದಲ್ಲೂ ಬದ್ಧತೆ ಮತ್ತು ಸಿದ್ಧತೆ ಇತ್ತು ಅದಕ್ಕಾಗಿ ಅವರು ಎತ್ತರಕ್ಕೆ ಏರಿದರೂ ಅವರಲ್ಲಿ ಗೃಹಿಕೆ ಮತ್ತು ಚಾಟಿ ನೀಡುವ ವಿಶೇಶತೆ ಇತ್ತು. ಹಿಂದುಳಿದ ವರ್ಗಗಳ ಇಲಾಖೆಗಳ ಮೂಲಕ ಸಾವಿರಾರು ವಸತಿ ನಿಲಯಗಳನ್ನು ಆರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಅವರಿಂದ ಬೆಳೆದಿರುವಂತಹ ನಾಯಕರುಗಳಲ್ಲೂ ಕೂಡ ಇವರ ಗುಣಲಕ್ಷಣಗಳು ಕಂಡುಬರುತ್ತಿವೆ ಆ ಬದ್ಧತೆಯನ್ನು ಅವರು ಉಳಿಸಿಕೊಂಡಿದ್ದಾರೆ ಅವರ ಆದರ್ಶಗಳಲ್ಲಿ ನಾವು ಸಾಗೋಣ ಎಂದರು.
ಅತಿಥಿಯಾಗಿದ್ದ ಪಟ್ಟಣ ಪಂಚಾಯತ್ ಸದಸ್ಯ ನಂದನ್ ಬೋರ್ಕರ್ ದೇವರಾಜ ಅರಸು ಅವರು ತಮ್ಮ ಕಾಲಾವಧಿಯಲ್ಲಿ ಅತ್ಯುತ್ತಮವಾದ ಕಾರ್ಯಗಳನ್ನು ಮಾಡಿ ಮಾದರಿಯಾಗಿದ್ದಾರೆ ಅವರ ಆದರ್ಶಗಳಲ್ಲಿ ನಾವು ಸಾಗೋಣ ಎಂದರು.
ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುಮಾರ್ ನಾಯ್ಕ, ನಾಮನಿರ್ದೇಶಿತ ಸದಸ್ಯರುಗಳಾದ ಸುರೇಶ್ ನಾಯ್ಕ ಬಾಲಿ ಕೊಪ್ಪ, ಮಂಜು ಭಟ್ ಉಪಸ್ಥಿತರಿದ್ದರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.
ಕೆ. ಗಣಪತಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು .
ಬಾಲಕಿಯರ ನಿಲಯದ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ನಾಡಗೀತೆ ಮತ್ತು ರೈತ ಗೀತೆಗಳ ನ್ನು ಹಾಡಿದರು. ಕುಮಾರಿ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು ಹೆಗ್ಗರಣಿ ಬಾಲಕರ ವಸತಿ ನಿಲಯದ ಮೇಲ್ವಿಚಾರಕ ಶ್ರೀಧರ್ ವಿ.ನಾಯ್ಕ ವಂದಿಸಿದರು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿಗಳಿಂದ ಗೀತ ಗಾಯನ ಮತ್ತು ನೃತ್ಯ ಕಾರ್ಯಕ್ರಮ ನಡೆದವು.

