

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ.ಅವರಿಗೆ 45 ವರ್ಷ ವಯಸ್ಸಾಗಿತ್ತು.
ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ.ಅವರಿಗೆ 45 ವರ್ಷ ವಯಸ್ಸಾಗಿತ್ತು.

ಇಂದು ಬೆಳಗ್ಗೆ ಜಿಮ್ ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ನಿಧನರಾಗಿದ್ದಾರೆ.
ವಿವಿಧ ಪತ್ರಿಕೆ ಹಾಗೂ ಚಾನೆಲ್ ಗಳಲ್ಲಿ ಕೆಲಸ ಮಾಡಿರುವ ಗುರುಲಿಂಗ ಸ್ವಾಮಿ ಕಾರ್ಯ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿನಿಂದ ಅವರ ಮಾಧ್ಯಮ ಸಂಯೋಜಕರಾಗಿ ನಿರ್ವಹಿಸುತ್ತಿದ್ದರು.
