ಗುರುಲಿಂಗಸ್ವಾಮಿ ನಿಧನ, ಗಣ್ಯರ ಕಂಬನಿ

Thumbnail image

ಪತ್ರಕರ್ತ ಗುರುಲಿಂಗಸ್ವಾಮಿ ವಿಧಿವಶ.. ಪಾರ್ಥಿವ ಶರೀರದ ಮುಂದೆ ಕಣ್ಣೀರಿಟ್ಟ ಸಿಎಂ

ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಂಬನಿ ಮಿಡಿದಿದ್ದು, ಪಾರ್ಥಿವ ಶರೀರದ ದರ್ಶನದ ವೇಳೆ ಕಣ್ಣೀರು ಹಾಕಿದರು.

ಪಾರ್ಥಿವ ಶರೀರದ ಮುಂದೆ ಕಣ್ಣೀರಿಟ್ಟ ಸಿಎಂ

ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ಇಂದು ದೈವಾಧೀನರಾಗಿದ್ದು, ಅವರ ನಾಗರಬಾವಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನದವರೆಗೆ ಅವಕಾಶ ಕಲ್ಪಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಅಂತಿಮ ದರ್ಶನ ಪಡೆದರು. ಸಿಎಂಗೆ ಸಚಿವ ಮುನಿರತ್ನ, ಗೋಪಾಲಯ್ಯ, ಮುರುಗೇಶ್ ನಿರಾಣಿ ಸಾಥ್​ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗುರುಲಿಂಗಸ್ವಾಮಿ ನನ್ನ ಯುವ ಸ್ನೇಹಿತ. ಅವರ ಅಕಾಲಿಕ ಮರಣ ದುಃಖ ತಂದಿದೆ. ನನಗೆ ಅವರು 20 ವರ್ಷದಿಂದ ಪರಿಚಯ. ರಾಮದುರ್ಗದ ಹಳ್ಳಿಯವರು. ಕಷ್ಟಪಟ್ಟು ಓದಿ ಪಾಸ್ ಆಗಿ ಮಾಧ್ಯಮದಲ್ಲಿ ಕೆಲಸ ಪಡೆದುಕೊಂಡಿದ್ದರು. ಪತ್ರಿಕಾ ದಿನದ ಆರಂಭದ ದಿನದಿಂದ ನನಗೆ ಪರಿಚಯ. ಟಿ.ವಿ ಮಾಧ್ಯಮದಲ್ಲೂ ಕೆಲಸ ಮಾಡಿದ್ದರು.

ಅತ್ಯಂತ ಕ್ರಿಯಾಶೀಲ ಪತ್ರಕರ್ತ. ವರದಿಯ ನಿಖರತೆ ಪಡೆದುಕೊಂಡು ಮುಂದುವರೆಯುವ ಜವಾಬ್ದಾರಿಯುತ ಪತ್ರಕರ್ತ. ಅವನೊಬ್ಬನೇ ಬೆಳೆಯಲಿಲ್ಲ, ತನ್ನ ಜೊತೆ ಇತರರನ್ನೂ ಬೆಳೆಸಿದ್ದ. ಸಹಾಯ ಕೇಳಿ ಬಂದವರಿಗೆ ಇಲ್ಲ ಎನ್ನುತ್ತಿರಲಿಲ್ಲ. ಗೃಹ ಸಚಿವರಾಗಿದ್ದಾಗಿನಿಂದ ನನ್ನ ಜೊತೆ ಇದ್ದ. ಪ್ರತೀ ದಿನ ಹಲವರಿಗೆ ಸಹಾಯ ಮಾಡುತ್ತಿದ್ದ. ಸಿಎಂ ಫಂಡ್ ಫೈಲಿಗೆ ಸಹಿ ಹಾಕಿಸಿ ಸಹಾಯ ಮಾಡ್ತಿದ್ದ. ಕ್ರಿಯಾಶೀಲವಾಗಿದ್ದ ಎಂದು ಆತ್ಮೀಯತೆ ನೆನೆದರು.

ರಾಮದುರ್ಗದಲ್ಲಿ ಅಂತ್ಯಸಂಸ್ಕಾರ: ನಿನ್ನೆ ರಾತ್ರಿ ಎಂಟು ಗಂಟೆಗೆ ಮನೆಗೆ ಹೋಗ್ತೀನಿ ಅಂದ. ಬೆಳಗ್ಗೆ ಎದ್ದು ಇಂತಹ ಸುದ್ದಿ ಬರುತ್ತೆ ಅಂತ ಅನಿಸಿರಲಿಲ್ಲ. ಇದು ದುಃಖಕರ ಸಂಗತಿ. ನಾಗರಾಜ್ ಜಮಖಂಡಿ ಜೊತೆ ಜೊತೆಯಲ್ಲೇ ಇವನು ಹೋದ. ಪ್ರತೀ ವರ್ಷ ಜಮಖಂಡಿ ಅವರ ಕಾರ್ಯಕ್ರಮ ಇವನೇ ನಿಂತು ಮಾಡುತ್ತಿದ್ದ. ಅವನ ಕ್ರಿಯಾಶೀಲ ಇತರರಿಗೂ ಮಾದರಿಯಾಗಲಿ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದರು. ಗುರುಲಿಂಗಸ್ವಾಮಿ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ರಾಮದುರ್ಗದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುವುದು.

ಹೆಚ್. ಡಿ ಕುಮಾರಸ್ವಾಮಿ ಕಂಬನಿ: ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೋಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

  • ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಶ್ರೀ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು, ಸರಳತೆ ಸಜ್ಜನಿಕೆಯ ವ್ಯಕ್ತಿತ್ವದವರು. 1/2 pic.twitter.com/5tqfRHFNte— H D Kumaraswamy (@hd_kumaraswamy) August 22, 2022

ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು, ಸರಳತೆ ಸಜ್ಜನಿಕೆಯ ವ್ಯಕ್ತಿತ್ವದವರು ಹಾಗೂ ಅತ್ಯುತ್ತಮ ಪತ್ರಕರ್ತರಾಗಿದ್ದರು. ಗುರುಲಿಂಗಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ ಸಂತಾಪ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್​ನ ಹಲವು ನಾಯಕರು ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ತಮ್ಮ ಸಂತಾಪ ಸಂದೇಶದಲ್ಲಿ, ‘ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ ಗುರುಲಿಂಗಸ್ವಾಮಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು, ಸ್ನೇಹಿತರು, ಬಂಧುಗಳಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ.

ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ, ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿದ್ದ ಆತ್ಮೀಯ ಪತ್ರಕರ್ತ ಗುರುಲಿಂಗಸ್ವಾಮಿ ಹೋಳಿಮಠ ಅವರ ಅನಿರೀಕ್ಷಿತ ನಿಧನದಿಂದ ಆಘಾತಗೊಂಡಿದ್ದೇನೆ. ಒಂದೆರಡು ಬಾರಿ ನನ್ನನ್ನು ಸಂದರ್ಶಿಸಿದ್ದ ಗುರುಲಿಂಗ ಸ್ವಾಮಿಯವರ ವಿನಯವಂತಿಕೆ ನನಗೆ ಇಷ್ಟವಾಗಿತ್ತು. ಇವರ ಕುಟುಂಬದ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.

ಮನಸ್ಸಿಗೆ ಅತೀವ ದುಃಖವಾಯಿತು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್ ನಲ್ಲಿ, ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಜೊತೆಗೆ ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

  • ಸಿಎಂ @BSBommai ಅವರ ಮಾಧ್ಯಮ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು.

    ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಜೊತೆಗೆ ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ pic.twitter.com/euSkSNgKAA— Eshwar Khandre (@eshwar_khandre) August 22, 2022

ಆತ್ಮಕ್ಕೆ ಶಾಂತಿ ದೊರೆಯಲಿ: ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಟ್ವೀಟ್ ಮಾಡಿದ್ದು, ಹಿರಿಯ ಪತ್ರಕರ್ತರು, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೋಳಿಮಠ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ಕೋರುತ್ತೇನೆ ಎಂದು ಹೇಳಿದ್ದಾರೆ.

  • ಹಿರಿಯ ಪತ್ರಕರ್ತರು, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಶ್ರೀ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ಕೋರುತ್ತೇನೆ. pic.twitter.com/klJ2PRtpIn

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *