ಜಾರಕಿಹೊಳಿ ವಿರುದ್ಧ ಸಂಘದ ತಂತ್ರ,ಬಿ.ಜೆ.ಪಿ. ರಣತಂತ್ರ!

ಆರ್ ಎಸ್ಎಸ್ ವಿರೋಧಿ ಪುಸ್ತಕ ಪ್ರಕಟಿಸಿದ ಸತೀಶ್ ಜಾರಕಿಹೊಳಿ ಸೋಲಿಸಲು ಬಿಜೆಪಿ, ಸಂಘ ರಣತಂತ್ರ!

2023ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಿಂದ ಕೆಲವು ಪ್ರಮುಖ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ. ಆದರೆ ಅವರನ್ನೇ ಸೋಲಿಸಲು ಆರೆಸ್ಸೆಸ್…

Satish Jarkiholi

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಿಂದ ಕೆಲವು ಪ್ರಮುಖ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ. ಆದರೆ ಅವರನ್ನೇ ಸೋಲಿಸಲು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕತ್ವ ತಂತ್ರ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.

ಯಮಕನಮರಡಿ ಕ್ಷೇತ್ರದಲ್ಲಿ ರಾಜಕೀಯವಾಗಿ ಪ್ರಭಾವಿಯಾಗಿರುವ ಗೋಕಾಕದ ಜಾರಕಿಹೊಳಿ ಕುಟುಂಬವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ.

ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಸ್ಥಾಪಿಸಿದ ಮಾನವ ಬಧುತ್ವ ವೇದಿಕೆ(ಎಂಬಿವಿ) ಖ್ಯಾತ ಬರಹಗಾರ ದೇವನೂರು ಮಹದೇವ್ ಅವರು ಬರೆದ ಆರ್‌ಎಸ್‌ಎಸ್ ವಿರೋಧಿ ಪುಸ್ತಕ ‘ಆರ್‌ಎಸ್‌ಎಸ್ ಉದ್ದ ಅಗಲ’ವನ್ನು ಪ್ರಕಟಿಸಿದ ನಂತರ ಯಮಕನಮರಡಿ ಶಾಸಕರ ವಿರುದ್ಧ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕತ್ವದ ಒಂದು ಭಾಗ ಕೆರಳಿ ಕೆಂಡವಾಗಿದೆ.

‘ಪುಸ್ತಕಕ್ಕೆ ಓದುಗರಿಂದ ಅಭೂತಪೂರ್ವ ಪ್ರತಿಕ್ರಿಯೆ ಬಂದ ನಂತರ ಜಾರಕಿಹೊಳಿ ಅವರನ್ನು ಹತ್ತಿಕ್ಕಲು ಆರ್‌ಎಸ್‌ಎಸ್‌ ಪಡೆ ಸಿದ್ಧವಾಗಿದೆ’ ಎಂದು ಮೂಲಗಳು ತಿಳಿಸಿದ್ದು, ಜಾರಕಿಹೊಳಿ ಅವರನ್ನು ಯಮಕನಮರಡಿಯಲ್ಲಿ ಸೋಲಿಸಲು ಬಿಜೆಪಿ ನಾಯಕತ್ವ ನಿರ್ಧರಿಸಿದೆ.

ಮುಂಬೈ-ಕರ್ನಾಟಕದಲ್ಲಿ ಹಲವಾರು ಅಭ್ಯರ್ಥಿಗಳನ್ನು ಸೋಲಿಸಲು ಜಾರಕಿಹೊಳಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಕಾಂಗ್ರೆಸ್ ಉತ್ಸುಕವಾಗಿದ್ದು, ಆದರೆ ಅವರನ್ನು ಯಮಕನಮರಡಿಗೆ ಸೀಮಿತಗೊಳಿಸಲು ಬಿಜೆಪಿ ನಾಯಕತ್ವ ಯೋಜಿಸುತ್ತಿದೆ. 

ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಉಮೇಶ್ ಕತ್ತಿ, ಮತ್ತು ಬೆಳಗಾವಿ ಭಾಗದ ಹಲವಾರು ಬಿಜೆಪಿ ಶಾಸಕರು ಜಾರಕಿಹೊಳಿ ಅವರನ್ನು ಗುರಿಯಾಗಿಸಿಕೊಂಡು ಯಮಕನಮರಡಿಯಲ್ಲಿ ಬಿಜೆಪಿಯನ್ನು ಬಲಪಡಿಸುವ ನಿರೀಕ್ಷೆಯಿದೆ,” ಎಂದು ಮೂಲಗಳು ತಿಳಿಸಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *